ರಾಜ್ಯ ಕಾಂಗ್ರೆಸ್ (Congress) ಪಾಳಯದ ಪ್ರಸಕ್ತ ರಾಜಕೀಯ ವಿದ್ಯಮಾನ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಸಂಸದ ಡಿ.ಕೆ ಸುರೇಶ್ (ask suresh) ಮತ್ತು ಕುಣಿಗಲ್ ಶಾಸಕ ರಂಗನಾಥ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ (AICC President Mallikarjuna kharge) ಭೇಟಿ ಮಾಡಿದ್ದಾರೆ.

ಸದಾಶಿವನಗರದ ಖರ್ಗೆ ನಿವಾಸಕ್ಕೆ ತರಾತುರಿಯಲ್ಲಿ ಆಗಮಿಸಿದ ಇಬ್ಬರೂ ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಹೊರಡುವುದಕ್ಕೂ ಮುನ್ನವೇ ಭೇಟಿ ಮಾಡಿ ಕೆಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆಗೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಹಲವು ಸಚಿವರು ಗೊಂದಲ ಸೃಷ್ಟಿಸುತ್ತಿದ್ದಾರೆಂದು ಅಸಮಾಧಾನ ಹೊರ ಹಾಕಿದ್ದು, ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಡಿ.ಕೆ ಸುರೇಶ್ ಒತ್ತಾಯಿಸಿದ್ದಾರೆ ಎನ್ನಲಾಗಿದೆ.