• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಇನ್ವೆಸ್ಟ್ ಕರ್ನಾಟಕ 2025” ಜಾಗತಿಕ ಹೂಡಿಕೆದಾರರ ಸಮಾವೇಶ; 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
February 3, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

7 ಲಕ್ಷ ಕೋಟಿ ಬಂಡವಾಳ ಹರಿವು ದೃಢ; 18 ರಾಷ್ಟ್ರಗಳು ಸಮಾವೇಶದಲ್ಲಿ ಭಾಗಿ
ಕರ್ನಾಟಕ ರಾಜ್ಯ ನೂತನ ಕೈಗಾರಿಕಾ ನೀತಿ ಘೋಷಣೆ

ADVERTISEMENT

“ಇನ್ವೆಸ್ಟ್ ಕರ್ನಾಟಕ 2025” ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯದಲ್ಲಿ ಸುಮಾರು ₹10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇಲ್ಲಿಯವರೆಗೂ ಸುಮಾರು ₹7 ಲಕ್ಷ ಕೋಟಿ ಬಂಡವಾಳದ ಹರಿವನ್ನು ದೃಢೀಕರಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

“ಇನ್ವೆಸ್ಟ್ ಕರ್ನಾಟಕ 2025″ರ ಕುರಿತು ವಿಧಾನಸೌಧದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ಧತಾ ಪರಿಶೀಲನೆ ಸಭೆ ನಂತರ ಡಿಸಿಎಂ ಡಿ .ಕೆ .ಶಿವಕುಮಾರ್ ಅವರು ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು.

“60 ಕ್ಕೂ ಹೆಚ್ಚು ಗಣ್ಯ ಪ್ರತಿನಿಧಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇವರು ನಾನಾ ವಿಚಾರಗಳನ್ನು ಹಂಚಿಕೊಳ್ಳಲಿದ್ದು, 2 ಸಾವಿರದಷ್ಟು ಹೂಡಿಕೆದಾರರು ಸಮಾವೇಶದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಂಡಿದ್ದಾರೆ. 18 ರಾಷ್ಟ್ರಗಳು ಸಮಾವೇಶದಲ್ಲಿ ಭಾಗವಹಿಸಲಿದ್ದು, 9 ದೇಶಗಳು ತಮ್ಮ ಪೆವಿಲಿಯನ್ ಗಳನ್ನು ತೆರಯಲು ಮುಂದೆ ಬಂದಿದ್ದಾರೆ. 10 ದೇಶಗಳ ಉನ್ನತ ಮಟ್ಟದ ಕೈಗಾರಿಕಾ ವಲಯದ ನಾಯಕರು ತಾಂತ್ರಿಕ ವಲಯದ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

“ಕರ್ನಾಟಕ ರಾಜ್ಯ ನೂತನ ಕೈಗಾರಿಕಾ ನೀತಿ 2025-30 ಅನ್ನು ಈ ಸಮಾವೇಶದಲ್ಲಿ ಘೋಷಣೆ ಮಾಡಲಾಗುವುದು. ದೇಶದ ಅನೇಕ ರಾಜ್ಯಗಳ ನೀತಿಗಳನ್ನು ಅಧ್ಯಯನ ಮಾಡಲಾಗಿದ್ದು ಎಲ್ಲದಕ್ಕಿಂತ ಉತ್ತಮವಾದ, ಆಕರ್ಷಣೀಯವಾದ ನೀತಿಯನ್ನು ಪರಿಚಯಿಸಲಾಗುವುದು. ಜೊತೆಗೆ ಕ್ಲೀನ್ ಮೊಬಿಲಿಟಿ ನೀತಿ 2025-30 ಅನ್ನು ಅನಾವರಣ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಏಕಗವಾಕ್ಷಿ ಅನುಕೂಲತೆಯನ್ನು ತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೂಡಿಕೆದಾರರು ಮತ್ತು ಖರೀದಿದಾರರ ನಡುವೆ ಹೊಂದಾಣಿಕೆ ಏರ್ಪಡಿಸುವ ಕೆಲಸ ಮಾಡಲಾಗುವುದು. 4 ಸಾವಿರ ಎಸ್ ಎಂಇಗಳಿಗೆ ಇಲಾಖೆ ವತಿಯಿಂದ ತರಬೇತಿ ನೀಡಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ” ಎಂದರು.

ಮೂರು ಲಕ್ಷ ಡಾಲರ್ ಮೊತ್ತದ ಬಹುಮಾನ ವಿತರಣೆ

“ಅನೇಕ ಹೂಡಿಕೆದಾರರು ಬೆಂಗಳೂರು ಸೇರಿದಂತೆ ಹೊರಗಿನ ಜಿಲ್ಲೆಗಳಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಗೆ ಒತ್ತನ್ನು ನೀಡಿದ್ದಾರೆ. ಇವರಿಗೆ ಮೂರು ಲಕ್ಷ ಡಾಲರ್ ಮೊತ್ತದ ಬಹುಮಾನ ನೀಡಲಾಗುವುದು. ನವೋದ್ಯಮಗಳ ಪ್ರತಿ ವಿಭಾಗಕ್ಕೆ ಒಟ್ಟು 1 ಲಕ್ಷ ಡಾಲರ್ ಬಹುಮಾನ ಮೊತ್ತ ನಿಗದಿ ಮಾಡಲಾಗಿದೆ” ಎಂದು ಹೇಳಿದರು.

“ಸುಮಾರು 30 ಕ್ಕೂ ಹೆಚ್ಚು ನವ ನವೀನ ರೀತಿಯ ಆಲೋಚನೆ ಹೊಂದಿರುವ ನವೋದ್ಯಮಗಳು ಕರ್ನಾಟಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗವಹಿಸುತ್ತಿವೆ. ಸುಮಾರು 1 ಸಾವಿರಕ್ಕೂ ಹೆಚ್ಚು ನವೋದ್ಯಮಗಳಿಂದ ಪ್ರದರ್ಶನಕ್ಕೆ ಅರ್ಜಿಗಳು ಬಂದಿದ್ದವು. ಇವರಲ್ಲಿ ವಿನೂತನ ಚಿಂತನೆಗಳನ್ನು ಹೊಂದಿರುವ 45 ನವೋದ್ಯಮಗಳಿಗೆ ಅವಕಾಶ ಕಲ್ಪಿಸಲಾಗಿದೆ” ಎಂದರು.

“ಒಟ್ಟು 85 ಮಳಿಗೆಗಳು ಇರಲಿದ್ದು ಇಲ್ಲಿ ವಸ್ತುಪ್ರದರ್ಶನಕ್ಕೆ, ಮಾಹಿತಿ ಸಂವಹನಕ್ಕೆ ಅವಕಾಶ ಕಲ್ಪಿಸಲಾಗುವುದು. ತಾಂತ್ರಿಕ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಸರ್ಕಾರ ಬೆಂಗಳೂರಿಗಿಂತ ಇತರೇ ಜಿಲ್ಲೆಗಳಲ್ಲಿ ಹೆಚ್ಚು ಬಂಡವಾಳ ಹೂಡಿಕೆಗೆ ಪ್ರೋತ್ಸಾಹ ನೀಡುತ್ತಿದೆ. ಬೆಂಗಳೂರಿಗಿಂತ ಹೊರಗಿನ ಜಿಲ್ಲೆಗಳಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಎಲ್ಲಾ ಹೂಡಿಕೆದಾರರಿಗೆ ಮನವಿ ಮಾಡಲಾಗಿದೆ” ಎಂದು ತಿಳಿಸಿದರು.

“ಇದೇ ಫೆ. 11 ರಿಂದ 14 ನೇ ತಾರೀಕಿನ ತನಕ ನಡೆಯುವ ಸಮಾವೇಶದ ಯಶಸ್ಸಿಗೆ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರ ನೇತೃತ್ವದ ತಂಡ ಸುಮಾರು 16 ದೇಶಗಳಿಗೆ ಭೇಟಿ ಮಾಡಿ ಅನೇಕರಿಗೆ ಆಹ್ವಾನ ನೀಡಿ ನಮ್ಮ ಕರ್ನಾಟಕದಲ್ಲಿರುವ ಮಾನವ ಸಂಪನ್ಮೂಲ, ಸಂಪತ್ತು ಸರ್ಕಾರದ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಫೆ.11 ರಂದು ಉದ್ಘಾಟನೆಯಾದ ನಂತರ ಒಂದಷ್ಟು ಒಡಂಬಡಿಕೆಗಳಿಗೆ ಸಹಿ ಹಾಕುವ ಕಾರ್ಯಕ್ರಮವಿರಲಿದೆ” ಎಂದರು.

“ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಮುನ್ನುಡಿ ಬರೆದಿದ್ದೇ ಕರ್ನಾಟಕ. ಮೊದಲನೇ ಬಾರಿ ವಿಧಾನಸೌಧದ ಬಾಂಕ್ವೆಂಟ್ ಹಾಲ್ ನಲ್ಲಿ ಇದನ್ನು ನಡೆಸಲಾಗಿತ್ತು. ಇದನ್ನು ಗಮನಿಸಿದ ಅನೇಕ ರಾಜ್ಯಗಳು ಇದನ್ನು ಅನುಕರಣೆ ಮಾಡಿದ್ದವು. ಕರ್ನಾಟಕ ಸರ್ಕಾರದ ಮೇಲೆ ನಂಬಿಕೆಯನ್ನಿಟ್ಟು ಬರುತ್ತಿರುವ ಎಲ್ಲಾ ಹೂಡಿಕೆದಾರರಿಗೆ ಅಭಿನಂದನೆಗಳು. ಎಲ್ಲಾ ರೀತಿಯಲ್ಲಿಯೂ ಕರ್ನಾಟಕ ಪ್ರಜ್ವಲಿಸಲಿದೆ. ಉದ್ಯೋಗ ಸೃಷ್ಟಿ ಸೇರಿದಂತೆ ಉತ್ಪಾದನೆಗೆ ಅನುಕೂಲಕರ ವಾತಾವರಣ ಉಂಟಾಗಲಿದೆ ಎಂಬುದು ನಮ್ಮ ನಂಬಿಕೆ” ಎಂದು ಹೇಳಿದರು.

Tags: BJPCongress PartyDK ShivakumarInvest Karnatakaಬಿಜೆಪಿ
Previous Post

ಗರ್ಭಾವಸ್ಥೆಯಲ್ಲಿ ಕ್ಯಾಲ್ಸಿಯಂ ಮತ್ತು ವಿಟಮಿನ್ ಅಂಶ ತುಂಬಾನೆ ಮುಖ್ಯ, ಯಾಕೆ?

Next Post

ಸೀಕ್ರೆಟ್ ಆಗಿ ದೆಹಲಿ ತಲುಪಿದ ಬಿಜೆಪಿ ರೆಬೆಲ್ಸ್ ಟೀಮ್ –  ಬಿಜೆಪಿಯಲ್ಲಿ ಕ್ಷಿಪ್ರ ಬೆಳವಣಿಗೆ ! 

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಸೀಕ್ರೆಟ್ ಆಗಿ ದೆಹಲಿ ತಲುಪಿದ ಬಿಜೆಪಿ ರೆಬೆಲ್ಸ್ ಟೀಮ್ –  ಬಿಜೆಪಿಯಲ್ಲಿ ಕ್ಷಿಪ್ರ ಬೆಳವಣಿಗೆ ! 

ಸೀಕ್ರೆಟ್ ಆಗಿ ದೆಹಲಿ ತಲುಪಿದ ಬಿಜೆಪಿ ರೆಬೆಲ್ಸ್ ಟೀಮ್ -  ಬಿಜೆಪಿಯಲ್ಲಿ ಕ್ಷಿಪ್ರ ಬೆಳವಣಿಗೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada