
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೀತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಿವರಾಮೇಗೌಡ ಸೇರ್ಪಡೆ ಆದರು. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್ ಉಪಸ್ಥಿತರಿದ್ದರು.
ಮಾಜಿ ಸಂಸದ ಎಲ್.ಆರ್ ಶಿವರಾಮೇ ಗೌಡ ಮತ್ತು ಪುತ್ರ ಚೇತನ್ ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ ಸೇರ್ಪಡೆ ಆಗಿದ್ದಾರೆ. ನಾಗಮಂಗಲ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ಶಿವರಾಮೇಗೌಡ ಮತ್ತು ಅವರ ಬೆಂಬಲಿಗರು ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ.

ಇತ್ತೀಚಿಗೆ ಬಿಜೆಪಿ ಸೇರಿದ್ದ ಎಲ್.ಆರ್ ಶಿವರಾಮೆಗೌಡರು ಮರಳಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆ ಆಗಿದ್ದ ಬ್ರಿಜೇಶ್ ಕಾಳಪ್ಪ ಕೂಡ ಮರಳಿ ಮಾತೃಪಕ್ಷಕ್ಕೆ ವಾಪಸ್ ಆಗಿದ್ದಾರೆ.

ಪಕ್ಷಕ್ಕೆ ಸೇರ್ಪಡೆಯಾದ ಶಿವರಾಮೇಗೌಡ ಹಾಗೂ ಚೇತನ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ ಅವರನ್ನು ಡಿ.ಕೆ ಶಿವಕುಮಾರ್ ಸ್ವಾಗತ ಮಾಡಿದರು. ಕಾಂಗ್ರೆಸ್ ಅಧಿಕಾರ ವಹಿಸಿಕೊಂಡು 100 ವರ್ಷ ಆಗಿರುವ ನೆನಪಿಗಾಗಿ ರಾಜ್ಯದಲ್ಲಿ 100 ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡುವುದಕ್ಕೆ ಕಾಂಗ್ರೆಸ್ ಪಕ್ಷ ನಿರ್ಧಾರ ಮಾಡಿದ್ದು, ಆನಂದ್ ರಾವ್ ಸರ್ಕಲ್ನಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. ಅಂದಿನಿಂದಲೇ ಎಲ್ಲಾ ಕಟ್ಟಡಗಳಿಗೆ ಅಡಿಗಲ್ಲು ಹಾಕಲಾಗುವುದು ಎಂದಿದ್ದಾರೆ.
