• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗೋಲ್ಡ್ ಸ್ಮಗ್ಲಿಂಗ್ ಬ್ಯೂಟಿ ರಾನ್ಯಾ ರಾವ್ ಕೇಸ್ ಸಿದ್ದರಾಮಯ್ಯಗೂ ಸುತ್ತಿಕೊಳ್ಳುತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
March 11, 2025
in ಕರ್ನಾಟಕ, ರಾಜಕೀಯ
0
ಗೋಲ್ಡ್ ಸ್ಮಗ್ಲಿಂಗ್ ಬ್ಯೂಟಿ ರಾನ್ಯಾ ರಾವ್ ಕೇಸ್ ಸಿದ್ದರಾಮಯ್ಯಗೂ ಸುತ್ತಿಕೊಳ್ಳುತ್ತಾ..?
Share on WhatsAppShare on FacebookShare on Telegram

ರಾಜ್ಯದಲ್ಲಿ ಸಾಕಷ್ಟು ಸುದ್ದಿಯಲ್ಲಿ ಇರುವ ವಿಚಾರ ಅಂದ್ರೆ ನಟಿ ರಾನ್ಯ ರಾವ್. ಬೆರಳೆಣಿಕೆಯಷ್ಟು ಸಿನಿಮಾಗಳಲ್ಲಿ ಪಾತ್ರ ಮಾಡಿದ್ದರೂ ದುಬೈನಿಂದ ಚಿನ್ನ ಕಳ್ಳ ಸಾಗಾಟ ವಿಚಾರದಲ್ಲಿ ಭಾರೀ ಸುದ್ದಿ ಆಗುತ್ತಿರುವ ನಟಿ. ಇದೀಗ ನ್ಯಾಯಾಂಗ ಬಂಧನದಲ್ಲಿ ಇರುವ ರಾನ್ಯಾ ರಾವ್ ಜೊತೆಗೆ ಇಬ್ಬರು ಸಚಿವರು ಆತ್ಮೀಯರು ಎನ್ನುವ ವಿಚಾರ ಭಾರೀ ಸದ್ದು ಮಾಡುತ್ತಿದೆ. ಸಿಬಿಐ, ಇಡಿ ಸೇರಿದಂತೆ ಸಾಕಷ್ಟು ತನಿಖಾ ಸಂಸ್ಥೆಗಳು ಚಿನ್ನ ಕಳ್ಳಸಾಗಣೆ ಬಗ್ಗೆ ತನಿಖೆ ನಡೆಸುತ್ತಿವೆ. ಈ ನಡುವೆ ಸಿದ್ದರಾಮಯ್ಯ ಜೊತೆಗೂ ಆತ್ಮೀಯತೆ ಹೊಂದಿರುವ ಬಗ್ಗೆ ಗುಸುಗುಸು ಶುರುವಾಗಿದೆ.

ADVERTISEMENT
pratap simha : ನಟ್ಟು ಬೋಲ್ಟ್ ಟೈಟ್ ಮಾಡೋದ ನಿಮ್ ಬ್ರದರ್ ಹೇಳ್ಕೊಟ್ರ ಡಿಕೆಶಿ #pratidhvani #dkshivakumar

ಏರ್‌ಪೋರ್ಟ್‌ನಲ್ಲಿ ಯಾವುದೇ ಪ್ರಯಾಣಿಕ ವಿಮಾನ ನಿಲ್ದಾಣದಿಂದ ಹೊರಕ್ಕೆ ಬರುವಾಗ ಅಥವಾ ಒಳಕ್ಕೆ ಹೋಗುವಾಗ ಸಾಕಷ್ಟು ತಪಾಸಣೆಗೆ ಒಳಪಡಿಸಲಾಗುತ್ತದೆ. ಆದರೆ ಚಿನ್ನ ಕಳ್ಳ ಸಾಗಣೆಯ ಕೇಸ್‌ನಲ್ಲಿ ಬಂಧನ ಆಗಿರುವ ರಾನ್ಯಾ ರಾವ್‌ಗೆ ಯಾವುದೇ ತಪಾಸಣೆ ಮಾಡುತ್ತಿರಲಿಲ್ಲ. ಎಸ್ಕಾರ್ಟ್‌ನಲ್ಲಿ ಏರ್‌ಪೋರ್ಟ್‌ನಿಂದ ಹೊರಕ್ಕೆ ಕರೆದುಕೊಂಡು ಬರಲಾಗ್ತಿತ್ತು ಅನ್ನೋದು ಗೊತ್ತಾಗಿದೆ. ಸಾಕಷ್ಟು ಬಾರಿ ದುಬೈಗೆ ಪದೇ ಪದೇ ಹೋಗಿ ಬಂದಾಗಲೂ‌ ಎಸ್ಕಾರ್ಟ್‌ನಲ್ಲಿ ಕರೆದುಕೊಂಡು ಬರಲಾಗ್ತಿತ್ತು. ಸಾಕಷ್ಟು ಅಧಿಕಾರಿಗಳು ಚಿನ್ನ ಕಳ್ಳ ಸಾಗಣೆಯಲ್ಲಿ ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಜೊತೆಗೆ ಸಿಎಂ ಆತ್ಮೀಯವಾಗಿ ಇರುವ ಫೋಟೋಗಳು ವೈರಲ್ ಆಗಿವೆ.

ಸಿಎಂ ಸಿದ್ದರಾಮಯ್ಯ ರಾನ್ಯಾ ರಾವ್ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ರಾನ್ಯಾ ರಾವ್ ಮದುವೆಯಾದ ಸಮಯದಲ್ಲಿ ಇಂದಿನ ಗೃಹ ಸಚಿವ ಡಾ ಜಿ ಪರಮೇಶ್ವರ್ ಸೇರಿದಂತೆ ಸಾಕಷ್ಟು ರಾಜಕಾರಣಿಗಳು ಭಾಗಿಯಾಗಿದ್ದಾರೆ. ಇದೀಗ ರಾನ್ಯ ರಾವ್ ಬಂಧನ ಆಗಿರೋದಕ್ಕೆ ಕಾರಣ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಸಚಿವರು ರಾನ್ಯಾ ರಾವ್ ಜೊತೆಗೆ ಶಾಮೀಲಾಗಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ ಅನ್ನೋ ಮಾತುಗಳು ಕೇಳಿ ಬರ್ತಿದ್ದು, ಕೇಂದ್ರ ತನಿಖಾ ಸಂಸ್ಥೆಗಳ ತನಿಖೆಯಲ್ಲಿ ಸತ್ಯಾಂಶ ಹೊರಬೀಳುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗ್ತಿದೆ.

ರಾನ್ಯಾ ರಾವ್ ತಂದೆ ಹಿರಿಯ (IPS) ಪೊಲೀಸ್ ಅಧಿಕಾರಿ ಆಗಿದ್ದು, ಪೊಲೀಸ್ ಅಧಿಕಾರಿ ಆಹ್ವಾನದ ಮೇರೆಗೆ ಹೋಗಿದ್ದರ..? ಅಥವಾ ನೇರವಾಗಿ ರಾನ್ಯಾ ರಾವ್ ಆವರೇ ಸಿದ್ದರಾಮಯ್ಯ ಜೊತೆಗೆ ಸಂಪರ್ಕ ಹೊಂದಿದ್ದಾರಾ..? ಅಥವಾ ಗೋಲ್ಡ್ ಸ್ಮಗ್ಲಿಂಗ್‌ನಲ್ಲಿ ಇಬ್ಬರು ಸಚಿವರು ಭಾಗಿಯಾಗಿದ್ದಾರೆ ಎನ್ನಲಾಗ್ತಿರುವ ಸಚಿವರ ಕಡೆಯಿಂದ ರಾನ್ಯಾ ರಾವ್ ಮದುವೆಯಲ್ಲಿ ಪಾಲ್ಗೊಂಡಿದ್ರಾ..? ಅನ್ನೋ ಬಗ್ಗೆ ಇನ್ನಷ್ಟೇ ಮಾಹಿತಿ ಹೊರ ಬೀಳಬೇಕಿದೆ. ಕೇಂದ್ರ ತನಿಖಾ ಸಂಸ್ಥೆಗಳ ವಿಚಾರಣೆ ವೇಳೆ ಎಲ್ಲಾ ಮಾಹಿತಿ ಹೊರಬರಬೇಕಿದ್ದು, ಸಿದ್ದರಾಮಯ್ಯ ಕೊರಳಿಗೂ ಸುತ್ತಿಕೊಳ್ಳುತ್ತಾ ಕಾದು ನೋಡ್ಬೇಕು.

Tags: actress ranya raoactress ranya rao arresteddri team arrest ranya raoranya raoranya rao accused of gold smugglingranya rao arrestranya rao arrestedranya rao arrested in gold smuggling caseranya rao careerranya rao caseranya rao facebookranya rao fatherranya rao goldranya rao gold smugglingranya rao gold smuggling caseranya rao imagesranya rao liferanya rao newsranya roa casewho is ranya raowho is ranya roa
Previous Post

ಕಾರ್ಮಿಕ ಇಲಾಖೆಯಿಂದ 135 ಸಂಚಾರಿ ಆರೋಗ್ಯ ಘಟಕ ಲೋಕಾರ್ಪಣೆ

Next Post

ಬಜೆಟ್ ಕದನ ವಿಧಾನಸಭೆ ಅಧಿವೇಶನ ನೇರಪ್ರಸಾರ..!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post

ಬಜೆಟ್ ಕದನ ವಿಧಾನಸಭೆ ಅಧಿವೇಶನ ನೇರಪ್ರಸಾರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada