• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಇಲ್ಲ- ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಸದ್ಯದಲ್ಲೇ ಕ್ಲಿಯರ್‌- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪ್ರತಿಧ್ವನಿ by ಪ್ರತಿಧ್ವನಿ
March 7, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯನ್ನು ( Gruha lakshmi Scheme ) ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ( Lakshmi Hebbalkar ) ತಿಳಿಸಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದಿಯೋ ಹಾಗೆಯೇ ಮುಂದುವರೆಯಲಿದೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವೆ ಸ್ಪಷ್ಟಪಡಿಸಿದರು.

  • ಅನುದಾನ ಸರಿಯಾಗಿ ಸದ್ಭಳಕೆ

ಕೆಲವೊಂದು ಇಲಾಖೆಗಳಲ್ಲಿ ಕಳೆದ ಬಜೆಟ್‌ನಲ್ಲಿ ನೀಡಿದ ಹಣವೇ ಖರ್ಚಾಗುತ್ತಿಲ್ಲವೆಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ನನ್ನ ಇಲಾಖೆ ಇಷ್ಟು ವರ್ಷ ಬೇರೆ ರೀತಿಯಲ್ಲಿ ಇತ್ತು. ಆದರೆ, ಈಗ ಬಹುದೊಡ್ಡ ಗಾತ್ರದ ಬಜೆಟ್‌ನ್ನು ಒಳಗೊಂಡಂತಹ ಇಲಾಖೆಯಾಗಿದೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆ ಬಂದಿರುವುದರಿಂದ ಒಂದು ವರ್ಷಕ್ಕೆ ಸುಮಾರು 32 ಸಾವಿರ ಕೋಟಿ ರೂಪಾಯಿಯಷ್ಟು ಹಣವನ್ನು ಗೃಹಲಕ್ಷ್ಮೀಯವರಿಗೆ ನೀಡಲಾಗುತ್ತಿದೆ. ನಮ್ಮ ಇಲಾಖೆಗೆ ನೀಡಿದ ಅನುದಾನ ಪೈಕಿ ಯಾವುದೇ ಅನುದಾನ ಉಳಿದಿಲ್ಲ. ಎಲ್ಲವೂ ಸರಿಯಾದ ರೀತಿಯಲ್ಲಿ ಬಳಕೆಯಾಗಿದೆ. ಶೇಕಡ 10ರಷ್ಟು ಮಾತ್ರ ಅನುದಾನ ಇದೆ. ಅದು ಕೂಡ ಮಾರ್ಚ್‌ 31ರೊಳಗೆ ಖರ್ಚಾಗಲಿದೆ ಎಂದು ಸಚಿವರು ಹೇಳಿದರು.

  • ಸದ್ಯದಲ್ಲೇ ಜನವರಿ, ಫೆಬ್ರವರಿ ಹಣ ಕ್ಲಿಯರ್‌

ಗೃಹಲಕ್ಷ್ಮೀ ಹಣ ಎರಡ್ಮೂರು ತಿಂಗಳಿಗೊಮ್ಮೆ ಬರುತ್ತದೆ ಎನ್ನುವುದು ತಪ್ಪು. ಸರ್ಕಾರ ಬಹುದೊಡ್ಡ ಯೋಜನೆ ಮಾಡಿದೆ. ನವೆಂಬರ್‌, ಡಿಸೆಂಬರ್‌ ತಿಂಗಳ ಹಣ ಕ್ಲೀಯರ್‌ ಆಗಿದೆ. ಜನವರಿ, ಫೆಬ್ರವರಿ ತಿಂಗಳ ಹಣ ಸದ್ಯದಲ್ಲೇ ಕ್ಲಿಯರ್‌ ಆಗಲಿದೆ. ಹತ್ತು-ಹದಿನೈದು ದಿನದ ಒಳಗೆ ಕ್ಲಿಯರ್‌ ಆಗುತ್ತೆ ಅಂತಾ ಹೇಳಿದರು.

  • ಮಹಾರಾಷ್ಟ್ರದಲ್ಲಿ ಯೋಜನೆ ಸ್ತಬ್ಧ

ನಮ್ಮ ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಚುನಾವಣೆಗೆ ಮುನ್ನ ಎರಡು ತಿಂಗಳ ದುಡ್ಡನ್ನು ಹಾಕಿದರು. ಅಲ್ಲಿನ ʻಮಾಝಿ ಲಡಕಿ ಬಹಿನ್‌ʼ ಯೋಜನೆಗೆ ಹಣವೇ ಇಲ್ಲ. ನಮ್ಮನ್ನು ಮಾತ್ರ ಬಿಜೆಪಿಯವರು ಪ್ರಶ್ನೆ ಮಾಡುತ್ತಾರೆ ಎಂದು ಸಚಿವರು ಗುಡುಗಿದ್ದಾರೆ.. ಇನ್ನು ನಮ್ಮ ರಾಜ್ಯದಲ್ಲೇ ಗೃಹಲಕ್ಷ್ಮೀ ಹಣ ಸರಿಯಾಗಿ ತಲುಪುತ್ತಿರುವುದ.

  • ಸಿಎಂ ಸಿದ್ದರಾಮಯ್ಯನವರಿಗೆ ಅಭಿನಂದನೆ

ಸಿಎಂ ಸಿದ್ದರಾಮಯ್ಯನವರದು ಇದು ಕೊನೆಯ ಬಜೆಟ್‌ ಎಂದು ಬಿಜೆಪಿಯವರು ಹೇಳುತ್ತಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನಂತೂ ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇನೆ. 16ನೇ ದಾಖಲೆ ಬಜೆಟ್‌ ಮಂಡಿಸಿದ್ದಾರೆ. ಕರ್ನಾಟಕದಲ್ಲಿ ಎಲ್ಲರನ್ನೂ ಒಳಗೊಂಡ ಸಮಗ್ರವಾದ ಬಜೆಟ್‌ ಮಾಡುತ್ತಿರುವುದು ವಿಶೇಷ ಎಂದು ಸಚಿವರು ತಿಳಿಸಿದರು.

Zameer Ahmed: ಬಿಜೆಪಿವರ ಹೇಳಿಕೆಗೆ ಸಚಿವ ಜಮೀರ್‌ ಏನಂದ್ರು..! #siddaramaiah #budget2025 #zameerahmed
  • ಎಲ್ಲವೂ ಹೈಕಮಾಂಡ್‌ ತೀರ್ಮಾನ

ಸದ್ಯದಲ್ಲೇ ಸಂಪುಟ ಪುನರ್‌ ರಚನೆ ಆಗಲಿದೆ ಇದು ಕೆಲ ಸಚಿವರಿಗೆ ಕೊನೆಯ ಬಜೆಟ್‌ ಎಂದು ಹೇಳುತ್ತಿದ್ದಾರೆಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಒಳ್ಳೆಯ ಸಂದರ್ಭದಲ್ಲಿ ನಾನು ಏನನ್ನೂ ಮಾತನಾಡಲು ಹೋಗುವುದಿಲ್ಲ. ಏಕೆಂದರೆ ನಮ್ಮ ಕಾಂಗ್ರೆಸ್‌ ಪಕ್ಷದಲ್ಲಿ ಒಂದು ಶಿಸ್ತು ಇದೆ. ಏನೇ ಚರ್ಚೆ, ತೀರ್ಮಾನಗಳಿದ್ದರೂ ಅದನ್ನು ಹೈಕಮಾಂಡ್‌ ಮಾಡುತ್ತದೆ ಎಂದು ಸಚಿವೆ ಹೇಳಿದರು.

Tags: BJP‌Budjet SessionCM Siddaramaiah‌Congreess govtGruha Lakshmi SchemeJDSlakhmi hebbalkar
Previous Post

ಇಲಾಖೆಗೆ ಘೋಷಿಸಿರುವ ಅನುದಾನ ಅತ್ಯಂತ ತೃಪ್ತಿಕರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಬಜೆಟ್‌ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ..!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ಬಜೆಟ್‌ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada