• Home
  • About Us
  • ಕರ್ನಾಟಕ
Monday, July 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ

ಪ್ರತಿಧ್ವನಿ by ಪ್ರತಿಧ್ವನಿ
April 12, 2025
in Uncategorized
0
Share on WhatsAppShare on FacebookShare on Telegram

ADVERTISEMENT

ಬಿಜೆಪಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಏಪ್ರಿಲ್ 12: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.

ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೆಟ್ರೋಲ್ , ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರದ ಬಿಜೆಪಿ ಸರ್ಕಾರದವರೇ. ರಾಜ್ಯಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ನ ಕಚ್ಚಾ ತೈಲದ ಬೆಲೆಯ ಮೇಲೆ ದರ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲಕ್ಕೆ 120 ಡಾಲರ್ ಇದ್ದು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇದ್ದು, 800 ರೂ. ಕ್ಕೂ ಮೀರಿದೆ.ಆದರೂ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ. ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರ ಕಾಲದಲ್ಲಿ ಅನುದಾನವಿಲ್ಲದಿದ್ದರೂ, ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದು, ಆರ್ಥಿಕ ದಿವಾಳಿಯಾಗಿದ್ದರೆ, ಅದಕ್ಕೆ ಬಿಜೆಪಿಯವರೇ ಕಾರಣ ಎಂದರು.

ಬಜೆಟ್ ನ ಗಾತ್ರ 38 ಸಾವಿರ ಕೋಟಿ ಹೆಚ್ಚಳ- ಇದು ಆರ್ಥಿಕ ದಿವಾಳಿತನವೇ?

ಗ್ಯರಂಟಿಗಳಿಂದಲೇ ಆರ್ಥಿಕತೆ ಹಾಳಾಗಿದೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿರುವ ಬಗ್ಗೆ ಉತ್ತರ ನೀಡುತ್ತಾ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಾವು ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್ ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಿಸಲಾಗಿದೆ. ಇದು ನಮ್ಮ ಸರ್ಕಾರದ ಆರ್ಥಿಕ ದಿವಾಳಿತನವೇ ಎಂದು ಪ್ರಶ್ನಿಸಿದರು.

ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ಮೋದಿಯವರೇ ಕಾರಣ
ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 5311000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೆ ಸಾಲ ಹೆಚ್ಚಿದೆ. ದೇಶದ ಸಾಲ ಮೊತ್ತ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಎಂದರು.

ಜನರ ಆರ್ಥಿಕ ಸಾಮಾಜಿಕ ಸ್ಥಿತಿಗತಿ ಅರಿಯಲು ಜಾತಿಗಣತಿ ಅಗತ್ಯ
ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಸಲುವಾಗಿ ಜಾತಿಗಣತಿಯನ್ನು ಮುನ್ನಲೆಗೆ ತಂದಿರುವುದಾಗಿ ಜಗದೀಶ್ ಶೆಟ್ಟರ್ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರು ಮುಖ್ಯಮಂತ್ರಿಯಾಗಿ, ವಿರೋಧಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರೋಧವೇ ಹಲವು ಹೇಳಿಕೆಗಳನ್ನು ನೀಡಿದ್ದರು. ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್ ನ ಭರವಸೆಯಾಗಿದೆ. ಒಂದು ಕುಟುಂಬದಲ್ಲಿ ಆರ್ಥಿಕವಾಗಿ, ಸಾಮಾಜಿಕವಾದ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆಯದೇ, ಅನೇಕ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ್ದು ಅಗತ್ಯ ಎಂದರು.

ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ.

ಬಿಜೆಪಿಯವರು ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮೀಕ್ಷೆಯನ್ನು ಶೇ. 95 ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಎಂದರು.

ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ

ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದರು.

ಒಳಮೀಸಲಾತಿ ಜಾರಿಗೆ ತರಲು ನಾಗಮೋಹನ್ದಾಸ್ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

Tags: CM SiddaramaiahDCM DK ShivakumarDK Shivakumardk shivakumar newsdk shivakumar on siddaramaiahdk shivakumar siddaramaiahdk shivakumar takes on siddaramaiahdk shivakumar vs siddaramaiahdk shivkumarkarnataka cm siddaramaiahsiddaramaiahSiddaramaiah and DK Shivakumarsiddaramaiah karnataka cmsiddaramaiah newssiddaramaiah on dk shivakumarsiddaramaiah vs dk shivakumar
Previous Post

ಶೆಟ್ಟರ್ ಕಾಂಗ್ರೆಸ್‌ಗೆ ಬಂದಾಗ ನನ್ನ ಹತ್ರ ಏನ್ ಹೇಳವ್ರೆ ಗೊತ್ತ

Next Post

661 ಕೋಟಿ ಮೌಲ್ಯದ ಆಸ್ತಿ ಸೀಜ್ – ರಾಹುಲ್ & ಸೋನಿಯಾ ಗಾಂಧಿಗೆ ED ಬಿಗ್ ಶಾಕ್ 

Related Posts

Uncategorized

ಇಂಧನ ಇಲಾಖೆಯ 447.73 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

by ಪ್ರತಿಧ್ವನಿ
July 19, 2025
0

ಚಾವಿಸನಿನಿಯ 408.95 ಕೋಟಿ ರೂ.ಗಳ ನಾಲ್ಕು ಕಾಮಗಾರಿಗಳು ಕೆಪಿಟಿಸಿಎಲ್ ನ 38.78 ಕೋಟಿ ರೂ.ಗಳ ಎರಡು ಕಾಮಗಾರಿಗಳು ಮೈಸೂರು, ಜುಲೈ 19, 2025ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ...

Read moreDetails

ಸಹಿಸಿಕೊಳ್ಳೋ ಯೋಗ್ಯತೆಯಿಲ್ಲ ಅಂದ್ರೆ ರಾಜಕಾರಣಕ್ಕೆ ಯಾಕೆ ಬರಬೇಕು?

July 19, 2025
ದೊಡ್ಡ ತೂಗುಸೇತುವೆ

ದೊಡ್ಡ ತೂಗುಸೇತುವೆ

July 18, 2025

CM Siddaramaiah: ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ..

July 16, 2025

Basavaraj Bommai: ಜಿಟಿಟಿಸಿ ತರಬೇತಿ ಪಡೆಯುವವರಿಗೆ ಒಳ್ಳೆಯ ಭವಿಷ್ಯವಿದೆ..

July 16, 2025
Next Post
661 ಕೋಟಿ ಮೌಲ್ಯದ ಆಸ್ತಿ ಸೀಜ್ – ರಾಹುಲ್ & ಸೋನಿಯಾ ಗಾಂಧಿಗೆ ED ಬಿಗ್ ಶಾಕ್ 

661 ಕೋಟಿ ಮೌಲ್ಯದ ಆಸ್ತಿ ಸೀಜ್ - ರಾಹುಲ್ & ಸೋನಿಯಾ ಗಾಂಧಿಗೆ ED ಬಿಗ್ ಶಾಕ್ 

Recent News

ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ : BSY
Top Story

ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ : BSY

by Chetan
July 21, 2025
Top Story

ಪಾವಗಡ ತಾಲ್ಲೂಕುನಲ್ಲಿ ಅಭಿವೃದ್ಧಿಕಾಮಗಾರಿಗಳ ಉದ್ಘಾಟನೆ /ಶಂಕುಸ್ಥಾಪನೆ CM ಸಿದ್ದರಾಮಯ್ಯ

by Shivakumar A
July 21, 2025
Top Story

Kantara Chapter-1: ಹೊಂಬಾಳೆ ಫಿಲ್ಮ್ಸ್‌ನ ‘ಕಾಂತಾರ ಚಾಪ್ಟರ್ 1’ ಮೇಕಿಂಗ್ ವಿಡಿಯೋ ಬಿಡುಗಡೆ: 3 ವರ್ಷದ ಸಿನಿ ಪಯಣದ ಒಂದು ಝಲಕ್!

by ಪ್ರತಿಧ್ವನಿ
July 21, 2025
ಮುಡಾ ಕೇಸ್ ನಲ್ಲಿ ನೀವು ರಾಜಕೀಯ ಹೋರಾಟ ಮಾಡಿದ್ದೀರಿ..! – ED ಗೆ ಸುಪ್ರೀಂ ಕೋರ್ಟ್ ತರಾಟೆ : ಸಿಎಂ ಪತ್ನಿಗೆ ಬಿಗ್ ರಿಲೀಫ್! 
Top Story

ಮುಡಾ ಕೇಸ್ ನಲ್ಲಿ ನೀವು ರಾಜಕೀಯ ಹೋರಾಟ ಮಾಡಿದ್ದೀರಿ..! – ED ಗೆ ಸುಪ್ರೀಂ ಕೋರ್ಟ್ ತರಾಟೆ : ಸಿಎಂ ಪತ್ನಿಗೆ ಬಿಗ್ ರಿಲೀಫ್! 

by Chetan
July 21, 2025
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ತಂಡದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?! 
Top Story

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಕೇಸ್ – S.I.T ತಂಡದಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ..?! 

by Chetan
July 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ : BSY

ಎಸ್.ಐ.ಟಿ ತನಿಖೆಗೆ ನಮ್ಮ ಅಭ್ಯಂತರವಿಲ್ಲ – ಧರ್ಮಸ್ಥಳದಲ್ಲಿ ಯಾವುದೇ ತಪ್ಪು ನಡೆದಿಲಲ್ಲ : BSY

July 21, 2025

ಪಾವಗಡ ತಾಲ್ಲೂಕುನಲ್ಲಿ ಅಭಿವೃದ್ಧಿಕಾಮಗಾರಿಗಳ ಉದ್ಘಾಟನೆ /ಶಂಕುಸ್ಥಾಪನೆ CM ಸಿದ್ದರಾಮಯ್ಯ

July 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada