ರಾಜ್ಯದಲ್ಲಿ ಮೈಕ್ರೊ ಫೈನಾನ್ಸ್ (Micro finance) ಕಿರುಕುಳ ಪ್ರಕರಣಗಳು ಹೆಚ್ಚಾಗಿರುವ ಬೆನ್ನಲ್ಲೇ ಸರ್ಕಾರ (State government) ಈ ಬಗ್ಗೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಈ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ (G parameshwar) ಪ್ರತಿಕ್ರಿಯಿಸಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣ ಕ್ಕೆ ಸುಗ್ರೀವಾಜ್ಞೆ ಹೊರಡಿಸುವುದು ವಿಳಂಬ ಆಗಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು,ಇನ್ನೆರಡು ಮೂರು ದಿನಗಳಲ್ಲಿ ಸಿಎಂ (Cm siddaramaiah) ಸುಗ್ರೀವಾಜ್ಞೆ ಬಗ್ಗೆ ಅಂತಿಮ ತಿರ್ಮಾನ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಇದಕ್ಕಾಗಿಯೇ ಸಿಎಂ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ.ಕಾನೂನು, ಸಂಸದೀಯ ವ್ಯವಹಾರ, ಆರ್ಥಿಕ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ.ಈಗಾಗಲೇ ಹಲವು ಕಾನೂನುಗಳಿವೆ, ಈ ಕಾನೂನುಗಳ ಅಧ್ಯಯನ ನಡೆಸಿ ಹೊಸ ಕಾನೂನು ಮಾಡಲಾಗುತ್ತೆ ಎಂದು ಹೇಳಿದ್ದಾರೆ.
ಮೈಕ್ರೋಫೈನಾನ್ಸ್ ಕುರಿತ ಸುಗ್ರೀವಾಜ್ಞೆ ಸ್ವರೂಪ ಬಗ್ಗೆ ಇನ್ನೆರಡು ಮೂರು ದಿನಗಳಲ್ಲಿ ಅಂತಿಮಗೊಳಿಸಿ ನಂತರ ಸುಗ್ರೀವಾಜ್ಞೆ ಹೊರಡಿಸಲಾಗುತ್ತದೆ, ಕರಾರುವಾಕ್ಕಾಗಿ ಯಾವಾಗ ಸುಗ್ರೀವಾಜ್ಞೆ ಹೊರಡಿಸಬೇಕು ಅಂತ ಸಮಯ ನಿಗದಿಗೊಳಿಸಿಲ್ಲ. ಜನರಿಗೆ ಕಿರುಕುಳ ನೀಡಿರುವ ಘಟನೆಗಳು ವರದಿಯಾಗಿದ್ದು, ಆತ್ಮಹತ್ಯೆ , ಊರು ಬಿಡುವ ಘಟನೆಗಳು ಹೆಚ್ಚಾಗಿವೆ. ಇದೆಲ್ಲವೂ ನಿಲ್ಲಬೇಕು..ಆ ರೀತಿಯಲ್ಲಿ ಸರ್ಕಾರ ಕಡಿವಾಣ ಹಾಕಲಿದೆ ಎಂದು ಭರವಸೆ ನೀಡಿದ್ದಾರೆ.