• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಾಯಿ ಮಕ್ಕಳ ಮರಣ ಪ್ರಮಾಣ ಕಡಿಮೆಗೊಳಿಸಲು ದಿನದ 24 ಗಂಟೆಯೂ ತಜ್ಞ ವೈದ್ಯರ ಸೇವೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
January 22, 2025
in Top Story, ದೇಶ, ರಾಜಕೀಯ
0
ತಾಯಿ ಮಕ್ಕಳ ಮರಣ ಪ್ರಮಾಣ ಕಡಿಮೆಗೊಳಿಸಲು ದಿನದ 24 ಗಂಟೆಯೂ ತಜ್ಞ ವೈದ್ಯರ ಸೇವೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Share on WhatsAppShare on FacebookShare on Telegram

ಆಸ್ಪತ್ರೆಯಲ್ಲಿ ಕರ್ತವ್ಯ ಸ್ಥಳದಲ್ಲಿರದಿದ್ದರೇ ವೈದ್ಯರ ಮೇಲೆ ಶಿಸ್ತು ಕ್ರಮ

ADVERTISEMENT

ರಾಯಚೂರಿನಲ್ಲಿ ಗರ್ಭಿಣಿಯರ ಆರೋಗ್ಯ ತಪಾಸಣೆ ಶಿಬಿರಕ್ಕೆ ಉತ್ತಮ ಸ್ಪಂದನೆ

ರಾಜ್ಯದಲ್ಲಿ ತಾಯಿ‌ ಮಗುವಿನ ಮರಣ ಪ್ರಮಾಣವನ್ನ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮಾತೃತ್ವ ಸುರಕ್ಷಾ ಅಭಿಯಾನಕ್ಕೆ ರಾಯಚೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಅಭಿಯಾನದ ಮೂಲಕ ಪ್ರತಿ ತಿಂಗಳು 9 ಮತ್ತು 24 ರಂದು ಎರಡು ಬಾರಿ ಗರ್ಭಿಣಿಯರ ಆರೋಗ್ಯ ತಪಾಸಣೆ ನಡೆಯಲಿದ್ದು, ರಾಜ್ಯಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಅಭಿಯಾನ ನಡೆಯಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿ ತಾಯಿ ಮುಗುವಿನ ಮರಣ ಪ್ರಮಾಣ ಲಕ್ಷಕ್ಕೆ 64 ಇದೆ. ಇದನ್ನ ಶೂನ್ಯಕ್ಕೆ ತರಬೇಕು. ಆದರೆ ಕೆಲವು ವೈದ್ಯಕೀಯ ಕಾರಣಗಳಿಂದ ಸಾವುಗಳು ಸಂಭವಿಸುತ್ತವೆ. ಸಾವಾಗದಂತೆ ತಡೆಯಲು ಸಾಧ್ಯವಿರುವ ಪ್ರಕರಣಗಳ ವಿಚಾರದಲ್ಲಿ ನಾವು ಹೆಚ್ಚು ಒತ್ತು ನೀಡಿ ತಾಯಿ ಮಗುವಿನ ಮರಣ ಪ್ರಮಾಣವನ್ನ ಕಡಿಮೆಗೊಳಿಸಬಹುದಾಗಿದೆ.
ಈ ಗುರಿಯೊಂದಿಗೆ ಮಾತೃತ್ವ ಸುರಕ್ಷಾ ಅಭಿಯಾನವನ್ನ ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಕೈಗೊಳ್ಳಲು ಮುಂದಾಗಿದ್ದೇವೆ.. ರಾಯಚೂರಿನಲ್ಲಿ ತಾಯಿ ಮಗುವಿನ ಮರಣ ಪ್ರಮಾಣ ಹೆಚ್ಚಿರುವುದರಿಂದ ಇಲ್ಲಿಂದಲೇ ಅಭಿಯಾನ ಆರಂಭಿಸುತ್ತಿರುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

ಗರ್ಭಿಣಿಯರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಆದ್ಯತೆ ನೀಡಲಾಗುವುದು. ದಿನದ 24 ಗಂಟೆಯೂ ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರಿಗೆ ತಜ್ಞ ವೈದ್ಯರ ಸೇವೆ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿ ಒಬ್ಬರು ಸ್ತ್ರೀರೋಗ ತಜ್ಞರ ಬದಲಿಗೆ ಇಬ್ಬರು ತಜ್ಞ ವೈದ್ಯರನ್ನ ನೇಮಿಸಲು ಕ್ರಮ ವಹಿಸಲಾಗುತ್ತಿದೆ. ಹೀಗಾಗಿ ರಾತ್ರಿ ವೇಳೆಯಲ್ಲಿಯೂ ಗರ್ಭಿಣಿಯರಿಗೆ ತಜ್ಞ ವೈದ್ಯರ ಆರೋಗ್ಯ ಸೇವೆ ಲಭ್ಯವಾಗಲಿದೆ. ಯಾರೇ ವೈದ್ಯೆರು ತಮ್ಮ ಕರ್ತವ್ಯ ಸ್ಥಳದಲ್ಲಿರದಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಇನ್ನು ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಗರ್ಭಿಣಿಯರು ANC ನೊಂದಣಿ ಮಾಡಿಸಿಕೊಂಡು ಉಚಿತ ತಪಾಸಣೆ ಹಾಗೂ ಔಷಧಿಗಳನ್ನ ಪಡೆಯಬಹುದು. ತಪಾಸಣೆ ವೇಳೆ ಗರ್ಭಿಣಿಯರ ಸ್ಕ್ಯಾನಿಂಗ್ ಸೇರಿದಂತೆ ಇಸಿಜಿ ಟೆಸ್ಟಿಂಗ್ ಕೂಡ ಮಾಡಿಸಲಾಗುವುದು. ಅಪಾಯದಲ್ಲಿರುವ ಗರ್ಭಿಣಿಯರಿಗೆ ಸೂಕ್ತ ಚಿಕಿತ್ಸೆಯ ಸಲಹೆಯ ಜೊತೆಗೆ ಗರ್ಭಿಣಿಯರ ಆರೋಗ್ಯ ಸ್ಥಿತಿ ಕುರಿತು ಆಗಾಗ ಟ್ರ್ಯಾಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದರು.

ರಾಯಚೂರಿನಲ್ಲಿ ನಡೆದ ಮಾತೃತ್ವ ಸುರಕ್ಷಾ ಅಭಿಯಾನದಲ್ಲಿ 700 ಕ್ಕೂ ಹೆಚ್ಚು ಗರ್ಭಿಣಿಯರು ಪಾಲ್ಗೊಂಡು ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಿಕೊಂಡರು.
ಮುನ್ನೆಚ್ಚರಿಕೆ, ಪೌಷ್ಟಿಕ ಆಹಾರ ಸೇವನೆ ಕುರಿತಂತೆ ತಜ್ಞ ವೈದ್ಯರು ಗರ್ಭಿಣಿಯರಿಗೆ ಸೂಕ್ತ ಸಲಹೆ ಸೂಚನೆ ನೀಡಿದರು. ರಕ್ತದೊತ್ತಡ, ಮಧುಮೇಹ ಸೇರಿ ಅನೇಕ ಸಮಸ್ಯೆಗಳನ್ನ ಹೊಂದಿರುವ ಗರ್ಭಿಣಿಯರನ್ನ ಆರಂಭದಲ್ಲೇ ಪತ್ತೆ ಹಚ್ಚುವಲ್ಲಿ ಆರೋಗ್ಯ ಶಿಬಿರ ಹೆಚ್ಚು ಸಹಕಾರಿಯಾಗಿದ್ದು, ಗರ್ಭಿಣಿಯರ ಅಪಾಯದ ಸ್ಥಿತಿ ತಲುಪದಂತೆ ಮುನ್ನೆಚ್ಚಿರಿಕೆ ವಹಿಸುವ ನಿಟ್ಟಿನಲ್ಲಿ ಈ ರೀತಿಯ ಶಿಬಿರಗಳು ಹೆಚ್ವು ಅನುಕೂಲಕರವಾಗಿವೆ.

ರಾಯಚೂರಿಗೆ 8 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು,
ಮಾನ್ವಿಯಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ
ರಾಯಚೂರು ನಗರದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪನೆಯಾಗಲಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅಲ್ಲದೇ
ಜಿಲ್ಲೆಯ ಒಂದು ತಾಲೂಕಿಗೆ 200 ಹಾಸಿಗೆ ಸಬ್ ಡಿವಿಷನ್ ಆಸ್ಪತ್ರೆಗೆ ಯೋಜನೆ ರೂಪಿಸಿದ್ದೇವೆ ಎಂದರು.

Tags: ಸಚಿವ ದಿನೇಶ್ ಗುಂಡೂರಾವ್
Previous Post

ದೊಡ್ಮನೆ ಎಸ್ ಎ ಸಹೋದರರಿಂದ ಅನಾವರಣವಾಯಿತು “ಭಗೀರಥ” ಚಿತ್ರದ ಹಾಡಗಳು. .

Next Post

ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಕ್ರಮ : ಸಚಿವ ಜಾರ್ಜ್‌

Related Posts

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
0

ಬಹು ನಿರೀಕ್ಷಿತ ಈ ಚಿತ್ರ ಗಣಪತಿ ಹಬ್ಬದ ವೇಳೆ ತೆರೆಗೆ ಜುಲೈ 4 ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Dynamic Prince Prajwal Devaraj) ಅವರ ಹುಟ್ಟುಹಬ್ಬ....

Read moreDetails

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
Next Post
ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಕ್ರಮ : ಸಚಿವ ಜಾರ್ಜ್‌

ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕಕ್ಕೆ ಕ್ರಮ : ಸಚಿವ ಜಾರ್ಜ್‌

Recent News

Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!