ಮೈಸೂರಿನ (Mysuru) ಉದಯಗಿರಿ ಠಾಣೆ ಮೇಲೆ (Udayagiri riots) ಕಲ್ಲು ತೂರಾಟ ನಡೆದ ಘಟನೆಯನ್ನು ವಿರೋಧಿಸಿ ಬಿಜೆಪಿ (Bjp) ನಗರದಲ್ಲಿ ಮೈಸೂರು ಚಲೋಗೆ ಮುಂದಾಗಿತ್ತು.ಆದ್ರೆ ಇದಕ್ಕೆ ಪೊಲೀಸರು ಅನುಮತಿ ನೀಡಿರಲಿಲ್ಲ. ಹೀಗಾಗಿ ಬಿಜೆಪಿ ಹೈಕೋರ್ಟ್ ಮೊರೆ ಹೋಗಿತ್ತು.

ಇದೀಗ ಹೈಕೋರ್ಟ್ ಪ್ರತಿಭಟನೆಗೆ ಅವಕಾಶ ನೀಡಿದೆ. ಈ ಬಗ್ಗೆ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮೀಕ್ಷೆ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿತ್ತು. ಹೀಗಾಗಿ ಮೈಸೂರಿನ ಫುಟ್ಬಾಲ್ ಮೈದಾನದಲ್ಲಿ ಮೈಸೂರು ಚಲೋ ಪ್ರತಿಭಟನೆಗೆ ಹೈಕೋರ್ಟ್ ಅನುಮತಿ ನೀಡಿದೆ.
ಇದೇ ವೇಳೆ 1 ಲಕ್ಷ ರೂಪಾಯಿ ಬಾಂಡ್ ನೀಡಲು ಪ್ರತಿಭಟನೆಯ ಆಯೋಜಕರಿಗೆ ನಿರ್ದೇಶನ ನೀಡಲು ಹೈಕೋರ್ಟ್ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ. ಇಂದು ಮಧ್ಯಾಹ್ನ 3:30ರ ನಂತರ ಪ್ರತಿಭಟನೆಗೆ ಅವಕಾಶ ನೀಡುವಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿದೆ.