• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ನಾಳೆ ಕೇಂದ್ರ ಬಜೆಟ್‌.. ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ..?

ಕೃಷ್ಣ ಮಣಿ by ಕೃಷ್ಣ ಮಣಿ
January 31, 2025
in Uncategorized
0
ನಾಳೆ ಕೇಂದ್ರ ಬಜೆಟ್‌.. ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ..?
Share on WhatsAppShare on FacebookShare on Telegram

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3ನೇ ಅವಧಿಯ ಮೊದಲ ಪರಿಪೂರ್ಣ ಬಜೆಟ್ ಅಧಿವೇಶನ ಆರಂಭವಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ 2025-26ನೇ ಸಾಲಿನ ಪರಿಪೂರ್ಣ ಬಜೆಟ್​ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ 8ನೇ ಬಾರಿಗೆ ಕೇಂದ್ರ ಬಜೆಟ್​ ಮಂಡಿಸಲಿದ್ದಾರೆ.

ADVERTISEMENT

ಬಜೆಟ್​ ಅಧಿವೇಶನದ ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಿದ್ದಾರೆರ. ಬರೋಬ್ಬರಿ 58 ನಿಮಿಷಗಳ ಕಾಲ ಕೇಂದ್ರ ಸರ್ಕಾರ ಸಾಧನೆಗಳು, ಭವಿಷ್ಯದ ಯೋಜನೆಗಳು, ಮಹಾಕುಂಭಮೇಳದ ದುರಂತದ ಬಗ್ಗೆಯೂ ಪ್ರಸ್ತಾಪಿಸಿ ಸಂತಾಪ ಸೂಚಿಸಿದ್ದಾರೆ.. ರಾಷ್ಟ್ರಪತಿ ಭಾಷಣ ಮುಗಿಯುತ್ತಿದ್ದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌‌ ಆರ್ಥಿಕ ಸಮೀಕ್ಷೆ ಮಂಡಿಸಿದ್ದಾರೆ.. ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್‌ ತಂಡ ಸಲ್ಲಿಸಿದ ಆರ್ಥಿಕ ಸಮೀಕ್ಷೆಯಲ್ಲಿ ದೇಶದ ಆರ್ಥಿಕ ಅಭಿವೃದ್ಧಿಯ ಮುನ್ನೋಟ ನೀಡಲಾಗಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತ ದೇಶದ GDP ಶೇಕಡ 6.4 ರಷ್ಟು ಇದೆ.. 2025-26ನೇ ಸಾಲಿನಲ್ಲಿ ದೇಶದ GDP ಶೇಕಡ 6.3ರಿಂದ ಶೇಕಡ 6.8ಕ್ಕೆ ತಲುಪುವ ನಿರೀಕ್ಷೆಯಿದೆ.. ದೇಶದ ವಿದೇಶಿ ವಿನಿಮಯ ಪ್ರಮಾಣ 640.3 ಶತಕೋಟಿ ಡಾಲರ್ ಇದ್ದು ಜಾಗತಿಕ ಪ್ರತಿಕೂಲ ಪರಿಸ್ಥಿತಿ ನಿಭಾಯಿಸಲು ಬುದ್ಧಿವಂತಿಕೆ ನೀತಿ ಅಗತ್ಯವಿದೆ ಅನ್ನೋ ಅಂಶವಿದೆ.. ಆರ್ಥಿಕ ಅನಿಶ್ಚಿತತೆ ಕಾರಣದಿಂದ ಹಣದುಬ್ಬರದ ಅಪಾಯಗಳು ಇವೆ.. ಭಾರತವು ಜಾಗತಿಕ ಸ್ಪರ್ಧಾತ್ಮಕತೆ ವಿಚಾರದಲ್ಲಿ ಸುಧಾರಿಸುವ ಅಗತ್ಯವಿದೆ.. ಮುಂದಿನ 2 ದಶಕಗಳ ಕಾಲ ಮೂಲಸೌಕರ್ಯ ಹೂಡಿಕೆ ಅಗತ್ಯವಿದೆ. ಕಾರ್ಪೊರೇಟ್ ವಲಯ ಸಾಮಾಜಿಕ ಜವಾಬ್ದಾರಿ ಪ್ರದರ್ಶಿಸಬೇಕು ಅಂತಾ ಹೇಳಲಾಗಿದೆ.

ದೇಶದಲ್ಲಿ ಇನ್ಮುಂದೆ ಹವಾಮಾನ ವೈಪರಿತ್ಯದಿಂದ ಬೆಳೆ ಹಾನಿ ಆಗುವುದನ್ನು ಕಡಿಮೆ ಮಾಡ್ಬೇಕು. ಬೇಳೆ ಕಾಳುಗಳು, ಎಣ್ಣೆ ಕಾಳುಗಳು, ಟೊಮೆಟೊ, ಈರುಳ್ಳಿ ಉತ್ಪಾದನೆ ಹೆಚ್ಚಿಸಬೇಕು. 2 ದಶಕಗಳ ಕಾಲ ಸರಾಸರಿ ಶೇಕಡ 8ರಷ್ಟು ಬೆಳವಣಿಗೆ ಹೊಂದುತ್ತಾ ಸಾಗಿದರೆ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು ಸಹಕಾರಿ ಆಗುತ್ತೆ ಅಂತ ಸಲಹೆ ನೀಡಲಾಗಿದೆ. ದೇಶದ ಬೆಳವಣಿಗೆಗಾಗಿ ಹೂಡಿಕೆ ಪ್ರಮಾಣ ಶೇಕಡ 31 ರಿಂದ ಶೇಕಡ 35ಕ್ಕೆ ಹೆಚ್ಚಿಸಬೇಕು.. ಉತ್ಪಾದನಾ ವಲಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು AI ಬಳಕೆ ಅಗತ್ಯವಿದೆ. ರೊಬೊಟಿಕ್ಸ್ & ಜೈವಿಕ ತಂತ್ರಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಅಗತ್ಯ ಅಂತಾನೂ ಸಲಹೆ ಕೊಟ್ಟಿದ್ದಾರೆ..

Tags: budgetBudget 2022budget 2023budget and economic survey 2022budget and economic survey 2022 study iqbudget and economic survey 2023 upscbudget and economic survey differenceseconomic surveyeconomic survey 2022economic survey 2022 in simpleeconomic survey 2022-23economic survey 2023economic survey of indiaeconomic survey upscindian economic surveyUnion Budgetunion budget 2022Union Budget 2023
Previous Post

ಸಿಎಂ ವಿರುದ್ಧ ರಕ್ತ ಬಲಿ ಕೊಟ್ಟು ತಂತ್ರ ಶಕ್ತಿ ವಿದ್ಯೆ ಪ್ರಯೋಗ..

Next Post

ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ: ಸಿಎಂ‌ ಸಿದ್ದರಾಮಯ್ಯ ಕರೆ

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ: ಸಿಎಂ‌ ಸಿದ್ದರಾಮಯ್ಯ ಕರೆ

ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ: ಸಿಎಂ‌ ಸಿದ್ದರಾಮಯ್ಯ ಕರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada