• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ರಾಜ್ಯದ ಕಾರ್ಮಿಕರಿಗೆ ಬೊಂಬಾಟ್ ಸುದ್ದಿ ನೀಡಿದ ಸಚಿವ ಸಂತೋಷ್ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
April 12, 2025
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕಾರ್ಮಿಕರ ಕನಿಷ್ಠ ವೇತನ ಬಗ್ಗೆ ಪರಿಷ್ಕೃತ ಅಧಿಸೂಚನೆ ಹೊರಡಿಸಿದ ಕಾರ್ಮಿಕ ಇಲಾಖೆ

ಸ್ಕಿಲ್ ಆಧಾರದ ಮೇಲೆ ವೇತನ ನಿಗದಿಗೆ ಒತ್ತು

ಬೆಂಗಳೂರು: ರಾಜ್ಯದ ಶ್ರಮಿಕ ವರ್ಗಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕಾರ್ಮಿಕರ ಕನಿಷ್ಠ ವೇತನದ ಬಗ್ಗೆ ಪರಿಷ್ಕೃತ ಅಧಿಸೂಚನೆ ಹೊರಡಿಸುವ ಮೂಲಕ ಮತ್ತೊಮ್ಮೆ ಕಾರ್ಮಿಕರ ಬಾಳಿಗೆ ಬೆಳಕಾಗಿದ್ದಾರೆ‌.

ADVERTISEMENT

ಈ ಪರಿಷ್ಕೃತ ಅಧಿಸೂಚನೆಯಲ್ಲಿ ವಿವಿಧ ರೀತಿಯ ಉದ್ದಿಮೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಕನಿಷ್ಠ ವೇತನವನ್ನು ನಿಗದಿ ಮಾಡಿ ಕರಡು ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ರಾಜ್ಯದ ಕೋಟ್ಯಂತರ ಕಾರ್ಮಿಕರಿಗೆ ಸಹಾಯವಾಗಲಿದೆ.

ಎಲ್ಲಾ ವರ್ಗದ ಕಾರ್ಮಿಕರಿಗೆ ಸಮಾನವಾದ ಕನಿಷ್ಠ ವೇತನ ದೊರೆಯಬೇಕು ಎಂಬ ಉದ್ದೇಶದಿಂದ ಉದ್ದಿಮೆಗಳನ್ನು ವಿಂಗಡಿಸಿ ರಾಜ್ಯ ಸರ್ಕಾರವು ಈ ಅಧಿಸೂಚನೆ ಪ್ರಕಟಿಸಿರೋದು ಮತ್ತೊಂದು ವಿಶೇಷ.

ಇದರಿಂದ ಯಾವ ಉದ್ದಿಮೆಗಳಲ್ಲಿ ಯಾವ ಕಾರ್ಮಿಕರು ಇರಲಿದ್ದಾರೆ? ಅವರ ವೇತನ ಎಷ್ಟಿರಲಿದೆ? ಕುಶಲ ಮತ್ತು ಅಕುಶಲ ಕಾರ್ಮಿಕರು ಯಾರು? ಕಾರ್ಮಿಕರಿಗೆ ದಿನಕ್ಕೆ ಮತ್ತು ತಿಂಗಳಿಗೆ ವೇತನ ಎಷ್ಟು ಸಿಗಲಿದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೂಡ ಸಿಗಲಿದೆ. ಈ ಮೊದಲು ಉದ್ದಿಮೆವಾರು ಅಧಿಸೂಚನೆಯನ್ನು ಹೊರಡಿಸಲಾಗುತ್ತಿತ್ತು. ಇದೀಗ ಅದನ್ನು ಬದಲಾಯಿಸಿ, ಏಕರೂಪ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಬೇರೆ ಬೇರೆ ಉದ್ದಿಮೆಗಳಲ್ಲಿ ವಲಯಗಳಿಗೆ ಅನುಸಾರವಾಗಿ ಮತ್ತು ಕಾರ್ಮಿಕರು ಹೊಂದಿರುವ ಕೌಶಲ್ಯದ ಆಧಾರದ ಮೇಲೆ ವೇತನ ದರದಲ್ಲಿ ವ್ಯತ್ಯಾಸಗಳಿರುತ್ತವೆ. ಕಾರ್ಮಿಕರು ಮಾಡುವ ಕೆಲಸ ಮತ್ತು ಅವರು ಹೊಂದಿರುವ ಕುಶಲತೆ ಮೇಲೆ ಅವರ ವೇತನ ನಿಗದಿಯಾಗಲಿದೆ. ಈಗ ಏಕರೂಪದ ಅಧಿಸೂಚನೆಯಲ್ಲಿ ಎಲ್ಲವನ್ನು ಸಮಗ್ರವಾಗಿ ವಿವರಿಸಲಾಗಿದ್ದು, ಕಾರ್ಮಿಕರಿಗೆ ಇದರಿಂದ ತುಂಬ ಸಹಾಯವಾಗಲಿದೆ.

ಈ ಕುರಿತು ಸಲಹೆ ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಸರ್ಕಾರದ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ, ನಾಲ್ಕನೇ ಮಹಡಿ, ವಿಕಾಸಸೌಧ ಬೆಂಗಳೂರು ಅಥವಾ ಆಯುಕ್ತರು, ಕಾರ್ಮಿಕ ಇಲಾಖೆ, ಕಾರ್ಮಿಕ ಭವನ, ಬನ್ನೇರುಘಟ್ಟ ರಸ್ತೆ ಬೆಂಗಳೂರು ಇವರಿಗೆ ತಿಳಿಸಬಹುದಾಗಿದೆ.

ಕಾರ್ಮಿಕರ ಕನಿಷ್ಠ ವೇತನ ದರವನ್ನು ಪರಿಷ್ಕರಿಸಲು ಯಾವುದೇ ರೀತಿಯ ಅಡೆತಡೆ ಇಲ್ಲದ ಕಾರಣ ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಕನಿಷ್ಠ ವೇತನ ಪರಿಷ್ಕರಿಸಲಾಗಿದೆ. ಇದರನ್ವಯ ಅತಿ ಕುಶಲ, ಕುಶಲ, ಅರೆ ಕುಶಲ ಕಾರ್ಮಿಕರಿಗೆ ದಿನಕ್ಕೆ ಎಷ್ಟು ವೇತನ, ತಿಂಗಳಿಗೆ ಎಷ್ಟು ವೇತನ ಎಂಬುದರ ಬಗ್ಗೆ ಸ್ಪಷ್ಟನೆಗೆ ಬರಲಾಗಿದೆ.

2022-23ನೇ ಸಾಲಿನಲ್ಲಿ 34 ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಿ ಹೊರಡಿಸಲಾಗಿದ್ದ ಅಧಿಸೂಚನೆಗಳನ್ನು ಹಿಂಪಡೆದು ಮೆ| ರೆಪ್ಟಕೋಸ್ ಬ್ರೆಟ್ ಅಂಡ್ ಕಂ. ಪ್ರಕರಣದ ಮಾನದಂಡಗಳ ಅನ್ವಯ ಹೊಸದಾಗಿ ಅಧಿಸೂಚನೆಗಳನ್ನು ಹೊರಡಿಸುವ ಕುರಿತು ಕಾನೂನು ಇಲಾಖೆಯ ಅಭಿಪ್ರಾಯ ಕೋರಲಾಗಿತ್ತು. ಇದಕ್ಕೆ ಯಾವುದೇ ಅಡೆತಡೆಗಳು ಇಲ್ಲದ ಕಾರಣ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಕನಿಷ್ಠ ವೇತನವನ್ನು ಪರಿಷ್ಕರಿಸಿ ನಿಯಮಾನುಸಾರ ಮುಂದುವರೆಯಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.

ಈ ಮೂಲಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರ ಯಾವತ್ತಿಗೂ ಶ್ರಮಿಕರ ಪರವಾಗಿ‌ ನಿಲ್ಲುತ್ತದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

Tags: BJPCongress PartyMigrant Workersminister santosh ladsanthosh ladSantosh Ladsantosh lad about migrant workerssantosh lad healthcare statementsantosh lad in suvarna newssantosh lad interviewsantosh lad interview in suvarna newssantosh lad latest newssantosh lad mlasantosh lad newssantosh lad reactsantosh lad speechsantosh lad statussantosh lad today newssantosh lad videosuvarna news hour special with santosh lad
Previous Post

ಜಾತಿಗಣತಿ ವರದಿ ಜಾರಿ ಬಗ್ಗೆ ಒಕ್ಕಲಿಗ ನಾಯಕರ ನಿಲುವೇನು..?! ಅಡ್ಡಗೋಡೆ ಮೇಲೆ ದೀಪವಿಟ್ಟ ಡಿಕೆಶಿ..! 

Next Post

ಯಾರಿಗೆ ಬೇಸರವಾದ್ರೂ ..ಯಾರಿಗೆ ಖುಷಿಯಾದ್ರೂ ತಲೆ ಕೆಡಿಸಿಕೊಳ್ಳಲ್ಲ- ನನಗೆ ನನ್ನ ಗೌರವ ಮುಖ್ಯ : ಕೆ.ಎನ್ ರಾಜಣ್ಣ 

Related Posts

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!
ರಾಜಕೀಯ

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

by ಪ್ರತಿಧ್ವನಿ
April 26, 2026
0

ರಾಘವ್ ಚಡ್ಡಾ ಅವರ ರಾಜಕೀಯ ಪಯಣದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಅವರು ಹೊಸ ರಾಜಕೀಯ ದಾರಿಗೆ ಹೆಜ್ಜೆಯಿಟ್ಟಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಆಮ್ ಆದ್ಮಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
ಸಾಕ್ಷಿ ಸಮೇತ ಹೈಕಮಾಂಡ್ ಗೆ ದೂರು ಕೊಡ್ತಾರಾ ರಾಜಣ್ಣ..? ಹನಿ ಕಹಾನಿಯಲ್ಲಿ ಮತ್ತೊಂದು ಟ್ವಿಸ್ಟ್..! 

ಯಾರಿಗೆ ಬೇಸರವಾದ್ರೂ ..ಯಾರಿಗೆ ಖುಷಿಯಾದ್ರೂ ತಲೆ ಕೆಡಿಸಿಕೊಳ್ಳಲ್ಲ- ನನಗೆ ನನ್ನ ಗೌರವ ಮುಖ್ಯ : ಕೆ.ಎನ್ ರಾಜಣ್ಣ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada