ರಾಜ್ಯದಲ್ಲಿ ಹನಿಟ್ರ್ಯಾಪ್ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್ ರಾಜಣ್ಣ ಇಂದು (ಏ.12) ಪ್ರತಿಕ್ರಿಯಿಸಿದ್ದಾರೆ.ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ.ಹೀಗಾಗಿ ತನಿಖೆ ನಡುವೆ ನಾನು ಮಾತನ್ನಾಡೋದಿಲ್ಲ.ನಾನು ಸಿಐಡಿ ವಿಚಾರಣೆಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿರ್ದಿಷ್ಟವಾಗಿ ನನ್ನ ಹೆಸರು ಪ್ರಸ್ತಾಪಿಸಿ ಸದನದಲ್ಲಿ ಈ ಬಗ್ಗೆ ಮಾತನ್ನಾಡಿದ್ರು.ಹಾಗಾಗಿಯೇ ನಾನೂ ಸದನದಲ್ಲಿ ಪ್ರಕರಣದ ಬಗ್ಗೆ ವಿಷಯ ಪ್ರಸ್ತಾಪ ಮಾಡಿದೆ ಎಂದಿದ್ದಾರೆ.
ಇನ್ನು ಸದನದಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ಹೈಕಮಾಂಡ್ ಬೇಸರ ವ್ಯಕ್ತಪಡಿಸಿದ ವಿಚಾರವಾಗಿ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ,ಯಾರು ಬೇಸರ ಆಗ್ತಾರೆ ಯಾರು ಖುಷಿಪಡುತ್ತಾರೋ ಏನೋ..ನಾನಂತೂ ತಲೆಕೆಡಿಸಿಕೊಳ್ಳೋದಿಲ್ಲ.ನಾನು ಯಾರಿಗೂ ಖುಷಿಪಡಿಸೋದಿಲ್ಲ.ನನ್ನ ಗೌರವ ಹೇಗೆ ಕಾಪಾಡಿಕೊಳ್ಳಬೇಕು ಅಂತ ನನಗೆ ಗೊತ್ತಿದೆ ಎಂದಿದ್ದಾರೆ.