• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪಾಂಚಜನ್ಯ ಮೊಳಗಿಸಿ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ “ಯುದ್ದ ಕಾಂಡ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್.

ಪ್ರತಿಧ್ವನಿ by ಪ್ರತಿಧ್ವನಿ
April 14, 2025
in ಕರ್ನಾಟಕ, ಸಿನಿಮಾ
0
ಪಾಂಚಜನ್ಯ ಮೊಳಗಿಸಿ ಅಜೇಯ್ ರಾವ್ ನಿರ್ಮಾಣ ಹಾಗೂ ನಟನೆಯ “ಯುದ್ದ ಕಾಂಡ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್.
Share on WhatsAppShare on FacebookShare on Telegram

ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ “ಯುದ್ಧಕಾಂಡ” ಚಿತ್ರದ ಟ್ರೇಲರ್ ಅನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಬಿಡುಗಡೆ ಮಾಡಿದರು. ಪಾಂಚಜನ್ಯ ಮೊಳಗಿಸಿ ಚಾಲನೆ‌ ನೀಡಿದರು. ನಂತರ ಅತಿಥಿಗಳಾಗಿ ಆಗಮಿಸಿದ್ದ ರವಿಚಂದ್ರನ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ನಾನು ಬರುವಾಗ ಅಜೇಯ್‍ ರಾವ್ ಅವರ ಒಂದಿಷ್ಟು ಸಂದರ್ಶನಗಳನ್ನು ನೋಡಿಕೊಂಡು ಬಂದೆ. ಕೆಲವು ಸಂದರ್ಶನಗಳಲ್ಲಿ ಸಾಲ ಮಾಡಿದ್ದೇನೆ ಎಂದು ಅಜೇಯ್‍ ಹಲವು ಬಾರಿ ಹೇಳಿಕೊಂಡಿದ್ದಾರೆ. ಅದನ್ನು ಕೇಳಿ ನನಗೆ ನನ್ನ ಸಾಲದ ನೆನಪಾಯಿತು. ಇಲ್ಲಿ ಸಾಲ ತೀರಿಸುವ ತಾಕತ್ತು ಬೇಕು. ನಾನು ಕೋಟಿಗಟ್ಟಲೆ ಹಾಕಿ ಸಿನಿಮಾ ಮಾಡಿದವನು. ನನಗೆ ದುಡ್ಡು ದುಡ್ಡಿನ ಬೆಲೆ ಆಗಲೂ ಗೊತ್ತಿಲ್ಲ. ಈಗಲೂ ಗೊತ್ತಿಲ್ಲ. ನನಗೆ 100 ಡ್ಯಾನ್ಸರ್ಸ್ ಬೇಕು, 100 ಫೈಟರ್ಸ್ ಬೇಕು ಎಂದು ಹೇಳಿಬಿಡುತ್ತಿದೆ. ಅಪ್ಪ ಎಲ್ಲಿಂದ ಹಣ ತರುತ್ತಿದ್ದರು ಅಂತ ನನಗೆ ಗೊತ್ತಿಲ್ಲ. ಒಂದು ದಿವಸ ಅವರು ಇಲ್ಲದಾಗ ಅದರ ಗೊತ್ತಾಯಿತು. ದುಡ್ಡಿಲ್ಲದಿದ್ದರೂ ಇಲ್ಲಿ ಕನಸು ಮುಖ್ಯ. ಎಷ್ಟು ದುಡ್ಡಿದೆಯೋ, ಅಷ್ಟರಲ್ಲಿ ಸಿನಿಮಾ ಮಾಡುವುದನ್ನು ಕಲಿಯಬೇಕು. ಇಲ್ಲಿ ಕಂಟೆಂಟ್ ಮುಖ್ಯ, ಏನು ಹೇಳುತ್ತಿದ್ದೀವಿ ಅನ್ನೋದು ಮುಖ್ಯ.
ನಿಮ್ಮ ಚಿತ್ರತಂಡ ನೋಡಿದರೆ, ನಿಮ್ಮಲ್ಲಿ ಶ್ರದ್ಧೆ ಕಾಣುತ್ತಿದೆ. ನಿಮ್ಮ ತಂಡದಲ್ಲಿ ಒಂದು ತೃಪ್ತಿ ಮತ್ತು ಆತ್ಮವಿಶ್ವಾಸವಿದೆ. ನೀವು ಇಷ್ಟೆಲ್ಲಾ ಮಾಡಿ ಸಿನಿಮಾ ಮಾಡಿದ್ದೀರಾ. ನಾನು ಪ್ರೇಕ್ಷಕನಾಗಿ ಸಿನಿಮಾ ನೋಡುತ್ತೇನೆ. ಈಗಲೇ ಐದು ಗೋಲ್ಡ್ ಕ್ಲಾಸ್‍ ಟಿಕೆಟ್ ತೆಗೆದುಕೊಳ್ಳುತ್ತೇನೆ. ಸಿನಿಮಾ ನೋಡಿ ಫೋನ್‍ ಮಾಡುತ್ತೇನೆ ಎಂದರು ಕ್ರೇಜಿಸ್ಟಾರ್ ರವಿಚಂದ್ರನ್.

ರವಿಚಂದ್ರನ್ ನಮ್ಮ ತಂದೆ, ಅಣ್ಣನ ಸ್ಥಾನದಲ್ಲಿದ್ದಾರೆ. ನಾನು ‘ಕೃಷ್ಣ ಲೀಲಾ’ ಚಿತ್ರ ಮಾಡಿದಾಗ, ಆ ಚಿತ್ರದ ಕಲೆಕ್ಷನ್‍ ಇಳಿಯುತ್ತಿತ್ತು. ರವಿಚಂದ್ರನ್‍ ಅವರು ತಾವಾಗಿ ಬಂದು ಸಿನಿಮಾ ನೋಡಿ, ನಮ್ಮನ್ನ ಮನೆಗೆ ಕರೆದು ಒಂದಿಷ್ಟು ವಿಚಾರಗಳನ್ನು ಹೇಳಿದರು. ಸಿನಿಮಾ ಬಗ್ಗೆ ನಮಗೆ ಗೊತ್ತಿಲ್ಲದ ಒಂದಿಷ್ಟು ವಿಚಾರಗಳನ್ನು ಹೇಳಿದರು. ಆ ನಂತರ ಕಲೆಕ್ಷನ್‍ ಕ್ರಮೇಣ ಹೆಚ್ಚಾಯಿತು. ನಾನು ‘ಯುದ್ಧಕಾಂಡ’ ಮಾಡುವಾಗ ಮೊದಲು ಹೋಗಿ ಅವರ ಬಳಿ ಶೀರ್ಷಿಕೆ ಕೇಳಿದೆ. ಅವರು ಆಶೀರ್ವಾದ ಮಾಡಿ ಕಳಿಸಿದರು. ಈ ಚಿತ್ರದ ಪ್ರತಿಯೊಂದು ದೃಶ್ಯ ಮಾಡುವಾಗಲೂ, ನಾನು ಸೋಲಬಾರದು ಅಂತ ಹೆದರಿಕೊಂಡು ಸಿನಿಮಾ ಮಾಡಿದ್ದೇನೆ. ನಾನು ಜೀವನಪೂರ್ತಿ ಅವರ ತರಹ ಕನಸುಗಾರನಾಗಿ, ಹಠವಾದಿಯಾಗಿ ಅವರನ್ನು ಕಾಪಿ ಮಾಡಿಕೊಂಡಿರಲು ಇಷ್ಟಪಡುತ್ತೇನೆ. ಅವರು ಚಿತ್ರದ ಮೊದಲ ಐದು ಟಿಕೆಟ್‍ಗಳನ್ನು ಖರೀದಿಸಿದ್ದಾರೆ. ಈ ಚಿತ್ರ ನಿಜಕ್ಕೂ ದಾಖಲೆ ಮಾಡುತ್ತದೆ ಎಂಬ ನಂಬಿಕ ಇದೆ. ಈ ಚಿತ್ರದ ನಂತರ ಇನ್ನಷ್ಟು ಚಿತ್ರಗಳನ್ನು ಮಾಡುತ್ತೇನೆ ಮತ್ತು ಕನ್ನಡ ಚಿತ್ರಗಳನ್ನೇ ಮಾಡುತ್ತೇನೆ. ಆದರೆ ಸಾಲ ಮಾಡಲ್ಲ ಎಂದು ನಿರ್ಮಾಪಕ & ನಾಯಕ ಅಜೇಯ್ ರಾವ್‌ ತಿಳಿಸಿದರು.

“ಯುದ್ಧ ಕಾಂಡ” ಚಿತ್ರದಲ್ಲಿ ಕಥೆಯಲ್ಲಿ ಎಲ್ಲಾ ಪಾತ್ರಗಳು ಪ್ರಮುಖ ಪಾತ್ರಗಳೆ. ನಾಯಕ ಪ್ರಧಾನ ಚಿತ್ರವಲ್ಲ. ಹಾಗೆ ಹೇಳಬೇಕಾದರೆ,‌ ಚಿತ್ರದ ಶೇಕಡಾ 35% ಅಜೇಯ್ ರಾವ್ ಅವರು ಈ ಚಿತ್ರದಲ್ಲಿ ಇರುವುದಿಲ್ಲ.‌ ಆದರೂ ಅವರು ಒಪ್ಪಿಕೊಂಡರು. ಈ ಸಂದರ್ಭದಲ್ಲಿ ಇಡೀ ತಂಡಕ್ಕೆ ಹಾಗೂ ಟ್ರೇಲರ್ ಬಿಡುಗಡೆ ‌ಮಾಡಿಕೊಟ್ಟ ರವಿಚಂದ್ರನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಪವನ್ ಭಟ್.

ನಾಯಕಿ ಅರ್ಚನಾ ಜೋಯಿಸ್ ಮಾತನಾಡಿ, ಈ ಚಿತ್ರದಲ್ಲಿ ನನ್ನದು ನೊಂದ ಹೆಣ್ಣುಮಕ್ಕಳನ್ನು ಪ್ರತಿನಿಧಿಸುವ ಪಾತ್ರ ಎಂದರು.

ನ್ಯಾಯಾಧೀಶರ ಪಾತ್ರದಲ್ಲಿ ನಟಿಸಿರುವುದಾಗಿ ಹೇಳಿದ ನಟ ಟಿ.ಎಸ್.ನಾಗಾಭರಣ, ಚಿತ್ರತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದರು.

Tags: actor ajay raoactor ajayraoajai rao kannada actorajairaoajairaoproductionsAjay Raoajay rao kannada actorajayo rao interviewjawarinatakamandaliKannadakannada actorkannada actor ajai raokannada actor ajai rao familykannada actor ajay raokannada movieskannada songskannadadramakannadafilmssandalwoodtv9 kannadauttarakannadayuddhakandayuddhakanda 2 kannada movie songsyuddhakanda latest songsyuddhakanda song
Previous Post

ಪಂಚ ಪೀಠ ಹೇಳಿಕೆ ಬೆನ್ನಲ್ಲೇ ಒಂದಾಗೋಣ ಎಂದ ಜಯ ಮೃತ್ಯುಂಜಯ ಶ್ರೀ..

Next Post

ಇಂದಿಗೆ “ಕೆಜಿಎಫ್‌ ಚಾಪ್ಟರ್‌ 2” ಬಿಡುಗಡೆ ಆಗಿ ಮೂರು ವರ್ಷ

Related Posts

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
0

ಬಿಗ್‌ ಬಾಸ್‌ ಕನ್ನಡ (Bigg Boss Kannada) ಸೀಸನ್‌ 12 ಎರಡು ತಿಂಗಳನ್ನು ಯಶಸ್ವಿಯಾಗಿ ಪೂರೈಸಿದೆ. ಮನೆಯಲ್ಲಿ ಸ್ಪರ್ಧಿಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಇಂದು ಕೂಡ ಆಶ್ಚರ್ಯಕರವಾಗಿ ಡಬ್ಬಲ್‌...

Read moreDetails
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

ದರ್ಶನ್‌ ಫ್ಯಾನ್ಸ್‌ಗೆ ಮಹಿಳೆಯರ ಗೌರವದ ಬಗ್ಗೆ ಹೇಳಿಕೊಡಬೇಕಾಗಿಲ್ಲ-ವಿಜಯಲಕ್ಷ್ಮಿ

December 14, 2025
Next Post
ಇಂದಿಗೆ “ಕೆಜಿಎಫ್‌ ಚಾಪ್ಟರ್‌ 2” ಬಿಡುಗಡೆ ಆಗಿ ಮೂರು ವರ್ಷ

ಇಂದಿಗೆ "ಕೆಜಿಎಫ್‌ ಚಾಪ್ಟರ್‌ 2" ಬಿಡುಗಡೆ ಆಗಿ ಮೂರು ವರ್ಷ

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!