ಹಾಸನದಲ್ಲಿ (Hasan ) ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದ್ದು 6 ಜಾನುವಾರುಗಳ ರಕ್ಷಣೆ ಮಾಡಲಾಗಿದೆ. ಹಾಸನ ತಾಲೂಕಿನ ಗಾಡೇನಹಳ್ಳಿ ಗ್ರಾಮದ ಬಳಿ ಘಟನೆ ಬೆಳಕಿಗೆ ಬಂದಿದೆ.

ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth kerehalli) ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಶಾಂತಿಗ್ರಾಮ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದು, ಹಸುಗಳನ್ನು ರಕ್ಷಿಸಿದ್ದಾರೆ.

ಈ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ ಎಂದು ಆರೋಪ ಕೇಳಿಬಂದ ಹಿನ್ನಲೆ, ಕಾರ್ಯಾಚರಣೆಗೆ ಮುಂದಾದ ಶಾಂತಿಗ್ರಾಮ ಪೊಲೀಸರು ಆರು ಜಾನುವಾರಗಳನ್ನು ರಕ್ಷಣೆ ಮಾಡಿದ್ದಾರೆ.