ಅಮೆರಿಕದ 47ನೇ ಅಧ್ಯಕ್ಷರಾಗಿ ಇಂದು ಡೊನಾಲ್ಡ್ ಟ್ರಂಪ್ (Donald trump) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ವಾಷಿಂಗ್ಟನ್ ಡಿಸಿಯ (Washington DC) ಕ್ಯಾಪಿಟಲ್ನಲ್ಲಿ ನಡೆಯುತ್ತಿರೋ ಐತಿಹಾಸಿಕ ಸಮಾರಂಭದಲ್ಲಿ ಟ್ರಂಪ್ ಪ್ರಮಾಣವಚನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಇನ್ನು ಟ್ರಂಪ್ ಅವರ ಪ್ರಮಾಣವಚನ ಸಮಾರಂಭ, 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತಾಗ, ಬೆಂಬಲಿಗರು ದಾಳಿ ಮಾಡಿದ್ದ ಸ್ಥಳದಲ್ಲಿಯೇ ನಡೆಯುತ್ತಿರುವುದು ಗಮರ್ಹವಾಗಿದೆ.

ಈ ಕಾರ್ಯಕ್ರಮದಲ್ಲಿ ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್, ಟ್ರಂಪ್ ಪ್ರಮಾಣ ವಚನ ಬೋಧಿಸಲಿದ್ದಾರೆ.ಇನ್ನು ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಿಯಾಗಿದ್ದಾರೆ.ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನ ಪ್ರತಿನಿಧಿಸಿದ್ದಾರೆ.
ಇವತ್ತಿನ್ನ ಈ ಕಾರ್ಯಕ್ರಮದಲ್ಲಿ ಹಲವು ದೇಶದ ಗಣ್ಯರು ಭಾಗಿಯಾಗಲಿದ್ದು,ಅರ್ಜೆಂಟೀನಾ, ಇಟಲಿ, ಎಲ್ ಸಾಲ್ವಡಾರ್, ಹಂಗೇರಿ ಮತ್ತು ಚೀನಾ ಸೇರಿದಂತೆ ಹಲವು ರಾಷ್ಟ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಭಾಗಿಯಾಗಲಿದ್ದಾರೆ.