• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವನಹಳ್ಳಿ ಬಳಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಜಾಗ: ಆಭರಣ ಉದ್ಯಮಿಗಳಿಗೆ ಆಹ್ವಾನ‌ ನೀಡಿದ ಸಚಿವ ಎಂ.ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
March 21, 2025
in Top Story, ಕರ್ನಾಟಕ, ವಿಶೇಷ, ಸೌಂದರ್ಯ
0
ದೇವನಹಳ್ಳಿ ಬಳಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆಗೆ ಜಾಗ: ಆಭರಣ ಉದ್ಯಮಿಗಳಿಗೆ ಆಹ್ವಾನ‌ ನೀಡಿದ ಸಚಿವ ಎಂ.ಬಿ ಪಾಟೀಲ
Share on WhatsAppShare on FacebookShare on Telegram

ಬೆಂಗಳೂರು: ಆಭರಣ ರಫ್ತಿಗೆ ಉತ್ತೇಜನ ನೀಡಲು ಸರ್ಕಾರ ಒತ್ತು ನೀಡಲಿದ್ದು, ದೇವನಹಳ್ಳಿ ವಿಮಾನ ನಿಲ್ದಾಣ ಸಮೀಪದಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಜಾಗ ನೀಡಲು ರಾಜ್ಯ ಸರ್ಕಾರ ಮುಕ್ತವಾಗಿದ್ದು, ಇದನ್ನು ಆಭರಣ ಉದ್ಯಮಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಶುಕ್ರವಾರ ಹೇಳಿದರು.

ADVERTISEMENT
DK Shivakumar: ನದಿಗಳ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಡಿಕೆಶಿ..! #Madikeri #DKShivakumar #Congress

ಇಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ಆಭರಣ ಪ್ರದರ್ಶನ ಮತ್ತು ವಾಣಿಜ್ಯ ಮೇಳಕ್ಕೆ ಅವರು ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಆಭರಣಗಳ ರಫ್ತಿಗೆ ಇರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹೂಡಿಕೆ ಮಾಡಲು ಉದ್ಯಮಿಗಳು ಮುಂದಾಗಬೇಕು ಎಂದರು. ಸುಸ್ಥಿರತೆಗೆ ಒತ್ತು ನೀಡುವ ದಿಸೆಯಲ್ಲಿ ‘ನೆಟ್ ಜೀರೋ ಜ್ಯುವೆಲ್ಲರಿ ಪಾರ್ಕ್’ ನಿರ್ಮಿಸಲು ಹಿತಾಸಕ್ತಿದಾರರು ಗಮನ ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

ಇದೇ 24ರವರೆಗೆ ನಡೆಯಲಿರುವ ದೇಶದ ಮೂರನೇ ಅತಿದೊಡ್ಡ ಚಿನ್ನಾಭರಣ ಮೇಳವನ್ನು ಮುಂಬರುವ ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ದಿ ಜೆಮ್ ಅಂಡ್ ಜ್ಯೂವೆಲರಿ ಎಕ್ಸ್ಪೋರ್ಟ್ ಪ್ರಮೋಶನ್ ಕೌನ್ಸಿಲ್ ಏರ್ಪಡಿಸಿದೆ.

ವಿಶ್ವ ದರ್ಜೆಯ ಮೂಲಸೌಕರ್ಯ, ಪುರೋಗಾಮಿ ನೀತಿಗಳು ಮತ್ತು ಕೌಶಲ್ಯಪೂರ್ಣ ಕೆಲಸಗಾರರನ್ನು ಹೊಂದಿರುವ ರಾಜ್ಯವು ಆಭರಣ ತಯಾರಿಕೆ ಮತ್ತು ರಫ್ತು ವಹಿವಾಟಿಗೆ ಪ್ರಶಸ್ತ ತಾಣವಾಗಿದೆ. ಇದಕ್ಕೆ ಪೂರಕವಾಗಿ, ಉಡುಪಿಯಲ್ಲಿ ಇರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಜೆಮ್ ಅಂಡ್ ಜ್ಯೂವೆಲ್ಲರಿ ಸಂಸ್ಥೆಯು ಆಭರಣ ಕುಶಲಕರ್ಮಿಗಳನ್ನು ಸಜ್ಜುಗೊಳಿಸುತ್ತಿದೆ ಎಂದು ಸಚಿವರು ವಿವರಿಸಿದರು.

Assembly Session: ಬಿಜೆಪಿ ಶಾಸಕ ಧೀರಜ್ ವಿರುದ್ಧ ಶಿವಲಿಂಗೇಗೌಡ ರೋಷಾವೇಶ..! #DheerajMuniraj #bjp #congress

ದೇಶದಲ್ಲಿ ವಾರ್ಷಿಕ 32 ಬಿಲಿಯನ್ ಡಾಲರ್ ಮೊತ್ತದ ಆಭರಣ ವಹಿವಾಟು ನಡೆಯುತ್ತಿದೆ. ಮುಖ್ಯವಾಗಿ ಇಲ್ಲಿಂದ ಅಮೆರಿಕ, ಅರಬ್ ಸಂಯುಕ್ತ ಸಂಸ್ಥಾನ, ರಷ್ಯಾ, ಸಿಂಗಪುರ್ ಮತ್ತು ಹಾಂಕಾಂಗ್ ಮಾರುಕಟ್ಟೆಗೆ ಹೆಚ್ಚಿನ ಆಭರಣಗಳನ್ನು ಕಳುಹಿಸಲಾಗುತ್ತಿದೆ. ಉಡುಪಿಯಲ್ಲಿರುವ ಕಾಮನ್ ಫೆಸಿಲಿಟಿ ಸೆಂಟರ್ ಐದು ವರ್ಷಗಳ ಹಿಂದೆ 55 ವಿದ್ಯಾರ್ಥಿಗಳನ್ನು ಹೊಂದಿತ್ತು. ಈಗ ಅಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಅವರಿಗೆ ಹೊಸ ಬಗೆಯ ಕೌಶಲ್ಯಗಳನ್ನು ಕಲಿಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಯುವಜನರಿಗೆ ಆದ್ಯತೆ ನೀಡಲಾಗಿದೆ ಎಂದು ಪಾಟೀಲ ಅವರು ತಿಳಿಸಿದರು.

ಪ್ರಸ್ತುತ ಮೇಳದಲ್ಲಿ ಆಭರಣ ವಲಯದ 80 ಪ್ರಮುಖ ಕಂಪನಿಗಳು ಪಾಲ್ಗೊಂಡಿವೆ. ಇವು ಹೊಸ ಬಗೆಯ ಯಂತ್ರೋಪಕರಣಗಳು, ತಂತ್ರಜ್ಞಾನ ಮತ್ತು ಪ್ಯಾಕೇಜಿಂಗ್ ಬಗ್ಗೆ ಗಮನ ಕೇಂದ್ರೀಕರಿಸಿವೆ. ಜತೆಗೆ ಭಾರತದ 15 ಸಾವಿರ ಮತ್ತು ವಿದೇಶಗಳ 300ಕ್ಕೂ ಹೆಚ್ಚು ಆಭರಣ ಖರೀದಿದಾರರು ಭಾಗವಹಿಸುತ್ತಿದ್ದಾರೆ. ಈಗ ಹೊಸ ಬಗೆಯ ವಿನ್ಯಾಸಗಳ ಆಭರಣಗಳಿಗೆ ಇರುವ ಬೇಡಿಕೆಯನ್ನು ತಿಳಿಸಿದರೆ, ಅಂತಹ ವಿನ್ಯಾಸಗಳನ್ನು ಅಕ್ಷಯ ತೃತೀಯ ವೇಳೆಗೆ ಸಿದ್ಧಪಡಿಸಿ, ವ್ಯಾಪಾರಿಗಳಿಗೆ ಪೂರೈಸಲಾಗುವುದು ಎಂದರು.

ರಾಜ್ಯವು ಉದ್ಯಮಸ್ನೇಹಿ ಮತ್ತು ರಫ್ತುಕೇಂದ್ರಿತ ಹೊಸ ಕೈಗಾರಿಕಾ ನೀತಿಯನ್ನು ಹೊಂದಿದೆ. ವಿದೇಶಿ ಹೂಡಿಕೆಯಲ್ಲಿ ದೇಶದಲ್ಲಿ ಮೊದಲ ಸ್ಥಾನದಲ್ಲಿರುವ ಕರ್ನಾಟಕವು ಜಿ.ಎಸ್.ಟಿ. ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಇದಲ್ಲದೆ, ಉದ್ಯಮ ಬೆಳವಣಿಗೆಗೆ ಸಂಬಂಧಿಸಿದ ಇನ್ನೂ ಕೆಲವಾರು ಸೂಚ್ಯಂಕಗಳಲ್ಲಿ ರಾಜ್ಯವು ಮೇಲ್ಪಂಕ್ತಿಯಲ್ಲಿದೆ. 2033ರ ವೇಳೆಗೆ ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಲಿದ್ದು, ಅದಕ್ಕಾಗಿ ಈಗಾಗಲೇ ಕಾರ್ಯ ಆರಂಭವಾಗಿದೆ. ಹೀಗಾಗಿ, ಜವಳಿ ಉದ್ದಿಮೆದಾರರು ರಾಜ್ಯದಲ್ಲಿ ಹೂಡಿಕೆ ಮಾಡುವತ್ತ ಗಮನ ಹರಿಸಬೇಕು. ಈ ವಲಯದ ಬೆಳವಣಿಗೆಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನೂ ಸರಕಾರವು ಒದಗಿಸಲಿದೆ ಎಂದು ಬೆಂಬಲದ ಮಾತುಗಳನ್ನಾಡಿದರು.

Assembly Session: ಸಚಿವರಿಗೇ ಹನಿಟ್ರ್ಯಾಪ್​​ ಬಲೆಯಲ್ಲಿ ಸಿಕ್ಕಾಕೊಂಡ್ರೆ ನಮ್ಮ ಗತಿ ಏನು ಎಂದ ಅಶೋಕ್..! #bjp

ಕಾರ್ಯಕ್ರಮದಲ್ಲಿ ಸಂಘಟನೆಯ ಅಧ್ಯಕ್ಷ ಕಿರೀಟ್ ಭನ್ಸಾಲಿ, ಸಂಚಾಲಕ ನೀರವ್ ಭನ್ಸಾಲಿ, ದಕ್ಷಿಣ ಭಾರತದ ಅಧ್ಯಕ್ಷ ಮಹೇಂದ್ರ ತಾಯಲ್, ಕಾರ್ಯಕಾರಿ ನಿರ್ದೇಶಕ ಸವ್ಯಸಾಚಿ ರಾಯ್, ಚೇತನ್ ಮೆಹತಾ, ಶ್ರೀಕಾಂತ್ ಕಾರಿ, ವಿಧಾನ ಪರಿಷತ್ ಸದಸ್ಯ ಟಿ ಎ ಶರವಣ, ಪ್ರಮುಖ ಆಭರಣೋದ್ಯಮಿಗಳಾದ ಬಿ ಎ ರಮೇಶ್, ಎ ಬಿ ಎಸ್ ಸಂಜಯ್ ಉಪಸ್ಥಿತರಿದ್ದರು.

Assembly Session: ಹನಿಟ್ರಾಪ್ ಗೆ ಪಾರ್ಟಿನೂ ಇಲ್ಲ, ಜಾತಿನೂ ಇಲ್ಲ, ವ್ಯಕ್ತಿನೂ ಇಲ್ಲ..ಅಧಿಕಾರ ದಾಹ ಮಾತ್ರ..!

Tags: #bengaluruDKShivakumarJewellery ParkKarnatakaknrajannambpatilsiddaramaiah
Previous Post

ಕೈಗಾರಿಕಾ ಸಚಿವರಿಗೆ ಜಂಗಮಕೋಟೆ ರೈತರ ಮನವಿ ಸಲ್ಲಿಕೆ, ಸೂಕ್ತ ಕ್ರಮದ ಭರವಸೆ

Next Post

ಸಿಎಂ ಮೂಗಿನ ನೇರಕ್ಕೆ ಹನಿಟ್ರ್ಯಾಪ್ ಪ್ರಕರಣ, ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಬೊಮ್ಮಾಯಿ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಸಿಎಂ ಮೂಗಿನ ನೇರಕ್ಕೆ ಹನಿಟ್ರ್ಯಾಪ್ ಪ್ರಕರಣ, ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಬೊಮ್ಮಾಯಿ

ಸಿಎಂ ಮೂಗಿನ ನೇರಕ್ಕೆ ಹನಿಟ್ರ್ಯಾಪ್ ಪ್ರಕರಣ, ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಬೊಮ್ಮಾಯಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada