• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್​.. ಡಿ.ಕೆ ಶಿವಕುಮಾರ್​ ಮೇಲೆ ಗುಮಾನಿನಾ..?

ಕೃಷ್ಣ ಮಣಿ by ಕೃಷ್ಣ ಮಣಿ
March 21, 2025
in ಕರ್ನಾಟಕ, ರಾಜಕೀಯ
0
ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್​.. ಡಿ.ಕೆ ಶಿವಕುಮಾರ್​ ಮೇಲೆ ಗುಮಾನಿನಾ..?
Share on WhatsAppShare on FacebookShare on Telegram

ADVERTISEMENT

ಸಹಕಾರಿ ಸಚಿವರ ಮೇಲೆ ಹನಿಟ್ರಾಪ್ ಆಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ನೇರವಾಗಿ ಸದನದಲ್ಲಿ ಹೇಇದ ಬಳಿಕ ಸ್ವತಃ ಸಚಿವ ರಾಜಣ್ಣ ಕೂಡ ಹನಿಟ್ರ್ಯಾಪ್​ ಯತ್ನ ನಡೆದಿತ್ತು ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ಹನಿಟ್ರ್ಯಾಪ್ ನಡೆದಿರೋದು ಸತ್ಯ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಸಹ ಒಪ್ಪಿಕೊಂಡಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು. ಸ್ಪೆಷಲ್ ಸ್ಕ್ವಾಡ್ ನೇಮಕ ಮಾಡಬೇಕು. ಯಾರು ಹನಿಟ್ರ್ಯಾಪ್‌ಗೆ ಎಷ್ಟು ಇನ್ವೆಸ್ಟ್ ಮಾಡಿದ್ದಾರೆ..? ಯಾವ ಉದ್ದೇಶಕ್ಕೆ ಮಾಡಿದ್ದಾರೆ..? ಹನಿಟ್ರ್ಯಾಪ್ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರ..? ಇದೆಲ್ಲ ಸಮಗ್ರ ಚರ್ಚೆಯಾಗಬೇಕು ಎಂದು ಪಕ್ಷಾತೀತವಾಗಿ ಒತ್ತಾಯ ಕೇಳಿ ಬಂದಿದೆ.

Priyank Kharge vs AshwathNarayan :ಪೈಲ್ಸ್‌ ಬಂದಿರುವವರ ಹಾಗೇ ಪದೇಪದೇ ಎದ್ದೆದ್ದು ನಿಲ್ತೀರಲ್ಲ ಕೂತ್ಕೊಳ್ರೀ..!

ಇನ್ನು ಹನಿಟ್ರ್ಯಾಪ್​ ಮಾಡಿಸಿದವರು ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಅನ್ನೋದು ಸಾಕಷ್ಟು ಜನರ ಗುಮಾನಿ. ಇದೇ ಕಾರಣಕ್ಕೆ ಮುಂದೆ ಸಿಎಂ ಆಗಬೇಕೆಂದು ಆಸೆ ಇಟ್ಟುಕೊಂಡವರು ಈ ರೀತಿ ಮಾಡ್ತಿದ್ದಾರೆ ಎಂದಿದ್ದಾರೆ ಯತ್ನಾಳ್. ಬಿಜೆಪಿ ಶಾಸಕ ಮುನಿರತ್ನ ಸದನದಲ್ಲಿ ಕಣ್ಣೀರು ಹಾಕಿದ್ದು, ಯಾರ ರಾಜಕೀಯ ಜೀವನವನ್ನು ಈ ರೀತಿಯ ಕೃತ್ಯದಿಂದ ಮುಗಿಸಬಾರದು. ನನ್ನ ಮೇಲೆ ರೇಪ್ ಕೇಸ್ ಹಾಕಿ ನನ್ನ ಜೀವನವನ್ನೇ ಹಾಳು ಮಾಡಿದ್ದಾರೆ. ರಮೇಶ್ ಜಾರಕಿಹೊಳಿಯ ಭವಿಷ್ಯ ಹಾಳು ಮಾಡಿದ್ರು. ಆ ಬಳಿಕ ರೇವಣ್ಣ, ಸೂರಜ್​ ರೇವಣ್ಣ, ಈಗ ಸಚಿವ ಕೆ‌ ಎನ್ ರಾಜಣ್ಣ ಎಂದು ನೇರವಾಗಿ ಡಿ.ಕೆ ಶಿವಕುಮಾರ್​ ವಿರುದ್ಧ ಮುನಿರತ್ನ ಮಾತನಾಡಿದ್ದಾರೆ. ಜೊತೆಗೆ ಅಜ್ಜಯ ಮತ್ತು ಶನಿ ಮಹಾತ್ಮನ ಫೋಟೋ ತೋರಿಸಿ ಪ್ರಮಾಣ ಮಾಡಲಿ ಎಂದು ಸವಾಲು ಕೂಡ ಹಾಕಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ತೀವ್ರ ಸದ್ದು ಮಾಡುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಸಿಎಂ‌ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ ಕೆಲವು ಸಚಿವರು, ಹನಿಟ್ರ್ಯಾಪ್ ಮಾಸ್ಟರ್ ಮೈಂಡ್ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಗೆ ಗಂಭೀರ ಚರ್ಚೆ ನಡೆಸಿದ್ದಾರೆ. ಸಿಎಂ ಬಳಿ ದಾಖಲೆಗಳನ್ನ ತೋರಿಸಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಹನಿಟ್ರ್ಯಾಪ್ ಕುರಿತು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ ಬಳಿಕ ಗೃಹ ಸಚಿವರಿಂದಲೂ ಸಿಎಂ ಮಾಹಿತಿ ಪಡೆದಿದ್ದಾರೆ. ಪೊಲೀಸರಿಗೆ ದೂರು ನೀಡುವುದು ಜೊತೆಗೆ ಕಾನೂನು ಹೋರಾಟ ಕುರಿತು ಸಿಎಂ ಜೊತೆ ಮಾತುಕತೆ ನಡೆದಿದೆ.

ಹನಿ ಟ್ರ್ಯಾಪ್ ಒಳಾಗಿರುವ ಬಗ್ಗೆ ಖಚಿತ ಪಡಿಸಿದ ಸತೀಶ್​ ಜಾರಕಿಹೊಳಿ, ಸಚಿವರ ಮೇಲೆ ಎರಡು ಸಲ ಹನಿ ಟ್ರ್ಯಾಪ್ ಆಗಿದೆ. ಅದನ್ನ ಕೆಲವರು ಬಂಡವಾಳ ‌ಮಾಡಿಕೊಂಡಿದ್ದಾರೆ. ಸಂಬಂಧ ಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೀನಿ. ಇದಕ್ಕೆ ‌ಕಡಿವಾಣ ಹಾಕಬೇಕು. ಇದರಲ್ಲಿ ‌ನಮ್ಮವರು ಅಷ್ಟೇ ಅಲ್ಲ, ಬೇರೆ ಪಕ್ಷದ ನಾಯಕರು ಕೂಡ ಹನಿ ಟ್ರ್ಯಾಪ್ ನಲ್ಲಿ ಸಿಲುಕಿದ್ದಾರೆ. ಇದು ಇಲ್ಲಿಗೆ ನಿಲ್ಲಬೇಕು. ಈ ವಿಚಾರವಾಗಿ ಸಿಎಂ ಮತ್ತು ಗೃಹ ಸಚಿವರ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ. ಷಡ್ಯಂತ್ರದ ಬಗ್ಗೆ ಸಿಎಂಗೆ ವಿವರಣೆ ನೀಡುವಾಗ ಸಚಿವ ರಾಜಣ್ಣ ಕೂಡ ಭಾವುಕರಾಗಿ ಕಣ್ಣೀರು ಇಟ್ಟಿದ್ದಾರೆ. ನನ್ನ ರಾಜಕೀಯ ಜೀವನವನ್ನೇ ಮುಗಿಸಲು ಈ ರೀತಿ ಮಾಡಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ. ನೀನು ದೂರು ಕೊಟ್ಟರೆ, ಬಯಸಿದರೆ ಉನ್ನತಮಟ್ಟದ ತನಿಖೆ ಮಾಡಿಸುತ್ತೇನೆಂದು ಸಿಎಂ ಭರವಸೆ ನೀಡಿ ಸಂತೈಸಿದ್ದಾರೆ.

ಕನ್ನಡ ನಾಡು ಸುಂಸ್ಕೃತ ರಾಜ್ಯ. ಹನಿಟ್ರ್ಯಾಪ್ ಪ್ರಕರಣವನ್ನು ಯಾರೂ ‌ಸಹಿಸಲಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ. ಜನಪ್ರತಿನಿಧಿಗಳನ್ನ ಬ್ಲಾಕ್ ಮೇಲ್ ಮಾಡ್ತಾರೆ. 224 ಶಾಸಕರು ಸದನದಲ್ಲಿದ್ದೇವೆ. ಈ ರೀತಿ ಬ್ಲಾಕ್ ಮೇಲ್ ಮಾಡಿದ್ರೆ ಹೇಗೆ..? ಎಂದು ಹನಿಟ್ರ್ಯಾಪ್ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದ್ದಾರೆ. ಈ ವೇಳೆ ಮಧ್ಯಪ್ರವೇಶ ಮಾಡಿದ ಸಚಿವ ಕೆ.ಎನ್ ರಾಜಣ್ಣ, ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಅದಕ್ಕೆ ನಾನು ಕ್ಲಾರಿಫೈ ಮಾಡಬೇಕಿದೆ. ಸಿಡಿ ಮಾಡೋದು, ಪೆನ್ ಡ್ರೈವ್ ಮಾಡೋದು ಸರಿಯೇ..? ಇದರಲ್ಲಿ ಒಬ್ಬರು ಇಬ್ಬರು ಅಲ್ಲ 48 ಜನರದ್ದು ಮಾಡಿದ್ದಾರೆ. ಬಹಳಷ್ಟು ಜನ ಸ್ಟೇ ತೆಗೆದುಕೊಂಡಿದ್ದಾರೆ. ಇದೊಂದು ರಾಷ್ಟ್ರ ಮಟ್ಟದ ಪ್ರಕರಣ, ಇದರ ತನಿಖೆ ಆಗಬೇಕು. ನಾನು ಗೃಹ ಮಂತ್ರಿಗಳಿಗೆ ದೂರು ಕೊಡ್ತೇನೆ. ಅವರು ಇದರ ತನಿಖೆ ಮಾಡಲಿ. ಯಾರು ಪ್ರೊಡ್ಯೂಸರ್ ಇದ್ದಾರೆ, ಡೈರೆಕ್ಟರ್ ಇದ್ದಾರೆ ಹೊರಬರಲಿ. ರೇವಣ್ಣ ಕುಟುಂಬದ ಮೇಲೂ ಆಗಿದೆ. ಈಗ ನನ್ನ ಮೇಲೂ ಆಗಿದೆ ಎಂದು ಸಚಿವ ಕೆ.ಎನ್.ರಾಜಣ್ಣ ತನಿಖೆಗೆ ಒತ್ತಾಯ ಮಾಡಿದ್ದಾರೆ.

Tags: ap political newshanitrap ke mamle ka khulasaIndian PoliticskaranatakapoliticsKarnataka Politicskerala policepolice patrolpoliticalpolitical 360political comedyPolitical Controversypolitical manipulationpolitical newspolitical scandalpolitical sensationpolitical updatespolitical360political360 puttappapoliticalnewsPoliticspolitics newsscandal in politicstelangana political news
Previous Post

ರಾಜ್ಯ ರಾಜಕಾರಣದ ಹನಿ ಟ್ರ್ಯಾಪ್ ವಿವಾದ ದೆಹಲಿ ಗೆ ವಿವರ ಕೊಡಲು ಸಜ್ಜಾದ ಸಿಎಂ

Next Post

ಸಚಿವ ರಾಜಣ್ಣಗೆ ಹನಿಟ್ರ್ಯಾಪ್​.. ಬಿಜೆಪಿ ಲೀಡರ್ಸ್​ ಏನಂತಾರೆ..?

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ಸಚಿವ ರಾಜಣ್ಣಗೆ ಹನಿಟ್ರ್ಯಾಪ್​.. ಬಿಜೆಪಿ ಲೀಡರ್ಸ್​ ಏನಂತಾರೆ..?

ಸಚಿವ ರಾಜಣ್ಣಗೆ ಹನಿಟ್ರ್ಯಾಪ್​.. ಬಿಜೆಪಿ ಲೀಡರ್ಸ್​ ಏನಂತಾರೆ..?

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!