• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿಲ್ಲಾ ಮಟ್ಟದ 8ನೇ ಜನತಾದರ್ಶನ; 200 ಅಹವಾಲು ಸ್ವೀಕಾರ ನಿರಂತರ ಐದು ಗಂಟೆಗಳ ಕಾಲ ಜನರ ಅಹವಾಲು ಆಲಿಸಿ, ಅರ್ಜಿ ಸ್ವೀಕರಿಸಿದ ಸಚಿವ ಸಂತೋಷ ಲಾಡ್‌

ಪ್ರತಿಧ್ವನಿ by ಪ್ರತಿಧ್ವನಿ
January 27, 2025
in Top Story, ಇದೀಗ, ದೇಶ, ರಾಜಕೀಯ
0
ಜಿಲ್ಲಾ ಮಟ್ಟದ 8ನೇ ಜನತಾದರ್ಶನ; 200 ಅಹವಾಲು ಸ್ವೀಕಾರ ನಿರಂತರ ಐದು ಗಂಟೆಗಳ ಕಾಲ ಜನರ ಅಹವಾಲು ಆಲಿಸಿ, ಅರ್ಜಿ ಸ್ವೀಕರಿಸಿದ ಸಚಿವ ಸಂತೋಷ ಲಾಡ್‌
Share on WhatsAppShare on FacebookShare on Telegram

ಪರಿಹಾರದ ಭರವಸೆಯೊಂದಿಗೆ ಬರುವ ಜನರಿಗೆ ನಿರಾಸೆ ಮೂಡಿಸಬೇಡಿ

ADVERTISEMENT

ಧಾರವಾಡ, ಜ.27: ಜನತಾದರ್ಶನಕ್ಕೆ ಪರಿಹಾರದ ಭರವಸೆಯೊಂದಿಗೆ ಸಾರ್ವಜನಿಕರು ಬಂದಿರುತ್ತಾರೆ. ಅವರಿಗೆ ನಿರಾಸೆ ಮೂಡಿಸದೆ ಸಾಧ್ಯವಾದಷ್ಟು ಸ್ಥಳದಲ್ಲಿ ಅವರ ಸಮಸ್ಯೆ ಪರಿಹರಿಸಬೇಕು. ಅಗತ್ಯವಿದ್ದಲ್ಲಿ ಸರಕಾರಕ್ಕೆ ಶಿಫಾರಸ್ಸು ಮಾಡಲು ಕ್ರಮವಹಿಸಬೇಕು ಎಂದು
ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.

ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 8ನೇ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಪ್ರತಿ ಇಲಾಖೆ ಅಧಿಕಾರಿಗಳು ಸಾರ್ವಜನಿಕ ಕಳಕಳಿ, ಕಾಳಜಿ ಮತ್ತು ಮಾನವೀಯತೆಯಿಂದ ಸಮಸ್ಯೆಗಳನ್ನು, ಅಹವಾಲುಗಳನ್ನು ಆಲಿಸಿದರೆ, ಅರ್ಧ ಪರಿಹಾರ ಸಿಕ್ಕಷ್ಟು ಅವರು ಖುಷಿಯಾಗುತ್ತಾರೆ. ಸಾರ್ವಜನಿಕರೊಂದಿಗೆ ಉತ್ತಮ ರೀತಿಯಲ್ಲಿ ಸಂವಹನ ಮಾಡಿ ಜನಸ್ನೇಹಿ ಆಡಳಿತ ನೀಡಬೇಕು. ಸರಕಾರದ ಯೋಜನೆ, ಕಾರ್ಯಕ್ರಮಗಳನ್ನು ಅರ್ಹರಿಗೆ ತಲುಪಿಸಬೇಕು ಎಂದು ಹೇಳಿದರು.

ಐದು ಗಂಟೆಗಳಿಗೂ ಹೆಚ್ಚು ಕಾಲ ಸಾರ್ವಜನಿಕರ ಸಮಸ್ಯೆ ಆಲಿಸಿದ ಸಚಿವರು
ಬೆಳಗ್ಗೆ 11.40 ರಿಂದ ಸಂಜೆ 4. 45 ಗಂಟೆವರೆಗೆ ನಿರಂತರವಾಗಿ ಐದು ಗಂಟೆಗಳಿಗೂ ಹೆಚ್ಚು ಕಾಲ ಸಾರ್ವಜನಿಕರ ಸಮಸ್ಯೆಗಳನ್ನು ಪೂರ್ಣವಾಗಿ ಆಲಿಸಿ, ಪರಿಹಾರದ ಭರವಸೆಯನ್ನು ಸಚಿವರು ನೀಡಿದರು. ಜನತಾ ದರ್ಶನ ಮುಗಿಯುವರೆಗೆ ಸುಮಾರು 5 ಗಂಟೆಗೂ ಹೆಚ್ಚು ಕಾಲ ಸಚಿವರು ನಿಂತುಕೊಂಡೆ ಜನರ ಸಮಸ್ಯೆ ಆಲಿಸಿದ್ದು ಎಲ್ಲರ ಗಮನ ಸೆಳೆಯಿತು.

ಸೆಪ್ಟೆಂಬರ್‌ 25, 2023 ರಿಂದ ಜನವರಿ 27, 2025 ರ 14 ತಿಂಗಳ ಅವಧಿಯಲ್ಲಿ ಜಿಲ್ಲಾ ಮಟ್ಟದ ಎಂಟು ಜನತಾ ದರ್ಶನ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಾಜ್ಯದಲ್ಲಿಯೇ ಅತಿ ಹೆಚ್ಚು ಜನತಾ ದರ್ಶನ ಆಯೋಜಿಸಿದ ಏಕೈಕ ಸಚಿವರಾಗಿದ್ದಾರೆ.

ಸಭೆಯುದ್ದಕ್ಕೂ ಸಹನೆಯಿಂದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಸಚಿವರು, ತಪ್ಪು ಕಂಡು ಬಂದಲ್ಲಿ ಅಧಿಕಾರಿಗಳಿಗೆ ಗದರಿಸಿ, ಸರಿಯಾಗಿ ಸಾರ್ವಜನಿಕರ ಸೇವೆ ಮಾಡುವಂತೆ ಎಚ್ಚರಿಸಿದರು. ತಪ್ಪು ಮಾಹಿತಿ ನೀಡಲು ಪ್ರಯತ್ನಿಸುವ ಹಾಗೂ ಅಧಿಕಾರಿಗಳ ಮೇಲೆ ವಿನಾಕಾರಣ ದೂರು ಹೇಳುವವರೆಗೂ ಸಿಟ್ಟಿನಿಂದ ಸಚಿವರು ಬಿಸಿ ಮುಟ್ಟಿಸುತ್ತಾರೆ. ಜನತಾದರ್ಶನಕ್ಕೆ ತಮ್ಮ ಸಮಸ್ಯೆ ಹೊತ್ತು ಬರುವ ಪ್ರತಿಯೊಬ್ಬರನ್ನು ಸಹನೆಯಿಂದ ವಿಚಾರಿಸಿ, ಸರಕಾರದ ಸಹಾಯದೊಂದಿಗೆ, ಅಗತ್ಯವಿದ್ದಲ್ಲಿ ವೈಯಕ್ತಿಕ ನೆರವು ನೀಡುತ್ತಾರೆ. ಅಹವಾಲು ನೀಡಿದವರು ಪರಿಹಾರದ ಭರವಸೆಯೊಂದಿಗೆ ಮನೆಗೆ ಮರಳುತ್ತಾರೆ.

ಇಂದಿನ ಜನತಾದರ್ಶನದಲ್ಲಿ 200 ಅರ್ಜಿ ಸ್ವೀಕಾರ
ಜನತಾದರ್ಶನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ 61, ಮಹಾನಗರ ಪಾಲಿಕೆಗೆ ಸಂಬಂಧಿಸಿದ 33, ಜಿಲ್ಲಾ ಪಂಚಾಯತ ಸಂಬಂಧಿಸಿದ 16 ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ 88 ಅರ್ಜಿಗಳು ಸೇರಿ ಒಟ್ಟು 200 ಅರ್ಜಿಗಳನ್ನು ಸ್ವೀಕರಿಸಲಾಯಿತು. ಪ್ರತಿ ಅರ್ಜಿ ಪರಿಶೀಲಿಸಿ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸಲು ಸಚಿವರು ನಿರ್ದೇಶಿಸಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಮಹಾನಗರ ಪಾಲಿಕೆ ಆಯುಕ್ತ ರುದ್ದೇಶ ಗಾಳಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಗ್ರಾಮಗಳ ಸಾರ್ವಜನಿಕರು ಭಾಗವಹಿಸಿದ್ದರು.

ಸರಕಾರಿ ಸೌಲಭ್ಯ ವಿತರಣೆ
ಜನತಾ ದರ್ಶನದ ನಂತರ ರೇಷ್ಮೆ ಮತ್ತು ಕಾರ್ಮಿಕ ಇಲಾಖೆಯಿಂದ ಫಲಾನುಭವಿಗಳಿಗೆ ಸರ್ಕಾರದ ಯೋಜನೆಯಡಿ ಸ್ವಉದ್ಯೋಗಕ್ಕಾಗಿ ಉಪಕರಣಗಳನ್ನು ಸಚಿವ ಸಂತೋಷ ಲಾಡ್ ಅವರು ವಿತರಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿಜನತಾದರ್ಶನನರೇಂದ್ರ ಮೋದಿಬಿಜೆಪಿಸಂತೋಷ ಲಾಡ್‌ಸಿದ್ದರಾಮಯ್ಯ
Previous Post

ಶಿವಮೊಗ್ಗದಲ್ಲಿ ATM ದರೋಡೆ ಯತ್ನ – ಕೇವಲ ಅರ್ಧ ಗಂಟೆ ಒಳಗೆ ಆರೋಪಿ ಅರೆಸ್ಟ್ ! 

Next Post

ಸೆನ್ಸಾರ್ ಮುಗಿಸಿದ “ಆಪರೇಷನ್ ಡಿ” ತೆರೆಗೆ ಬರಲು ಸಿದ್ದ..

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
Next Post
ಸೆನ್ಸಾರ್ ಮುಗಿಸಿದ “ಆಪರೇಷನ್ ಡಿ” ತೆರೆಗೆ ಬರಲು ಸಿದ್ದ..

ಸೆನ್ಸಾರ್ ಮುಗಿಸಿದ "ಆಪರೇಷನ್ ಡಿ" ತೆರೆಗೆ ಬರಲು ಸಿದ್ದ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada