ಮುಡಾ ಪ್ರಕರಣದಲ್ಲಿ (Muda case) ಅಕ್ರಮ ನಿವೇಶನ ಹಂಚಿಕೆ ವಿರುದ್ಧ ಸಮಾರಾ ಸಾರಿಯುವ ದೂರುದಾರ ಸ್ನೇಹಮಯಿ ಕೃಷ್ಣಗೆ (Snehamayi krishna) ಕಾನೂನು ಸಂಕಷ್ಟ ಎದುರಾಗಿದೆ. ಬೇರೊಂದು ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ (Cheque bounce) ಆರೋಪ ಕೇಳಿಬಂದ ಹಿನ್ನಲೆ ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಕೋರ್ಟ್ ಶಿಕ್ಷೆ ನೀಡಲು ಮುಂದಾಗಿದೆ.
ಈ ಬಗ್ಗೆ ಕುಮಾರ್ ಎಂಬುವವರು ಸ್ನೇಹಮಯಿ ಕೃಷ್ಣ ವಿರುದ್ದ ಚೆಕ್ ಬೌನ್ಸ್ ದೂರು ದಾಖಲಿಸಿದ್ದರು. ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ 1.75 ಲಕ್ಷ ರೂ. ಪಡೆದಿದ್ದರು ಎನ್ನಲಾಗಿದೆ. ಈ ಸಂಬಂಧ ಕೋಅಪರೇಟಿವ್ ಬ್ಯಾಂಕ್ ಗೆ ಸ್ನೇಹಮಯಿ ಕೃಷ್ಣ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆದ ಹಿನ್ನೆಲೆ ಕುಮಾರ್ಕೋರ್ಟ್ ಮೆಟ್ಟಿಲೇರಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ ಮೈಸೂರಿನ ಮೂರನೇ JMFC ನ್ಯಾಯಾಲಯ ಸ್ನೇಹಮಯಿ ಕೃಷ್ಣಗೆ ಶಿಕ್ಷೆ ಪ್ರಕಟಿಸಿದ್ದು, ಇಂದು ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ.