
ಭಾರತದ 76ನೇ ವರ್ಷದ ಸಂವಿಧಾನ ಹಬ್ಬಕ್ಕೆ ಇಡೀ ದೇಶವೇ ಸಜ್ಜಾಗಿದೆ. ಸುವರ್ಣ ಭಾರತ – ಪರಂಪರೆ ಮತ್ತು ಅಭಿವೃದ್ಧಿ ಘೋಷವಾಕ್ಯದಡಿ ಗಣರಾಜ್ಯೋತ್ಸವ 2025 ಆಚರಣೆ ಆಗ್ತಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಿರಂತರ ಪ್ರಗತಿಯ ಪ್ರಯಾಣವನ್ನು ಪ್ರತಿಬಿಂಬಿಸಲು ರಾಷ್ಟ್ರ ರಾಜಧಾನಿ ದೆಹಲಿ ಸಜ್ಜಾಗಿದೆ. ಭಾರತದ 76ನೇ ವರ್ಷದ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ.
ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಗೇಟ್ನಲ್ಲಿರುವ ಅಮರ್ ಜವಾನ್ ಸ್ಮಾರಕದಲ್ಲಿ ಜ್ಯೋತಿ ಬೆಳಗಿಸಲಿದ್ದಾರೆ.. ಆ ಬಳಿಕ ಬೆಳಗ್ಗೆ 9 ಗಂಟೆಗೆ ದೆಹಲಿಯ ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಲಿದ್ದಾರೆ. ಸುಮಾರು 10 ಸಾವಿರ ಸಾಧಕರು ಸೇರಿದಂತೆ ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ 10.30ಕ್ಕೆ ಭೂಸೇನೆ, ನೌಕಾಪಡೆ ಮತ್ತು ವಾಯುಸೇನೆಯ 40 ವಿಮಾನಗಳ ಶಕ್ತಿ ಪ್ರದರ್ಶನ ನಡೆಯುತ್ತದೆ. ಆಗಸದಲ್ಲಿ ಫೈಟರ್ ಜೆಟ್‌ಗಳು ಮತ್ತು ಹೆಲಿಕಾಪ್ಟರ್‌ಗಳ ಕಸರತ್ತು ಆಗುತ್ತದೆ. ಆ ಬಳಿಕ ಭಾರತದ ಎಲ್ಲಾ ರಾಜ್ಯಗಳ ಸಾಂಸ್ಕೃತಿ ಬಿಂಬಿಸುವ ಟ್ಯಾಬ್ಲೋಗಳ ಮೆರವಣಿಗೆ ನಡೆಯಲಿದೆ.
2025 ರ ಗಣರಾಜ್ಯೋತ್ಸವ ಪರೇಡ್ನಲ್ಲಿ 11 ಕೇಂದ್ರ ಸರ್ಕಾರಿ ತುಕಡಿಗಳು, ಆಂಧ್ರಪ್ರದೇಶ, ಬಿಹಾರ, ಚಂಡೀಗಢ, ಗೋವಾ, ಗುಜರಾತ್, ಹರಿಯಾಣ, ಜಾರ್ಖಂಡ್ ಸೇರಿ 15 ರಾಜ್ಯಗಳ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯುತ್ತದೆ.. ಪ್ರಮುಖವಾಗಿ 2 ವರ್ಷಗಳ ಬಳಿಕ ನಮ್ಮ ಕರ್ನಾಟಕದ ಹೆಮ್ಮೆಯ ಲಕ್ಕುಂಡಿಯ ಬ್ರಹ್ಮ ಜಿನಾಲಯ ಟ್ಯಾಬ್ಲೋ ಕರ್ತವ್ಯ ಪಥದಲ್ಲಿ ಸಾಗಲಿದೆ..

ಇಂಡೋನೇಷ್ಯಾ ಅಧ್ಯಕ್ಷರಿಗೆ ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇನಾಗೌರವ ನೀಡಿ ಸತ್ಕರಿಸಿದ್ದಾರೆ. ಗಣರಾಜ್ಯೋತ್ಸವ ಅತಿಥಿಯಾಗಿ ಬಂದಿರುವ ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ. ಜೊತೆಗೆ ಭಾರತ ಮತ್ತು ಇಂಡೋನೇಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಒಪ್ಪಂದ, ವೈದ್ಯಕೀಯ ಮತ್ತು ಔಷಧ ವಿನಿಮಯ ಹಾಗು ರಕ್ಷಣಾ ವಲಯದ ವಿಚಾರಗಳ ಬಗ್ಗೆ ಉಭಯ ರಾಷ್ಟ್ರಗಳು ಒಡಂಡಿಕೆ ಮಾಡಿಕೊಂಡಿವೆ.






