• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

`ನಾವೀನ್ಯತೆಗಳ ಭವಿಷ್ಯ’ ಪ್ರದರ್ಶನ, 40ಕ್ಕೂ ಹೆಚ್ಚು ಕಂಪನಿ ಭಾಗಿ (ಬಾಕ್ಸ್)

ಪ್ರತಿಧ್ವನಿ by ಪ್ರತಿಧ್ವನಿ
February 12, 2025
in Top Story, ಕರ್ನಾಟಕ, ದೇಶ, ವಿಶೇಷ
0
`ನಾವೀನ್ಯತೆಗಳ ಭವಿಷ್ಯ’ ಪ್ರದರ್ಶನ, 40ಕ್ಕೂ ಹೆಚ್ಚು ಕಂಪನಿ ಭಾಗಿ (ಬಾಕ್ಸ್)
Share on WhatsAppShare on FacebookShare on Telegram

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಯುವಜನರ ಗಮನ ಸೆಳೆಯುತ್ತಿರುವುದೆಂದರೆ, ನಾಳಿನ ನಮ್ಮ ಜಗತ್ತಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ನಾವೀನ್ಯತೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಏರ್ಪಡಿಸಿರುವ `ಫ್ಯೂಚರ್ ಆಫ್ ಇನ್ನೋವೇಶನ್’ ಎಕ್ಸ್-ಪೋಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Sivakumar)ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (MB Patil)ಜತೆಯಾಗಿ ಬುಧವಾರ ಚಾಲನೆ ನೀಡಿದರು.

ADVERTISEMENT

ಬಳಿಕ ಶಿವಕುಮಾರ್(Sivakumar) ಮತ್ತು ಪಾಟೀಲ(Patil) ಇಬ್ಬರೂ ಕರ್ನಾಟಕ ಪೆವಿಲಿಯನ್, ಟೊಯೋಟಾ, ಎಂಬೆಸಿ ಗ್ರೂಪ್, ರಾಜ್ಯ ಪ್ರವಾಸೋದ್ಯಮ, ಡ್ರೋನ್ ತಂತ್ರಜ್ಞಾನದ ವೈಶಿಷ್ಟ್ಯಪೂರ್ಣ ಮಜಲುಗಳನ್ನು ಕುತೂಹಲದಿಂದ ವೀಕ್ಷಿಸಿ, ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜತೆಗೆ ಕೃಷಿಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಹೊತ್ತು ತರಲಿವೆ ಎನ್ನಲಾಗುತ್ತಿರುವ ಅಗ್ರಿ-ಟೆಕ್ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ರೋಗಪತ್ತೆ ಮತ್ತು ಚಿಕಿತ್ಸೆಗಳನ್ನು ಸುಲಭವಾಗಿಸುವ ಆರೋಗ್ಯಸೇವೆಗಳ ತಂತ್ರಜ್ಞಾನಗಳ ಬಗ್ಗೆಯೂ ಅವರು ತಿಳಿದುಕೊಂಡರು.

Mallikarjun Kharge:KPCC ಅಧ್ಯಕ್ಷ ಸ್ಥಾನಕ್ಕೆ ಚೆಕ್ ಮೇಟ್ ಕೊಟ್ಟ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ..!

ಪ್ರದರ್ಶನ ಕುರಿತು ಮಾತನಾಡಿದ ಸಚಿವ ಎಂ ಬಿ ಪಾಟೀಲ(MB Patil), `ಇದರಲ್ಲಿ 40ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿವೆ. ಈ ಪೈಕಿ ಜಾಗತಿಕ ಮಟ್ಟದ ಕಂಪನಿಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳೆರಡೂ ಇವೆ. ಡ್ರೋನ್, ಬಾಹ್ಯಾಕಾಶ, ಕೃಷಿ, ಆರೋಗ್ಯ, ಉತ್ಪಾದನಾ ವಲಯ, ವೈಮಾಂತರಿಕ್ಷ, ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನ ಧಾರೆಗಳನ್ನು ಇಲ್ಲಿ ನೋಡಬಹುದು’ ಎಂದರು.

ಮುಖ್ಯವಾಗಿ ಇಲ್ಲಿ ಮರುಬಳಕೆ ಇಂಧನ, ಸೆಮಿಕಂಡಕ್ಟರ್, ವಿದ್ಯುಚ್ಚಾಲಿತ ವಾಹನಗಳು ಮತ್ತು ಸುಸ್ಥಿರ ಉತ್ಪಾದನೆಗೆ ಹೆಸರಾದ ಕಂಪನಿಗಳು ಪಾಲ್ಗೊಂಡಿವೆ. ಜೊತೆಗೆ ರಾಜ್ಯದ ಸಾಧನೆಗಳನ್ನು ಬಿಂಬಿಸುವ ಪ್ರತ್ಯೇಕ ಕರ್ನಾಟಕ ಪೆವಿಲಿಯನ್’ ಕೂಡ ಇದೆ. ಪಾಲ್ಗೊಂಡಿರುವ ಕಂಪನಿಗಳಲ್ಲಿ ಜಿ.ಇ ಹೆಲ್ತ್ ಕೇರ್, ಹೀರೋ ಫ್ಯೂಚರ್ ಎನರ್ಜೀಸ್, ರಿವರ್ ಮೊಬಿಲಿಟಿ, ಸರಳಾ ಏವಿಯೇಶನ್, ಗೆಲಾಕ್ಸಿ ಸ್ಪೇಸ್, ಲ್ಯಾಮ್ ರೀಸರ್ಚ್ ಪ್ರಮುಖವಾಗಿವೆ.ಕರ್ನಾಟಕ ಪೆವಿಲಿಯನ್’ನಲ್ಲಿ ಕ್ವಿನ್ ಸಿಟಿ, ಫ್ಲೈಯಿಂಗ್ ವೆಡ್ಜ್, ಬೆಲ್ಲಾಟ್ರಿಕ್ಸ್, ಸ್ಕೀಸರ್ವ್, ಫ್ಲಕ್ಸ್ ಆಟೋ ಮುಂತಾದ ಉದ್ಯಮಗಳಿವೆ.

Tags: bank coaching centrebank in newsbank institute for coachingbest coaching for bank jobbest coching for bank examcurrent affairs for bank examcurrent affairs oliveboardnandyala banking coaching centrenandyala coaching centrenandyala coaching centre hostaloliveboardoliveboard current affairsPreparationsri gururagavendra banking coaching centre in teluguteam nishtateslabjornteslabjørnశ్రీ gururaghavendra banking coaching centre
Previous Post

ಸೂಪರ್ ಸ್ಟಾರ್ ವಿದ್ಯಾಳಾಗಿ ‘ವಿದ್ಯಾಪತಿ’ ಬ್ಯೂಟಿ ಮಲೈಕಾ ಎಂಟ್ರಿ

Next Post

ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಪೊಲೀಸರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಪೊಲೀಸರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಪೊಲೀಸರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada