ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರು 2025-26ನೇ ಸಾಲಿನ ಕರ್ನಾಟಕದ ಮುಂಗಡ ಪತ್ರವನ್ನು ಮಂಡಿಸುತ್ತಿದ್ದು ಇದು ಅವರ 16ನೇ ಬಜೆಟ್ ಆಗಿದೆ.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮೊತ್ತ ಹೊಂದಿರುವ ಬಜೆಟ್ ಒಟ್ಟು ₹4,09,549 ಲಕ್ಷ ಕೋಟಿ ರೂಪಾಯಿ ಆಗಿದೆ. ಎಲ್ಲ ಕ್ಷೇತ್ರಗಳಿಗೂ ಅನುದಾನ ಘೋಷಣೆ ಮಾಡಿರುವ ಸಿಎಂ, ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ಘೋಷಣೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಈ ಸಲ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ ( Education Departmen ) ಭರ್ಜರಿ ಕೊಡುಗೆ ನೀಡಿದ್ದಾರೆ. ಶಿಕ್ಷಣ ಇಲಾಖೆಗೆ 45,286 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವಂತೆ ಹೋರಾಟ ಮಾಡಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಸಿಎಂ ಗೌರವಧನದಲ್ಲಿ 1 ಸಾವಿರ ಏರಿಕೆ ಮಾಡಿದ್ದಾರೆ. ಅದರಂತೆ ಮಕ್ಕಳಿಗೆ ನೀಡುವ ಹಾಲು, ಮೊಟ್ಟೆ ಹಾಗೂ ಬಾಳೆಹಣ್ಣುಗಳ ವಿತರಣೆಯನ್ನು ವಿಸ್ತರಣೆ ಮಾಡಿದ್ದಾರೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ( guest lecturer )ಗೌರವಧನ 2,000 ರೂಪಾಯಿ ಹೆಚ್ಚಳ ಮಾಡಿರುವುದು ಶಿಕ್ಷಕರಿಗೆ ಖುಷಿ ತಂದಿದೆ. ಸಿಇಟಿ, ಎನ್ಇಇಟಿ ಹಾಗೂ ಜೆಇಇ ತರಬೇತಿಗಾಗಿ 25,000 ವಿದ್ಯಾರ್ಥಿಗಳಿಗೆ 5 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿದೆ. ಸದ್ಯ ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಅನುದಾನಗಳನ್ನು ಗಮನಿಸಿದರೆ..