ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ( Tejasvi surya ) ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ( Shivshri Skandaprasad ) ವಿವಾಹ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್ನಲ್ಲಿ ನೆರವೇರಿತು. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಡೆಯಿತು.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ( BY Vijayendra ) ಕೇಂದ್ರ ಸಚಿವ ವಿ ಸೋಮಣ್ಣ( V Somanna ) ಸೇರಿದಂತೆ ಅನೇಕ ಬಿಜೆಪಿ ನಾಯಕರು ವಿವಾಹ ಸಮಾರಂಭಕ್ಕೆ ಹಾಜರಾಗಿ ವಧೂವರರಿಗೆ ಶುಭ ಹಾರೈಸಿದರು.

ಶಿವಶ್ರೀ ಸ್ಕಂದಪ್ರಸಾದ್ ಮತ್ತು ತೇಜಸ್ವಿ ಸೂರ್ಯ ಸರಳ ಮತ್ತು ಸಾಂಪ್ರದಾಯಿಕ ಉಡುಪುಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದರು. ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ. ಈ ವೇಳೆ ರಾಜ್ಯ-ದೇಶದ ರಾಜಕೀಯ ಗಣ್ಯರು ಭಾಗಿಯಾಗುವ ಸಾಧ್ಯತೆಗಳಿವೆ.

ಬೆಂಗಳೂರಿನ ( Bangalore ) ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ( Gayathri Vihar ) ಸಾಂಪ್ರದಾಯಿಕವಾಗಿ ವಿವಾಹ ಕಾರ್ಯಕ್ರಮ ನಡೆಯಲಿದೆ. ತಮಿಳುನಾಡು ( Tamil nadu ) ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಇತ್ತೀಚೆಗೆ ಆರ್ಟ್ ಆಫ್ ಲಿವಿಂಗ್‌ನಲ್ಲಿ ನಡೆದ ಕಾರ್ಯಕ್ರಮದ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಶಿವಶ್ರೀ ಅವರು ಗಾಯನವಲ್ಲದೆ ಭರತನಾಟ್ಯ ಕಲಾವಿದೆ ಕೂಡ ಹೌದು. ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಆಯೋಧ್ಯೆ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶಿವಶ್ರೀ ಅವರು ಹಾಡಿದ ರಾಮನ ಕುರಿತ ಗೀತೆಯನ್ನು ಮೆಚ್ಚಿ ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.