• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶನಿವಾರ ಕರ್ನಾಟಕ ಬಂದ್​.. ಇವತ್ತೇ ವಾಟಾಳ್ ನಾಗರಾಜ್​ ಎಚ್ಚರಿಕೆ..

ಕೃಷ್ಣ ಮಣಿ by ಕೃಷ್ಣ ಮಣಿ
March 20, 2025
in ಕರ್ನಾಟಕ
0
ಶನಿವಾರ ಕರ್ನಾಟಕ ಬಂದ್​.. ಇವತ್ತೇ ವಾಟಾಳ್ ನಾಗರಾಜ್​ ಎಚ್ಚರಿಕೆ..
Share on WhatsAppShare on FacebookShare on Telegram

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಂದು ವಾಟಾಳ್ ನಾಗರಾಜ್ ರ್ಯಾಲಿ ನಡೆಸಿದ್ದಾರೆ. ಶನಿವಾರದ ಕರ್ನಾಟಕದ ಬಂದ್ ಬೆಂಬಲಿಸುವಂತೆ ಬೃಹತ್ ರ್ಯಾಲಿ ಮೂಲಕ ಬೆಂಗಳೂರಿನಲ್ಲಿ ಎಚ್ಚರಿಸುವ ಕೆಲಸ ಮಾಡ್ತಿದ್ದಾರೆ. ಬೆಳಗ್ಗೆಯಿಂದ ರಾತ್ರಿವರೆಗೆ ವಾಟಾಳ್ ನಾಗರಾಜ್​ ರ್ಯಾಲಿ ಮಾಡುತ್ತಿದ್ದು, ತೆರೆದ ವಾಹನದ ಮೂಲಕ ದೊಡ್ಡ ರ್ಯಾಲಿ ಹೋರಾಟಗಾರರು ಜನರಿಗೆ ತಿಳಿಸುವ ಕೆಲಸ ಮಾಡ್ತಿದ್ದಾರೆ. ತೆರೆದ ವಾಹನದಲ್ಲಿ ಮೈಕ್ ಕಟ್ಟಿಕೊಂಡು ಬಂದ್ ಬೆಂಬಲಿಸಲು ಮನವಿ ಮಾಡಲಾಗ್ತಿದೆ. ನಗರದ ಪ್ರಮುಖ ಏರಿಯಾಗಳು, ರಸ್ತೆಗಳಲ್ಲಿ ಸಂಚರಿಸಿ ಜನರನ್ನು ಎಚ್ಚರಿಸುವ ಕೆಲಸ ಮಾಡಲಾಗ್ತಿದೆ.

ADVERTISEMENT
Assembly Session: ಶರಣು ಸಲಗರ್ ಬಜೆಟ್ ಬಗ್ಗೆ ಮಾತಾಡ್ರೀ..ರೊಚ್ಚಿಗೆದ್ದ ಸಂತೋಷ್ ಲಾಡ್..!#santhoshlad

ಬೆಂಗಳೂರಿನ ಪ್ರಮುಖ ರೋಡ್​ಗಳಲ್ಲಿ ಭರ್ಜರಿ ರ್ಯಾಲಿ ನಡೆಸಿ, ಹೋಟೆಲ್, ಲಾಡ್ಜ್, ರೆಸ್ಟೋರೆಂಟ್, ಥಿಯೇಟರ್, ಮಾಲ್, ಪಿವಿಆರ್ ಸೇರಿದಂತೆ ಎಲ್ಲಾ ಅಂಗಡಿ-ಮುಂಗಟ್ಟು ಮಾಲೀಕರಿಗೆ ಕನ್ನಡ ಒಕ್ಕೂಟ ಮನವಿ ಮಾಡುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ಮೈಸೂರು ಬ್ಯಾಂಕ್ ಸರ್ಕಲ್​ನಿಂದ ಆರಂಭವಾಗಿ ಕೆಜಿ ರೋಡ್, ಮೆಜೆಸ್ಟಿಕ್​, ಬಿಎಂಟಿಸಿ, ಕೆಎಸ್ಆರ್​​ಟಿಸಿ ಬಸ್ ಸ್ಟ್ಯಾಂಡ್, ಕೆಂಪೇಗೌಡ ಮೆಟ್ರೋ ಸ್ಟೇಷನ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಗಾಂಧಿನಗರ, ಮಂತ್ರಿ ಮಾಲ್ ಮೂಲಕ ಮಲ್ಲೇಶ್ವರಂ, ಓರಾಯನ್ ಮಾಲ್, ಯಶವಂತಪುರ ಮೂಲಕ ಲೂಲು ಮಾಲ್, ಕಮರ್ಷಿಯಲ್ ಸ್ಟ್ರೀಟ್, ಎಂಜಿ ರೋಡ್ ಸೇರಿದಂತೆ ಸಾಕಷ್ಟು ಏರಿಯಾಗಳಲ್ಲಿ ರ್ಯಾಲಿ ತೆರಳುತ್ತಿದೆ.

ಈ ರ್ಯಾಲಿಯಲ್ಲಿ ಕನ್ನಡದ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್, ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಸಾ.ರಾ. ಗೋವಿಂದು, ಕನ್ನಡಸೇನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಕನ್ನಡ ಒಕ್ಕೂಟದ ಸಂಚಾಲಕ ಹೆಚ್.ವಿ ಗಿರೀಶ್ ಗೌಡ ಸೇರಿದಂತೆ, ಹಲವು ಕನ್ನಡಪರ ಸಂಘಟನೆಗಳು ಭಾಗಿಯಾಗಲಿವೆ. ‘ಕರ್ನಾಟಕ ಬಂದ್’ ಮಾಡಲು 20 ಪ್ರಮುಖ ಕಾರಣಗಳನ್ನು ಪಟ್ಟಿ ಮಾಡಲಾಗಿದ್ದು, ಈ ಎಲ್ಲಾ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಈಡೇರಿಸಲು ಆಗ್ರಹ ಮಾಡಲಾಗ್ತಿದೆ.

ಪ್ರಮುಖ ಬೇಡಿಕೆಗಳ ಪಟ್ಟಿಯನ್ನು ನೋಡುವುದಾದರೆ ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಇಡೀ ರಾಜ್ಯದ ಗಡಿನಾಡುಗಳು ಬೆಳವಣಿಗೆಯಾಗಬೇಕು. ಬೆಳಗಾವಿ ಉಳಿಸಬೇಕು. ಎಂ.ಇ.ಎಸ್ ನಿಷೇಧ ಮಾಡಬೇಕು. ಶಿವಸೇನೆ ಹಾಗೂ ಎಂ.ಇ.ಎಸ್ ಪುಂಡರನ್ನು ಗಡಿಪಾರು ಮಾಡಬೇಕು. ಬೆಳಗಾವಿ ಜಿಲ್ಲೆಯ ಅಧಿಕಾರದಲ್ಲಿರುವ ಎಲ್ಲಾ ರಾಜಕಾರಣಿಗಳು ರಾಜೀನಾಮೆ ಕೊಡಬೇಕು. ಸಾಂಬಾಜಿ ಪ್ರತಿಮೆಯನ್ನು ತೆಗೆಯಬೇಕು. ಕನ್ನಡ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಮಹದಾಯಿ-ಕಳಾಸ ಭಂಡೂರಿ ಕಾರ್ಯಗತವಾಗಬೇಕು. ಮೇಕೆದಾಟು ಯೋಜನೆ ಆಗಲೇಬೇಕು. ಕೊಪ್ಪಳ ಸುತ್ತ ಯಾವ ಕಾರ್ಖಾನೆಗಳು ಬೇಡವೇ ಬೇಡ. ಕರ್ನಾಟಕದಲ್ಲಿ ಪರಭಾಷಾ ದಬ್ಬಾಳಿಕೆ ನಿಲ್ಲಬೇಕು. ಕರ್ನಾಟಕದಲ್ಲಿ ಪರಭಾಷಾ ಚಿತ್ರಗಳ ಬಹಿಷ್ಕಾರ ಮಾಡಬೇಕು. ರಾಜ್ಯದಲ್ಲಿ ಹಿಂದಿ ಬೇಡವೇ ಬೇಡ ಎಂದು ಆಗ್ರಹಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಕನ್ನಡ ಮಹಾಮಹಿಮರ ಪ್ರತಿಮೆಗಳು ಸ್ಥಾಪನೆಯಾಗಬೇಕು. ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ನಿಲ್ಲಬೇಕು. ಆಯ-ವ್ಯಯದಲ್ಲಿ ಕರ್ನಾಟಕ ಕಡೆಗಣನೆ ಮಾಡಲಾಗಿದೆ. ಮಂಗಳೂರು-ಕಾರವಾರ ಬಂದರು ಅಭಿವೃದ್ಧಿಯಾಗಬೇಕು. ಮೆಟ್ರೋ ದರ ಏರಿಕೆಗೆ ವಿರೋಧ, ಮೆಟ್ರೋದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿಡಲಾಗಿದೆ. ಮಾರ್ಚ್ 22ಕ್ಕೆ ಕರ್ನಾಟಕ ಬಂದ್​​ಗೆ ಕರೆ ಹಿನ್ನೆಲೆಯಲ್ಲಿ ಇಂದು ಬಂದ್ ಬೆಂಬಲಿಸುವಂತೆ ವಾಟಾಳ್ ನಾಗರಾಜ್​ ನಗರ ಪ್ರದಕ್ಷಿಣೆ ಮಾಡುತ್ತಿದ್ದಾರೆ. ತೆರೆದ ವಾಹನದಲ್ಲಿ ಬಂದ್​ಗೆ ಬೆಂಬಲ ನೀಡುವಂತೆ ವಾಟಾಳ್ ಮನವಿ ಮಾಡುತ್ತಿದ್ದಾರೆ.
Tags: Karnataka bandhkarnataka bandh 2025karnataka bandh 29karnataka bandh datekarnataka bandh fridaykarnataka bandh latest newskarnataka bandh march 22karnataka bandh newskarnataka bandh on fridaykarnataka bandh on march 22karnataka bandh on sep 29karnataka bandh on september 29karnataka bandh today live newskarnataka bandh today newskarnataka latest newskarnataka newsmarch 22 karnataka bandhvatal nagaraj karnataka bandh
Previous Post

ಕೇಂದ್ರದ ಒಪ್ಪಿಗೆ ಇಲ್ಲದೆ ರಾಮನಗರ ಹೆಸರು ಬದಲಿಸಬಹುದಾ..?

Next Post

ಮಂಡ್ಯದ ಜನರನ್ನು ಛತ್ರಿಗಳು ಎಂದಿದ್ದ ಡಿಕೆಶಿ ಮಾತಿಗೆ ಆಕ್ರೋಶ..

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
Next Post
ಮಂಡ್ಯದ ಜನರನ್ನು ಛತ್ರಿಗಳು ಎಂದಿದ್ದ ಡಿಕೆಶಿ ಮಾತಿಗೆ ಆಕ್ರೋಶ..

ಮಂಡ್ಯದ ಜನರನ್ನು ಛತ್ರಿಗಳು ಎಂದಿದ್ದ ಡಿಕೆಶಿ ಮಾತಿಗೆ ಆಕ್ರೋಶ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada