• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ; ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
April 12, 2025
in ಕರ್ನಾಟಕ, ರಾಜಕೀಯ
0
ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ; ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ
Share on WhatsAppShare on FacebookShare on Telegram

ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ

ADVERTISEMENT

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿ ಎಲ್ಲಾ ಶಾಸಕರು, ಮಾಜಿ ಶಾಸಕರು, ಎಂಎಲ್ಸಿಗಳು ಭಾಗಿ

ಜೆಡಿಎಸ್ ಶಾಸಕರಿಗೆ ಪಕ್ಷಾಂತರ ಮಾಡುವಂತೆ ಸಿಎಂ ಸಿದ್ದರಾಮಯ್ಯ ನೇರ ಆಮಿಷ

ಪಾಲಿಟೆಕ್ನಿಕ್ ಕೊಡಿ ಎಂದರೆ ಕಾಂಗ್ರೆಸ್ ಪಕ್ಷ ಬಾ ಎನ್ನುತ್ತಾರೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ

ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಸಂಸದರಾದ ಮಲ್ಲೇಶ್ ಬಾಬು ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು ಸೇರಿದಂತೆ ಅನೇಕ ನಾಯಕರು ಅಸಂಖ್ಯಾತ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಅಧಿಕಾರಕ್ಕೆ ಬಂದಾಗಿನಿಂದ ದರ ಏರಿಕೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ ಅಂತಹ ಭ್ರಷ್ಟರು ಇಡೀ ದೇಶದಲ್ಲೇ ಇಲ್ಲ #pratidhvani

ಸುರೇಶ್ ಬಾಬು, ಹೆಚ್.ಡಿ. ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯ ನಾಯಕ್, ಹಿರಿಯ ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಎ ತಿಪ್ಪೇಸ್ವಾಮಿ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಅನೇಕ ಮುಖಂಡರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಐದು ಗ್ಯಾರಂಟಿ ಕೊಟ್ಟಿದೆ ನಿಜ. ಆದರೆ, ಗ್ಯಾರಂಟಿ ಪಡೆದ ಪಾಪಕ್ಕೆ ಜನರು ದಿನನಿತ್ಯ ಬೆಲೆ ಏರಿಕೆ ಬರೆಗೆ ತುತ್ತಾಗುತ್ತಿದ್ದಾರೆ. ದಿನಕ್ಕೊಂದು ದರ ಏರಿಕೆ ಮಾಡುತ್ತಿದ್ದಾರೆ. ಕೊಟ್ಟಿದ್ದು ಅಲ್ಪ, ಜನರ ಮೇಲೆ ಬೆಟ್ಟದಷ್ಟು ಹೇರಿಕೆ ಮಾಡಿದ್ದಾರೆ. ಇದನ್ನು ಸಹಿಸುವ ಅಗತ್ಯ ಇಲ್ಲ. ಜನರು ಸರ್ಕಾರದ ವಿರುದ್ಧ ದಂಗೆ ಏಳದೇ ಬೇರೆ ದಾರಿ ಇಲ್ಲ ಎಂದು ನಾಯಕರು ಹೇಳಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು. ಎಲ್ಲೆಡೆ ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಫಲಕಗಳು ರಾರಾಜಿಸಿದವು.

ವಿಧಾನಸೌಧ ಮುತ್ತಿಗೆ ಯತ್ನಿಸಿದ ನಾಯಕರ ಬಂಧನ, ಬಿಡುಗಡೆ

ಪ್ರತಿಭಟನಾ ಸಭೆ ಮುಕ್ತಾಯವಾದ ನಂತರ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಾಯಕರು, ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.

ಈ ಸಂದರ್ಭದಲ್ಲಿ ಅಡ್ಡಗಟ್ಟಿದ ಪೊಲೀಸರು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಮುಖಂಡರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತಮಿಳುನಾಡು ಬಳಿಕ ರಾಜ್ಯದಲ್ಲಿ ರಾಜ್ಯಾಧ್ಯಕ್ಷರ ನೇಮಕಕ್ಕೆ ಸಿದ್ಧತೆ

Next Post

ಜಾತಿಗಣತಿ ವರದಿ ಜಾರಿ ಬಗ್ಗೆ ಒಕ್ಕಲಿಗ ನಾಯಕರ ನಿಲುವೇನು..?! ಅಡ್ಡಗೋಡೆ ಮೇಲೆ ದೀಪವಿಟ್ಟ ಡಿಕೆಶಿ..! 

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಜಾತಿಗಣತಿ ವರದಿ ಜಾರಿ ಬಗ್ಗೆ ಒಕ್ಕಲಿಗ ನಾಯಕರ ನಿಲುವೇನು..?! ಅಡ್ಡಗೋಡೆ ಮೇಲೆ ದೀಪವಿಟ್ಟ ಡಿಕೆಶಿ..! 

ಜಾತಿಗಣತಿ ವರದಿ ಜಾರಿ ಬಗ್ಗೆ ಒಕ್ಕಲಿಗ ನಾಯಕರ ನಿಲುವೇನು..?! ಅಡ್ಡಗೋಡೆ ಮೇಲೆ ದೀಪವಿಟ್ಟ ಡಿಕೆಶಿ..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada