• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ’

ಪ್ರತಿಧ್ವನಿ by ಪ್ರತಿಧ್ವನಿ
February 12, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
‘ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ’
Share on WhatsAppShare on FacebookShare on Telegram

ಬೆಂಗಳೂರು: `ನಾವು ಸೆಮಿಕಂಡಕ್ಟರ್(Semiconductor) ಕ್ಷೇತ್ರದ ಸಹಿತ ಎಲ್ಲಾ ಕೈಗಾರಿಕಾ ವಲಯಗಳಿಗೆ ಸಂಬಂಧಿಸಿದಂತೆ ಬರೀ ಬಂಡವಾಳ ಆಕರ್ಷಿಸುವ ಬಗ್ಗೆ ಮಾತನಾಡುತ್ತಿರುತ್ತೇವೆ. ಆದರೆ, ವಾಸ್ತವವಾಗಿ ನಾವು ಪ್ರತಿಭೆ ಮತ್ತು ಸಾಮರ್ಥ್ಯ ಎರಡನ್ನೂ ಸೃಷ್ಟಿಸುವ ಜರೂರಿದೆ. ಇದು ಸಾಧ್ಯವಾದರೆ, ಬಂಡವಾಳದ ಹರಿವು ತನ್ನಿಂತಾನೇ ಆಗುತ್ತದೆ.’

ADVERTISEMENT

ಇದು ಜಾಗತಿಕ ಹೂಡಿಕದಾರರ ಸಮಾವೇಶದಲ್ಲಿ ಬುಧವಾರ ನಡೆದ `ಸೆಮಿಕಂಡಕ್ಟರ್(Semiconductor)ಕ್ರಾಂತಿಯಲ್ಲಿ ಭಾರತದ ನಾಯಕತ್ವದ ಸರದಿ’ ಕುರಿತು ನಡೆದ ಗೋಷ್ಠಿಯಲ್ಲಿ ಮಾತನಾಡಿದ ಉದ್ಯಮ ಪರಿಣತರಾದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಿಇಒ ಸಂತೋಷಕುಮಾರ್, ಎನ್ಎಕ್ಸ್ ಪಿ ಸೆಮಿಕಂಡಕ್ಟರ್ಸ್(Semiconductor) ಉಪಾಧ್ಯಕ್ಷ ಹಿತೇಂದ್ರ ಗಾರ್ಗ್ ಮತ್ತು ಗ್ಲೋಬಲ್ ಫ್ಯಾಬ್ ಎಂಜಿನಿಯರಿಂಗ್ ಸೊಲ್ಯೂಷನ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಜಿತೇಂದ್ರ ಛಡ್ಡಾ ಒಕ್ಕೊರಲಿನಿಂದ ವ್ಯಕ್ತಪಡಿಸಿದ ಕಳಕಳಿಯಾಗಿತ್ತು.

ಮೊದಲಿಗೆ ಮಾತನಾಡಿದ ಸಂತೋಷಕುಮಾರ್, `ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಮುಂದಿನ ಹತ್ತು ವರ್ಷಗಳು ಭಾರತದ್ದಾಗಿವೆ. ಈ ಅವಧಿಯಲ್ಲಿ ಈ ಕ್ಷೇತ್ರದ ಈಗಿನ 40 ಬಿಲಿಯನ್ ಡಾಲರ್ ವಹಿವಾಟು 400 ಬಿಲಿಯನ್ ಡಾಲರ್ ಮೀರಲಿದೆ. ಆದರೆ, ನಮ್ಮ ಶಿಕ್ಷಣ ರಂಗದಲ್ಲಿ ಗುಣಮಟ್ಟದ ಬೋಧಕರು, ಸಂಶೋಧನೆ ಮತ್ತು ಪ್ರಾಯೋಗಿಕ ಕಲಿಕೆ ಮೂರರ ಕಡೆಗೂ ಆದ್ಯ ಗಮನ ಕೊಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸರಕಾರವು ರಾಷ್ಟ್ರೀಯ ಸಮಸ್ಯೆಗಳನ್ನು ಮುಂದಿಟ್ಟು, ಅವುಗಳಿಗೆ ದಕ್ಷ ಪರಿಹಾರ ಕಂಡುಹಿಡಿಯುವಂತಹ ಸಂಶೋಧನಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಬೇಕಾದ ಜರೂರಿದೆ’ ಎಂದು ವಾಸ್ತವ ಪರಿಸ್ಥಿತಿಯತ್ತ ಗಮನ ಸೆಳೆದರು.

ದೇಶವನ್ನು ಇನ್ನು ಕೆಲವೇ ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಯಾಗಿ ಬೆಳೆಸುವ ಗುರಿ ನಮ್ಮ ಮುಂದಿದೆ. ಇದರಲ್ಲಿ 3 ಟ್ರಿಲಿಯನ್ ಡಾಲರ್ ಇಎಸ್ಡಿಎಂ ವಲಯದ ಕೊಡುಗೆಯೇ ಆಗಿರಲಿದೆ. ಆದರೆ, ಅವಕಾಶಗಳು ಕೇವಲ ಭಾರತಕ್ಕೆ ಮಾತ್ರ ಇರುವುದಿಲ್ಲ. ಬದಲಿಗೆ ಅವು ಎಲ್ಲ ದೇಶಗಳಿಗೂ ಲಭ್ಯವಿರುತ್ತವೆ. ಅವು ನಮ್ಮದಾಗಬೇಕೆಂದರೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯ ಕಡೆಗೆ ಗಮನ ಕೊಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

Nirmala Sitharaman: ತೆರಿಗೆ ಸ್ಲ್ಯಾಬ್‌ಗಳಿಗೆ ತಿದ್ದುಪಡಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್..! #tax #farmers

ಜಿತೇಂದ್ರ ಛಡ್ಡಾ ಮಾತನಾಡಿ, ಸೆಮಿಕಂಡಕ್ಟರ್ ಕ್ಷೇತ್ರದ ಚಿಪ್ ವಿನ್ಯಾಸದಲ್ಲಿ ಭಾರತದ ಪಾಲು ಶೇಕಡ 25ರಷ್ಟಿದೆ. ಆದರೆ, ಉತ್ಪಾದನೆಯಲ್ಲಿ ನಾವು ಹಿಂದಿದ್ದೇವೆ. ಇನ್ನು 5-10 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆ ಎಲ್ಲ ಕ್ಷೇತ್ರಗಳನ್ನೂ ಆವರಿಸಿಕೊಳ್ಳಲಿದೆ. ಆಗ 15-20 ಮಿಲಿಯನ್ ಡಾಲರ್ ಹೂಡಿಕೆಯಲ್ಲಿ `ಪರ್ಸನಲ್ ಡಿಸೈನ್’ ಪರಿಣತಿಯು ಮುನ್ನೆಲೆಗೆ ಬರಲಿದೆ. ಜಗತ್ತಿನ ದೊಡ್ಡದೊಡ್ಡ ಆರ್ಥಿಕತೆಗಳೆಲ್ಲವೂ ಸೆಮಿಕಂಡಕ್ಟರ್ ಕ್ಷೇತ್ರವನ್ನೇ ನೆಚ್ಚಿಕೊಂಡಿವೆ. ಈಗ ತೈವಾನ್ ಮತ್ತು ಜಪಾನಿನಲ್ಲಿ ಸೆಮಿಕಂಡಕ್ಟರ್ ಚಿಪ್ ಉತ್ಪಾದನೆ ಸಮೃದ್ಧವಾಗಿದೆ. ನಮ್ಮಲ್ಲಿನ್ನೂ ಸೆಮಿಕಂಡಕ್ಟರ್ ವಲಯಕ್ಕೆ ಇಂಬು ಕೊಡುವಂತಹ ಕಾರ್ಯ ಪರಿಸರ ಪೂರ್ಣ ಪ್ರಮಾಣದಲ್ಲಿ ಸೃಷ್ಟಿಯಾಗಿಲ್ಲ ಎಂದು ಅಭಿಪ್ರಾಯಪಟ್ಟರು.

ಹಿತೇಶ್ ಗಾರ್ಗ್ ಮಾತನಾಡಿ, `20 ವರ್ಷಗಳ ಹಿಂದೆ ನಮ್ಮಲ್ಲಿ ಎನ್.ಎಫ್.ಸಿ.(ನಿಯರ್ ಫೀಲ್ಡ್ ಕಮ್ಯುನಿಕೇಶನ್) ತಂತ್ರಜ್ಞಾನ ಬಂದಾಗ ಅದಕ್ಕೆ ಬಳಕೆದಾರರೇ ಇರಲಿಲ್ಲ. ಇದಕ್ಕಾಗಿ ನಾವು ಹತ್ತು ವರ್ಷ ಕಾಯಬೇಕಾಯಿತು. ಆದರೆ ಈಗ ಬೆಂಗಳೂರಿನಲ್ಲೇ ನ್ಯಾನೊ ಮೀಟರ್ ಲೆಕ್ಕದಲ್ಲಿ ಚಿಪ್ ವಿನ್ಯಾಸಗಳು ಸಿದ್ಧವಾಗುತ್ತಿವೆ. ಇದೇ ತಂತ್ರಜ್ಞಾನದ ಶಕ್ತಿ. ಕರ್ನಾಟಕದ ವಿಶ್ವವಿದ್ಯಾಲಯಗಳು, ಕಾಲೇಜು ಮತ್ತು ನವೋದ್ಯಮಗಳಲ್ಲಿ ಸೆಮಿಕಂಡಕ್ಟರ್(Semiconductor) ಕ್ಷೇತ್ರದ ಬೆಳವಣಿಗೆಗೆ ಅಪಾರ ಅವಕಾಶಗಳಿವೆ ಎಂದು ನುಡಿದರು.

ಭಾರತ ಮತ್ತು ಅದರಲ್ಲೂ ಕರ್ನಾಟಕ ಸಾಫ್ಟ್ವೇರ್ ಆಡುಂಬೊಲಗಳಾಗಿವೆ. ಬೆಂಗಳೂರಿನಲ್ಲಂತೂ ಎಲೆಕ್ಟ್ರಾನಿಕ್ಸ್ ವಲಯದಲ್ಲಿ ತುಂಬಾ ಸಂಶೋಧನೆಗಳು ನಡೆಯುತ್ತಿವೆ. ಆದರೆ ಇವುಗಳಿಗೆ ತಕ್ಕಂತಹ ಮಾರುಕಟ್ಟೆಯನ್ನು ಸೃಷ್ಟಿಸುವ ಅನ್ವಯಿಕತೆಯ ಕೊರತೆ ನಮ್ಮಲ್ಲಿ ಕಾಣುತ್ತಿದೆ. ಇದರ ಜೊತೆಗೆ ಹೆಚ್ಚುಹೆಚ್ಚು ಸಹಭಾಗಿತ್ವಕ್ಕೆ ಉತ್ತೇಜನ ಸಿಗುವಂತಾಗಬೇಕು. ಇದಿಲ್ಲದೆ ಹೋದರೆ, ಉದ್ಯಮದ ಬೆಳವಣಿಗೆ ಕುಂಟುತ್ತ ಸಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಲ್ಯಾಮ್ ರೀಸರ್ಚ್ ಉನ್ನತಾಧಿಕಾರಿ ರಂಗೇಶ್ ಗೋಷ್ಠಿಯನ್ನು ನಿರ್ವಹಿಸಿದರು

Tags: #semiconductorextrinsic semiconductorsintrinsic semiconductorp-type semiconductorsemiconductorsemiconductor (literature subject)semiconductor explained
Previous Post

ಉದಯಗಿರಿ ಗಲಾಟೆ ಪ್ರಕರಣದಲ್ಲಿ ಪೊಲೀಸರ ತಪ್ಪಿಲ್ಲ; ಪೊಲೀಸರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಅದ್ದೂರಿಯಾಗಿ ನೆರವೇರಿತು ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ .

Related Posts

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
0

ಒಳಮೀಸಲಾತಿ – ಚಾರಿತ್ರಿಕ ಪ್ರಮಾದವನ್ನು ಸರಿಪಡಿಸುವ ಒಂದು ಮಾರ್ಗ ಎಂಬ ಪರಿವೆ ಇರಲಿ ನಾ ದಿವಾಕರ ಭಾಗ  4  ಕಳೆದ ಮೂರು ದಶಕಗಳಿಂದ ಸಾಂವಿಧಾನಿಕ ಅವಕಾಶವಂಚಿತ, ಸೌಲಭ್ಯ...

Read moreDetails
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
Next Post
ಅದ್ದೂರಿಯಾಗಿ ನೆರವೇರಿತು ಗುರುನಂದನ್ ಅಭಿನಯದ “ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ .

ಅದ್ದೂರಿಯಾಗಿ ನೆರವೇರಿತು ಗುರುನಂದನ್ ಅಭಿನಯದ "ರಾಜು ಜೇಮ್ಸ್ ಬಾಂಡ್" ಚಿತ್ರದ ಪ್ರೀ ರಿಲೀಸ್ ಇವೆಂಟ್ .

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada