ಕರ್ನಾಟಕದಲ್ಲಿನ 9 ಹೊಸ ವಿಶ್ವವಿದ್ಯಾಲಯಗಳನ್ನು ( Universities ) ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನುವ ಸುದ್ದಿ ಹರಿದಾಡಿದ್ದು, ಹಣಕಾಸಿನ ಕೊರತೆಯಿಂದಾಗಿ ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ ಹತ್ತು ಹೊಸ ವಿಶ್ವವಿದ್ಯಾಲಯಗಳ ಪೈಕಿ ಒಂಭತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚವ ಬಗ್ಗೆ ಚರ್ಚೆಗಳು ನಡೆದಿದ್ದವು. ಆದ್ರೆ, ಇದರ ವಿರುದ್ಧ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇದೀಗ ಇದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ( DK Shivakumar ) ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚವ ಬಗ್ಗೆ ಚರ್ಚೆ ನಡೆದಿದ್ದು, ಇದರ ವಿರುದ್ಧ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ( R. Ashok ) ಅವರು ಇಂದು ವಿಧಾನಸಭೆ ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ( DK Shivakumar ) ಕೂಡಲೇ ಎದ್ದು ನಿಂತು ವಿಶ್ವವಿದ್ಯಾಲಯಗಳನ್ನು ( Universities ) ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ. ಮುಚ್ಚುತ್ತಿದ್ದೇವೆ ಅಂತಲ್ಲ ಎಂದು ಸ್ಪಷ್ಟಪಡಿಸಿದರು.

ಮೈಸೂರು ವಿಶ್ವವಿದ್ಯಾಲಯದಲ್ಲಿ( Mysur University ) ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ ಅಥವಾ ಮಂಡ್ಯ ವಿವಿಯಲ್ಲಿ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸ ಇದೆ. ಎಸ್.ಎಂ. ಕೃಷ್ಣ( SM Krishna ) ವಿದೇಶಾಂಗ ಸಚಿವರಾಗಿದ್ದಾಗ ವಿಜಯೇಂದ್ರ ಅವರ ಅಕ್ಕನ ಮಗನಿಗೆ ಪಿಇಎಸ್ ವಿವಿಯಲ್ಲಿ ಓದಿದ್ದರೂ ವಿದೇಶಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಸಿಗಲಿಲ್ಲ. ಬೆಂಗಳೂರಿಗೆ ಪಿಇಎಸ್ ಫೇಮಸ್ ಕಾಲೇಜು. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವೇಶ ಸಿಗಲಿಲ್ಲ. ವಿಶ್ವವಿದ್ಯಾಲಯಗಳನ್ನು ಬೇರೆ ವಿವಿಗಳ ಜತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ ಮುಚ್ಚುತ್ತಿದ್ದೇವೆ ಅಂತಲ್ಲ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ವಿಶ್ವವಿದ್ಯಾಲಯ,( Bangalore University ) ಮೈಸೂರು ವಿವಿಗಳಿಗೆ ( Mysore University ) ಅವುಗಳದ್ದೇ ಆದ ಸ್ಥಾನ, ಮೌಲ್ಯ ಇದೆ ಎಂದು ಹೇಳಿದ ಡಿಕೆ ಶಿವಕುಮಾರ್, ಬೈ ಚಾಯ್ಸ್ ಐಯಾಮ್ ಎಜ್ಯುಕೇಶನಿಸ್ಟ್, ಪೊಲಿಟಿಕ್ಸ್ ಈಸ್ ಮೈ ಫ್ಯಾಷನ್ ಎಂದರು.