• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

‘ಸಿದ್ಲಿಂಗು 2’ ಚಿತ್ರದ ‘ಕಥೆಯೊಂದು’ ಹಾಡು ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
February 2, 2025
in ಸಿನಿಮಾ
0
‘ಸಿದ್ಲಿಂಗು 2’ ಚಿತ್ರದ ‘ಕಥೆಯೊಂದು’ ಹಾಡು ಬಿಡುಗಡೆ
Share on WhatsAppShare on FacebookShare on Telegram

ದೇವರ ಮಕ್ಕಳ ಸಮ್ಮುಖದಲ್ಲಿ ‘ಸಿದ್ಲಿಂಗು 2’ ಚಿತ್ರದ ಹಾಡು ಅನಾವರಣ

ADVERTISEMENT

ಪ್ರೇಮಿಗಳ ದಿನದಂದು ಯೋಗಿ, ಸೋನು, ಸೋನು ಗೌಡ ಅಭಿನಯದ ಚಿತ್ರದ ಬಿಡುಗಡೆ

‘ಸಿದ್ಲಿಂಗು’, ‘ನೀರ್‍ ದೋಸೆ’ ಖ್ಯಾತಿಯ ವಿಜಯಪ್ರಸಾದ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಪ್ರೇಮಿಗಳ ದಿನದ ಅಂಗವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಮೊದಲ ವೀಡಿಯೋ ಹಾಡು, ಶನಿವಾರ ಸಂಜೆ ನಾಗದೇವನಹಳ್ಳಿ ಬಳಿಯ ಅನಾಥಶ್ರಮದಲ್ಲಿ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಹಾಜರಿದ್ದರು.

‘ಕಥೆಯೊಂದು’ ಎಂದು ಶುರುವಾಗುವ ಈ ಹಾಡನ್ನು ಅರಸು ಅಂತಾರೆ ಬರೆದರೆ, ಅನೂಪ್‍ ಸೀಳಿನ್‍ ಸಂಗೀತ ಸಂಯೋಜಿಸುವುದರ ಜೊತೆಗೆ, ಹಾಡಿಗೆ ಧ್ವನಿಯಾಗಿದ್ದಾರೆ. ನಾಯಕ ಯೋಗಿ ಮತ್ತು ನಾಯಕಿ ಸೋನು ಗೌಡ ಅಭಿನಯದಲ್ಲಿ ಈ ಹಾಡು ಮೂಡಿಬಂದಿದೆ.

‘ಸಿದ್ಲಿಂಗು 2’ ಚಿತ್ರದ ಕುರಿತು ಮಾತನಾಡುವ ಯೋಗಿ, ‘ಈ ಚಿತ್ರದ ಮುಹೂರ್ತ ಕಳೆದ ವರ್ಷ ದೇವರ ಎದುರು ಆಗಿತ್ತು. ಈಗ ಚಿತ್ರದ ಮೊದಲ ಹಾಡು ದೇವರ ಮಕ್ಕಳ ಎದುರು ಬಿಡುಗಡೆಯಾಗುತ್ತಿದೆ. ಚಿತ್ರ ಬಹಳ ಚೆನ್ನಾಗಿ ಮೂಡಿ ಬಂದಿದೆ. ನಾವೆಲ್ಲರೂ ಬಹಳ ಎಕ್ಸೈಟ್‍ ಆಗಿದ್ದೇವೆ. ತುಂಬಾ ಕಷ್ಟಪಟ್ಟು ಮಾಡಿರುವ ಸಿನಿಮಾ ಇದು. ತುಂಬಾ ಅವಮಾನಗಳನ್ನು ಎದುರಿಸಿ ಮಾಡಿರುವ ಸಿನಿಮಾ. ನಿರ್ಮಾಪಕರಾದ ಹರಿ ಮತ್ತು ರಾಜು, ನಮ್ಮ ಕಷ್ಟದ ಸಮಯದಲ್ಲಿ ಬಂದು ನಮ್ಮ ಜೊತೆಗೆ ಸಿನಿಮಾ ಮಾಡಿದ್ದಾರೆ. ಅವರಿಗೆ ಎಷ್ಟು ಧನ್ಯವಾದಗಳನ್ನು ಹೇಳಿದರೂ ಸಾಲದು. ಅವರಿಗೆ ಸಣ್ಣ ವಿಷಯವಿರಬಹುದು. ಆ ದೇವರು ನನಗೆ ಮತ್ತು ವಿಜಯಪ್ರಸಾದ್‍ ಅವರಿಗೆ ನಿಮ್ಮಿಂದ ಒಳ್ಳೆಯ ಸಿನಿಮಾ ಮಾಡುವ ಅವಕಾಶ ಕೊಟ್ಟಿದ್ದಾರೆ. ಸೋನು ಹಳೆಯ ಪರಿಚಯ. ಇದೇ ಮೊದಲ ಬಾರಿಗೆ ಒಟ್ಟಿಗೆ ಸಿನಿಮಾ ಮಾಡಿದ್ದೇವೆ. ನನಗೂ, ವಿಜಯಪ್ರಸಾದ್‍ ಅವರಿಗೂ ಈ ಸಿನಿಮಾದಲ್ಲಿ ಆಗಿರುವ ಜಗಳ, ಇರುಸುಮುರುಸು ಈ ಹಿಂದೆ ಆಗಿಲ್ಲ. ಅದು ಸಿನಿಮಾ ವಿಷಯಕ್ಕೆ ಮಾತ್ರ. ಅವರ ಜೊತೆಗೆ ಕೆಲಸ ಮಾಡುವುದು ಖುಷಿಯ ವಿಚಾರ. ಒಬ್ಬ ಪರಿಪೂರ್ಣ ನಟ ಆಗಬೇಕು ಅಂದರೆ, ಅವರ ಜೊತೆಗೆ ಕೆಲಸ ಮಾಡಬೇಕು. ಮುಂದೆ ಸಹ ಅವರ ಜೊತೆಗೆ ಇನ್ನಷ್ಟು ಕೆಲಸ ಮಾಡುವ ಆಸೆ ಇದೆ. ಈ ಚಿತ್ರದಲ್ಲಿ ಕೆಲಸ ಮಾಡಿದ, ಸಹಕಾರ ಮತ್ತು ಪ್ರೋತ್ಸಾಹ ಕೊಟ್ಟ ಪ್ರತಿಯೊಬ್ಬರಿಗೂ ಧನ್ಯವಾದಗಳು’ ಎಂದರು.

ನಿರ್ದೇಶಕ ವಿಜಯಪ್ರಸಾದ್‍ ಮಾತನಾಡಿ, ‘ಐಷಾರಾಮಿ ಹೋಟೆಲ್‍ಗಳಲ್ಲಿ, ಸೆಲೆಬ್ರಿಟಿಗಳ ಮಧ್ಯೆ ಹಾಡುಗಳನ್ನು ಬಿಡುಗಡೆ ಮಾಡುವುದು ಸರ್ವೇ ಸಾಮಾನ್ಯ. ಆದರೆ, ‘ಸಿದ್ಲಿಂಗು 2’ ಚಿತ್ರತಂಡದವರಿಗೆ ಮನಸುಗಳ ಮಧ್ಯೆ, ಒಳ್ಳೆಯ ಮನಸುಗಳಿರುವ ಮನುಷ್ಯರ ಮಧ್ಯೆ ಹಾಡು ಬಿಡುಗಡೆ ಮಾಡಿದರೆ ಅರ್ಥಪೂರ್ಣ ಎಂಬ ಕಾರಣಕ್ಕೆ ಇಲ್ಲಿ ಹಾಡು ಬಿಡುಗಡೆ ಮಾಡುತ್ತಿದ್ದೇವೆ. ಹಾಗಾಗಿ, ವಿಶೇಷ ಮಕ್ಕಳ ಆಶ್ರಮದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಯೋಗಿ ಮತ್ತು ಸೋನು ಪಾತ್ರಧಾರಿಗಳಾಗಿ ಇಲ್ಲಿಗೆ ಬಂದಿದ್ದಾರೆ. ಇಡೀ ಸಿನಿಮಾದಲ್ಲಿ ಯೋಗಿ ಇದೇ ವೇಷದಲ್ಲಿರುತ್ತಾರೆ. ಯೋಗಿ ಜೊತೆಗೆ ಇಬ್ಬರು ಹೀರೋಗಳು ಇಲ್ಲಿಗೆ ಬಂದಿದ್ದಾರೆ. ಸಂಗೀತ ನಿರ್ದೇಶಕ ಅನೂಪ್‍ ಸೀಳಿನ್‍ ಮತ್ತು ಅರಸು ಅಂತಾರೆ ಆ ಇಬ್ಬರು ಹೀರೋಗಳು. ಅನೂಪ್‍ ಸೀಳಿನ್‍ ಜೀವಂತವಾಗಿರುವ ಹಾಡೊಂದನ್ನು ಕೊಟ್ಟಿದ್ದಾರೆ. ಅಷ್ಟೇ ಜೀವಂತವಾದ ಸಾಹಿತ್ಯವನ್ನು ಅರಸು ಬರೆದಿದ್ದಾರೆ. ನಿಮ್ಮೆಲ್ಲರ ಸಹಕಾರ ಮತ್ತು ಬೆಂಬಲ ಈ ತಂಡದ ಮೇಲಿರಲಿ’ ಎಂದರು.

ನಾಯಕಿ ಸೋನು ಮಾತನಾಡಿ, ‘ನಾನು ಈ ತಂಡಕ್ಕೆ ಹೊಸಬಳು. ಆದರೆ, ಹೊಸಬಳು, ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದೀನಿ ಅಂತ ಅನಿಸಲಿಲ್ಲ. ನನ್ನ ಮತ್ತು ಯೋಗಿಯ ನಡುವೆ ಒಳ್ಳೆಯ ಸ್ಪರ್ಧೆ ಇತ್ತು. ಪ್ರತಿ ದಿನ ಒಂದೊಳ್ಳೆಯ ಅನುಭವ ಆಯಿತು. ವಿಜಯಪ್ರಸಾದ್‍ ಅವರಿಂದ ಮೊದಲ ಟೇಕ್‍ನಲ್ಲಿ ಓಕೆ ಅಂತನಿಸಿಕೊಳ್ಳುವುದೇ ದೊಡ್ಡ ಸವಾಲಾಗಿತ್ತು. ಪ್ರತೀ ದಿನ ಮೊದಲ ಟೇಕ್‍ನಲ್ಲಿ ಓಕೆ ಆಗಬೇಕೆಂದು ತಯಾರಿ ಮಾಡಿಕೊಂಡು ಬರುತ್ತಿದ್ದೆ. ಒಬ್ಬ ವಿದ್ಯಾರ್ಥಿಯಾಗಿ ಅವರಿಂದ ಕಲಿಯುವುದು ಸಾಕಷ್ಟು ಇದೆ. ಅನೂಪ್‍ ಸೀಳಿನ್‍ ಹಾಡುಗಳ ಮೂಲಕ ಮ್ಯಾಜಿಕ್ ಸೃಷ್ಟಿಸಿದ್ದಾರೆ. ಒಂದೊಳ್ಳೆಯ ಚಿತ್ರದಲ್ಲಿ ನಟಿಸುವುದಕ್ಕೆ ಬಹಳ ಖುಷಿ ಇದೆ’ ಎಂದರು.

‘ಸಿದ್ಲಿಂಗು 2’ ಚಿತ್ರವನ್ನು ಶ್ರೀಹರಿ ಮತ್ತು ರಾಜು ಶೇರಿಗಾರ್‍ ನಿರ್ಮಿಸಿದ್ದು, ಯೋಗಿ, ಸೋನು ಗೌಡ, ಸುಮನ್‍ ರಂಗನಾಥ್‍, ಗಿರಿಜಾ ಲೋಕೇಶ್‍, ಮಹಾಂತೇಶ್‍, ಆ್ಯಂಟೋನಿ ಕಮಲ್‍, ಮಂಜುನಾಥ ಹೆಗಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಪ್ರಸನ್ನ ಗುರ್ಲಕೆರೆ ಛಾಯಾಗ್ರಹಣ ಮತ್ತು ಅಕ್ಷಯ್ ಪಿ. ರಾವ್‍ ಅವರ ಸಂಕಲನವಿದೆ.

‘ಭೀಮ’ ಚಿತ್ರದ ನಿರ್ಮಾಪಕ ಜಗದೀಶ್‍, ಈ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದಾರೆ.

Tags: dia movie songsdia songkannada movie sidlingu 2kannada new songskannada songsloose mada yogi in sidlingu 2loose madha yogi sidlingunew kannada movie songsninna gungalli hd songramya songssad songsanjith hegde songsSidlingusidlingu (film)sidlingu 2sidlingu 2 muhuratsidlingu 2 pressmeetsidlingu 2 songsidlingu 2 songssidlingu 2 trailersidlingu kannada moviesidlingu songsSongsvideo song
Previous Post

ಶ್ರೀಮುರಳಿ ಅವರಿಂದ “ರಾಜು ಜೇಮ್ಸ್ ಬಾಂಡ್” ಚಿತ್ರದ “ಟ್ರೇಲರ್” ಬಿಡುಗಡೆ .

Next Post

ಜನಪ್ರಿಯ ಗಾಯಕಿ ಕೆ.ಎಸ್.ಚಿತ್ರ ಅವರ ಕಂಠಸಿರಿಯಲ್ಲಿ “1990 s” ಚಿತ್ರದ ಇಂಪಾದ ಗೀತೆ* .

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
Next Post
ಜನಪ್ರಿಯ ಗಾಯಕಿ ಕೆ.ಎಸ್.ಚಿತ್ರ ಅವರ ಕಂಠಸಿರಿಯಲ್ಲಿ “1990 s” ಚಿತ್ರದ ಇಂಪಾದ ಗೀತೆ* .

ಜನಪ್ರಿಯ ಗಾಯಕಿ ಕೆ.ಎಸ್.ಚಿತ್ರ ಅವರ ಕಂಠಸಿರಿಯಲ್ಲಿ "1990 s" ಚಿತ್ರದ ಇಂಪಾದ ಗೀತೆ* .

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada