ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಸದ್ಯ ಜಾಮೀನಿನ ಮೇಲೆ ಹೊರಗಿರುವ ದರ್ಶನ್ (Actor darshan) ಮತ್ತು ಉಳಿದ ಆರೋಪಿಗಳು ಮತ್ತೊಂದು ಅಗ್ನಿ ಪರೀಕ್ಷೆಗೆ ಒಳಪಡಬೇಕಿದೆ. ಸುಪ್ರೀಂ ಕೋರ್ಟ್‌ನಲ್ಲಿ (Supreme court) ಇಂದು A2 ನಟ ದರ್ಶನ್, A1 ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಹೈಕೋರ್ಟ್ ಕಳೆದ ತಿಂಗಳು ಜಾಮೀನು ಮಂಜೂರು ಮಾಡಿದೆ. ಆದ್ರೆ, ಜಾಮೀನು ರದ್ದು ಕೋರಿ ವಕೀಲ ಅನಿಲ್ ನಿಶಾನಿ ಮೂಲಕ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿತ್ತು.
ಈ ಮೇಲ್ಮನವಿ ಸಂಬಂಧ ಸುಪ್ರೀಂ ಕೋರ್ಟ್‌ಗೆ 1492 ಪುಟಗಳ ಸಂಪೂರ್ಣ ಕಡತ ಸಲ್ಲಿಕೆ ಮಾಡಿದ್ದು, ಇಂದು ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಉಳಿದ ಆರೋಪಿಗಳ ಬೇಲ್ ಭವಿಷ್ಯ ಇಂದು ನಿರ್ಧಾರವಾಗಲಿದೆ.