ಕನ್ನಡ ಚಲನಚಿತ್ರ ನಟಿ ರನ್ಯಾ ರಾವ್ (Actress ranya rao) ಭಾನುವಾರ ಸಂಜೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international airport) ದುಬೈನಿಂದ (Dubai )₹ 12 ಕೋಟಿಗೂ ಹೆಚ್ಚು ಮೌಲ್ಯದ 14.8 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಈ ಕಾರ್ಯಾಚರಣೆಯ ನೇತೃತ್ವ ವಹಿಸಿ ಆಕೆಯನ್ನು ಬಂಧಿಸಿದ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಆಕೆಯ ಮನೆಯಲ್ಲಿ 2.67 ಕೋಟಿ ನಗದು ಹಾಗೂ ಸುಮಾರು 15 ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

ಇನ್ನು ಅಪಾರ ಪ್ರಮಾಣದ ನಗದು ಮತ್ತು ಚಿನ್ನ ಪತ್ತೆಯಾಗಿರುವ ಕಾರಣ, ಹವಾಲಾದಲ್ಲಿ ಭಾಗಿಯಾಗಿರುವ ಸಾಧ್ಯತೆ ಕೂಡ ಕಂಡುಬರುತ್ತಿದ್ದು, ಈ ಪ್ರಕರಣಕ್ಕೆ ED ಎಂಟ್ರಿ ಆಗುವ ಸಾಧ್ಯತೆ ನಿಚ್ಚಳವಾಗಿದೆ. ಹೀಗಾಗಿ ನಟಿ ರನ್ಯಾ ರಾವ್ ಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ ಎನ್ನಲಾಗಿದೆ.