• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ ಜನರಿಗೆ ಕರೆಂಟ್​ ಶಾಕ್​.. ಆದರೆ ಫ್ರೀ ಇರೋದ್ರಿಂದ ಡೋಂಟ್​ವರಿ..

ಕೃಷ್ಣ ಮಣಿ by ಕೃಷ್ಣ ಮಣಿ
March 20, 2025
in ಕರ್ನಾಟಕ, ರಾಜಕೀಯ
0
ರಾಜ್ಯದ ಜನರಿಗೆ ಕರೆಂಟ್​ ಶಾಕ್​.. ಆದರೆ ಫ್ರೀ ಇರೋದ್ರಿಂದ ಡೋಂಟ್​ವರಿ..
Share on WhatsAppShare on FacebookShare on Telegram

ADVERTISEMENT

ರಾಜ್ಯದ ಜನರಿಗೆ ಕರೆಂಟ್ ಶಾಕ್ ನೀಡಿದ ಕೆಇಆರ್​ಸಿ. ಪ್ರತಿ ಯೂನಿಟ್ ವಿದ್ಯುತ್​​ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್​​ಸಿ ಆದೇಶ ಮಾಡಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಮ‌್ ಸಿಬ್ಬಂದಿ ಪಿಂಚಿಣಿ ಹಾಗೂ ಗ್ರಾಚ್ಯುಟಿ ಹಣವನ್ನು ಗ್ರಾಹಕರಿಂದಲೇ ವಸೂಲಿ ಮಾಡಲು 36 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಎಪ್ರಿಲ್ 1 ರಿಂದಲೇ ಹೊಸ ದರದ ಆದೇಶ ಜಾರಿ ಆಗಲಿದೆ.

2025-26 ರಲ್ಲಿ 36 ಪೈಸೆ, 2026-27 ರಲ್ಲಿ 35 ಪೈಸೆ, 2027-28 ರಲ್ಲಿ 34 ಪೈಸೆ ಹೆಚ್ಚುವರಿಯಾಗಿ ದರ ವಿಧಿಸಲು KERC ಆದೇಶದಲ್ಲಿ ಸೂಚಿಸಿದೆ. ದರ ಹೆಚ್ಚಳದಿಂದ ಮುಂದಿನ ಮೂರು ವರ್ಷದಲ್ಲಿ 8,519 ಕೋಟಿ ಹಣ ವಸೂಲಿ ಮಾಡುವ ಯೋಜನೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ 4,659 ಕೋಟಿ ಪಿಂಚಿಣಿ – ಗ್ರಾಚ್ಯುಟಿ ಹಣವನ್ನು ಹಿಂಬಾಕಿ ಉಳಿಸಿಕೊಂಡಿರುವ ವಿವಿಧ ವಿದ್ಯುತ್​ ಸಂಸ್ಥೆಗಳು.

DK Shivakumar: ವಿಜಯೇಂದ್ರ ಹೇಳಿಕೆಗೆ ಡಿಕೆ ಶಿವಕುಮಾರ್‌ ತಿರುಗೇಟು..! #byvijayendra #bjp #pratidhvani

ವಿಧಾನಸೌಧದಲ್ಲಿ ಬಿ.ವೈ ವಿಜಯೇಂದ್ರ ಮಾತನಾಡಿ, ವಿದ್ಯುತ್ ದರ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ದರಿದ್ರ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ, ಜನ ವಿರೋಧಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ, ಜನರಿಗೆ ಬೆಲೆ ಏರಿಕೆ ಗ್ಯಾರಂಟಿ ಒಂದನ್ನೇ ಕೊಟ್ಟಿರೋದು. ಇದನ್ನೊಂದೆ ಅವರು ಸರಿಯಾಗಿ ಅನುಷ್ಠಾನ ಮಾಡಿರೋದು. ಗ್ಯಾರಂಟಿ ವೈಫಲ್ಯ, ಬೆಲೆ ಏರಿಕೆಯಿಂದ ಜನ ಕಂಗೆಟ್ಟಿದ್ದಾರೆ. ಫ್ರೀ ವಿದ್ಯುತ್ ಎನ್ನುತ್ತಾರೆ ಆದರೆ ಈ ರೀತಿ ಬರೆ ಎಳೆಯುವ ಕೆಲಸ ಮಾಡ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರಿಗೆ 3 ಫೇಸ್ ವಿದ್ಯುತ್ 7 ಗಂಟೆಗಳ‌ ಕಾಲ ಕೊಡೋಕೆ ಆಗಿಲ್ಲ. ಇದನ್ನ ಸದನದಲ್ಲಿ ಪ್ರಶ್ನೆ ಮಾಡ್ತೇವೆ. ಸ್ಮಾರ್ಟ್ ಮೀಟರ್ ದರ ಏರಿಕೆ ವಿಚಾರ ಇರಬಹುದು, ವಿದ್ಯುತ್ ದರ ಏರಿಕೆ ವಿಚಾರ ಇರಬಹುದು, ರಾಜ್ಯ ಸರ್ಕಾರಕ್ಕೆ ಇದರ ಬಗ್ಗೆ ಚರ್ಚಿಸಲು ಸಮಯ ಇಲ್ಲ ಎಂದು ಕಿಡಿಕಾರಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್​​ ಬಳಿ ವಿದ್ಯುತ್​ ದರ ಏರಿಕೆ ಬಗ್ಗೆ ಮಾಧ್ಯಮದವರು ಕೇಳಿದಾಗ, ಆ ವಿಚಾರ ನನಗೆ ಗೊತ್ತಿಲ್ಲ, ಇಂಧನ ಸಚಿವರನ್ನು ಕೇಳಿ ಎಂದು ನುಣುಚಿಕೊಂಡಿದ್ದಾರೆ. ವಿದ್ಯುತ್​ ದರ ಏರಿಕೆ ಮಾಡಲಾಗಿದೆ. ಆದರೆ ಸದ್ಯಕ್ಕೆ ಇದರ ಎಫೆಕ್ಟ್​ ರಾಜ್ಯದ ಜನರ ಮೇಲೆ ಬೀಳುವುದಿಲ್ಲ. ರಾಜ್ಯ ಸರ್ಕಾರವೇ ಉಚಿತವಾಗಿ ಕೊಡುತ್ತಿರುವುದರಿಂದ ಸಾಮಾನ್ಯ ಜನರಿಗೆ ಇದರ ಬಿಸಿ ತಟ್ಟುವುದಿಲ್ಲ ಎನ್ನಬಹುದು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕುಮಾರಸ್ವಾಮಿ ವಿರುದ್ಧ ರಾಜ್ಯ ಸರ್ಕಾರ ದ್ವೇಷ ಸಾಧಿಸ್ತಿದ್ಯಾ..?

Next Post

ಅವಾಗ ರಮೇಶ್ ಜಾರಕಿ ಹೋಳಿ ಇವಾಗ ಕೆ ಎನ್ ರಾಜಣ್ಣ ಹನಿ ಟ್ರ್ಯಾಪ್ ಬಲೆಗೆ ಬಿದ್ರಾ..?

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
Next Post
ಅವಾಗ ರಮೇಶ್ ಜಾರಕಿ ಹೋಳಿ ಇವಾಗ ಕೆ ಎನ್ ರಾಜಣ್ಣ ಹನಿ ಟ್ರ್ಯಾಪ್ ಬಲೆಗೆ ಬಿದ್ರಾ..?

ಅವಾಗ ರಮೇಶ್ ಜಾರಕಿ ಹೋಳಿ ಇವಾಗ ಕೆ ಎನ್ ರಾಜಣ್ಣ ಹನಿ ಟ್ರ್ಯಾಪ್ ಬಲೆಗೆ ಬಿದ್ರಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada