• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶದ ಸಂವಿಧಾನ ಐಕ್ಯತೆ, ಗಾಂಧೀಜಿ ಹಾಗೂ ಅಂಬೇಡ್ಕರ್ ತತ್ವ ರಕ್ಷಣೆಗೆ ಐತಿಹಾಸಿಕ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
January 20, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

“ದೇಶದ ಸ್ವಾತಂತ್ರ್ಯ, ಸಂವಿಧಾನ, ಐಕ್ಯತೆ, ಗಾಂಧಿ ತತ್ವ, ಅಂಬೇಡ್ಕರ್ ಅವರ ನೀತಿ ರಕ್ಷಣೆ ಮಾಡಲು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ADVERTISEMENT

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸಮಾವೇಶದ ತಯಾರಿ ಪರಿಶೀಲನೆ ಬಳಿಕ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದರು.

“ಬೆಳಗಾವಿಯಲ್ಲಿ ಐತಿಹಾಸಿಕ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಎಐಸಿಸಿ ನಾಯಕರು ಈ ಸಮಾವೇಶಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂದು ಹೆಸರಿಟ್ಟಿದ್ದಾರೆ. ಸಂವಿಧಾನ, ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ತತ್ವ ಸಿದ್ಧಾಂತದ ಬಗ್ಗೆ ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡಲಾಗುವುದು” ಎಂದು ತಿಳಿಸಿದರು.

“ಇದು ಕೇವಲ ಕಾಂಗ್ರೆಸ್ ಕಾರ್ಯಕ್ರಮವಲ್ಲ. ಇದು ದೇಶದ ಕಾರ್ಯಕ್ರಮ. ಕಾಂಗ್ರೆಸ್ ಪಕ್ಷ, ಗಾಂಧೀಜಿ, ಅಂಬೇಡ್ಕರ್, ಸಂವಿಧಾನದ ಆದರ್ಶ, ತತ್ವ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟಿರುವ ಯಾರು ಬೇಕಾದರೂ ಈ ಸಮಾವೇಶಕ್ಕೆ ಆಗಮಿಸಬಹುದು. ಈ ಸಮಾವೇಶದಲ್ಲಿ ಭಾಗವಹಿಸಿ ನೀವೆಲ್ಲರೂ ಇತಿಹಾಸದ ಪುಟಕ್ಕೆ ಸೇರಬೇಕು” ಎಂದು ತಿಳಿಸಿದರು.

“ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸವ ಆಚರಣೆ ಸಮಯದಲ್ಲಿ ನಮ್ಮದೇ ರಾಜ್ಯದ ನಾಯಕರಾದ, ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ಎಐಸಿಸಿ ಅಧ್ಯಕ್ಷ ಸ್ಥಾನದವರೆಗೆ ಏರಿರುವ ಮಲ್ಲಿಕಾರ್ಜುನ ಖರ್ಗೆ ಅವರು ಆ ಸ್ಥಾನದಲ್ಲಿ ಕೂತಿರುವುದು ವಿಶೇಷ. ಇವರ ಜತೆಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ” ಎಂದರು.

“ಸುವರ್ಣಸೌಧದಲ್ಲಿ ವಿಶೇಷವಾದ ಗಾಂಧಿ ಪ್ರತಿಮೆ ನಿರ್ಮಿಸಲಾಗಿದ್ದು ಇದರ ಅನಾವರಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ನಾಯಕರಿಗೆ ಆಹ್ವಾನ ನೀಡಲಾಗಿದೆ” ಎಂದು ತಿಳಿಸಿದರು.

ಗಾಂಧಿ ಭಾರತ ಅಂಗವಾಗಿ ಅನೇಕ ಕಾರ್ಯಕ್ರಮ:

ಗಾಂಧಿ ಭಾರತ ಹಿನ್ನೆಲೆಯಲ್ಲಿ ಹೊಸದಾದ ಕಾರ್ಯಕ್ರಮ ಘೋಷಣೆ ಮಾಡಿತ್ತೀರಾ ಎಂದು ಕೇಳಿದಾಗ, “ನಮ್ಮ ನಾಯಕರಾದ ಹೆಚ್. ಕೆ ಪಾಟೀಲ್, ವೀರಪ್ಪ ಮೊಯ್ಲಿ, ಬಿ.ಎಲ್ ಶಂಕರ್, ಮುನಿಯಪ್ಪ, ರೆಹಮಾನ್ ಖಾನ್ ಅವರ ನೇತೃತ್ವದ ಸಮಿತಿ ನಮಗೆ ಅನೇಕ ಕಾರ್ಯಕ್ರಮಗಳ ಬಗ್ಗೆ ಸಲಹೆ ನೀಡಿದ್ದಾರೆ. ಶಾಲಾ ಕಾಲೇಜುಗಳಿಂದ ಬೇರೆ ಬೇರೆ ಕಡೆಗಳಲ್ಲಿ ಇದನ್ನು ಆಚರಿಸಲು ಸೂಚಿಸಿದ್ದಾರೆ. ಮುಖ್ಯಮಂತ್ರಿಗಳು ಇದಕ್ಕಾಗಿ ಬಜೆಟ್ ನಲ್ಲಿ ಹಣ ಇಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಡೀ ವರ್ಷ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ತಿಳಿಸಲಾಗುವುದು” ಎಂದು ತಿಳಿಸಿದರು.

ಬೆಳಗಾವಿಗೆ ವಿಶೇಷ ಕೊಡುಗೆ ನೀಡುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿ ನೀಡುತ್ತೇವೆ. ಇಡೀ ದೇಶ ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿಯತ್ತ ತಿರುಗಿ ನೋಡುತ್ತಿದೆ. ಅಂದೇ ಕಾಂಗ್ರೆಸ್ ದೇಶಕ್ಕೆ ಬೆಳಗಾವಿ ಪರಿಚಯಿಸಿದ್ದು, ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ” ಎಂದರು.

ಸಚಿವ ಸಂಪುಟ ವಿಸ್ತರಣೆ ಆದರೆ ಬೆಳಗಾವಿಗೆ ಮತ್ತೊಂದು ಸಚಿವ ಸ್ಥಾನ ನೀಡುತ್ತೀರಾ ಎಂದು ಕೇಳಿದಾಗ, “ಬೆಳಿಗ್ಗೆ ಉಪಹಾರ ಕೂಟದಲ್ಲಿ ಈ ವಿಚಾರ ಚರ್ಚೆ ಮಾಡುತ್ತೇನೆ” ಎಂದರು.

ಶೋಕಾಚಾರಣೆ ಹಿನ್ನೆಲೆಯಲ್ಲಿ ದೀಪಾಲಂಕಾರ ಸ್ಥಗಿತ

ಬೆಳಗಾವಿಯಲ್ಲಿ ದೀಪಾಲಂಕಾರ ಇನ್ನು ಕೆಲಕಾಲ ಮುಂದುವರಿಸಬೇಕಿತ್ತು ಎಂದು ಕೇಳಿದಾಗ, “ಹೊಸವರ್ಷದ ಮೊದಲ ವಾರದವರೆಗೂ ಮುಂದುವರಿಸಲು ಆಲೋಚನೆ ಇತ್ತು, ಶೋಕಾಚಾರಣೆ ಇದ್ದ ಕಾರಣ ಅದನ್ನು ಸ್ಥಗಿತಗೊಳಿಸಲಾಯಿತು. ದೇಶದ ಮಾಜಿ ಪ್ರಧಾನಮಂತ್ರಿಗೆ ನಾವು ಗೌರವ ನೀಡಲೇಬೇಕು” ಎಂದು ತಿಳಿಸಿದರು.

Tags: BelagaviBJPCongress PartyDK ShivakumarDr B R AmbedkarGandhijiH K PatilsiddaramaiahVeerappa Mohliಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕರ್ನಾಟಕದಿಂದ ಪ್ರಾರಂಭವಾಯಿತು ಬಹು ನಿರೀಕ್ಷಿತ “ಕಣ್ಣಪ್ಪ” ಚಿತ್ರದ ಪ್ರಚಾರ ..

Next Post

ಸಿದ್ದರಾಮಯ್ಯ ಮುಂದೆ ಇರುವುದೇ 2 ಆಯ್ಕೆ!

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಸಿದ್ದರಾಮಯ್ಯ ಮುಂದೆ ಇರುವುದೇ 2 ಆಯ್ಕೆ!

ಸಿದ್ದರಾಮಯ್ಯ ಮುಂದೆ ಇರುವುದೇ 2 ಆಯ್ಕೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada