• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಯಲಸೀಮೆ ಜಿಲ್ಲೆಯ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ ಸಚಿವ ಎನ್‌ ಎಸ್‌ ಭೋಸರಾಜು

ಪ್ರತಿಧ್ವನಿ by ಪ್ರತಿಧ್ವನಿ
April 19, 2025
in Top Story, ಕರ್ನಾಟಕ, ರಾಜಕೀಯ
0
ಬಯಲಸೀಮೆ ಜಿಲ್ಲೆಯ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ  ಸಚಿವ ಎನ್‌ ಎಸ್‌ ಭೋಸರಾಜು
Share on WhatsAppShare on FacebookShare on Telegram

ADVERTISEMENT
  • ಎತ್ತಿನ ಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 285 ಕೋಟಿ ವೆಚ್ಚದಲ್ಲಿ 62 ಕೆರೆಗಳಿಗೆ ನೀರು ತುಂಬಿಸುವ ಈ ಮಹತ್ವದ ಕಾಮಗಾರಿಗೆ ಚಾಲನೆ
  • ಈ ಮಹತ್ವದ ಕಾಮಗಾರಿಗಳಿಂದ ಕೊರಟಗೆರೆ ತಾಲೂಕಿನ ಅಂತರ್ಜಲ ವೃದ್ಧಿ

ತುಮಕೂರು ಬಯಲುಸೀಮೆಯ ಜಿಲ್ಲೆಗಳಲ್ಲಿ ಜನರ ನೀರಿನ ಬವಣೆಗೆ ಶಾಶ್ವತವಾಗಿ ಪರಿಹಾರ ಒದಗಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಈ ನಿಟ್ಟಿನಲ್ಲಿ ಏತ್ತಿನಹೊಳೆ, ಕೆ.ಸಿ ವ್ಯಾಲಿ, ಹೆಚ್‌ಎನ್‌ ವ್ಯಾಲಿ ಹಾಗೂ ವೃಷಭಾವತಿ ವ್ಯಾಲಿಯಂತಹ ಯೋಜನೆಗಳನ್ನು ಕೈಗೆತ್ತಿಕೊಂಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ಗೊರವನಹಳ್ಳಿಯಲ್ಲಿ ಕೊರಟಗೆರೆ ತಾಲ್ಲೂಕಿನಲ್ಲಿ ಅಂತರ್ಜಲ ಅಭಿವೃದ್ದಿ ಸಲುವಾಗಿ ಎತ್ತಿನಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 62 ಕೆರೆಗಳಿಗೆ ನೀರನ್ನು ತುಂಬಿಸುವ ಕಾಮಗಾರಿಗೆ ಮಾನ್ಯ ಗೃಹ ಸಚಿವರಾದ ಪರಮೇಶ್ವರ್‌ ಅವರೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರಾದ ಎನ್‌ ಎಸ್‌ ಭೋಸರಾಜು

ಎತ್ತಿನ ಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 285 ಕೋಟಿ ವೆಚ್ಚದಲ್ಲಿ 62 ಕೆರೆಗಳಿಗೆ ನೀರು ತುಂಬಿಸುವ ಈ ಮಹತ್ವದ ಕಾಮಗಾರಿಗಳಿಂದ ಕೊರಟಗೆರೆ ತಾಲೂಕಿನ ಅಂತರ್ಜಲ ವೃದ್ಧಿಸಲಿದೆ. ಈ ಕೆರೆಗಳಲ್ಲಿ ಸುಮಾರು 826 ಎಂಸಿಎಫ್ಟಿ ನಷ್ಟು ನೀರು ಸಂಗ್ರಹವಾಗುವುದರಿಂದ ತಾಲೂಕಿನ ಕುಡಿಯುವ ನೀರಿನ ಬವಣೆ ಗಣನೀಯವಾಗಿ ಇಳಿಕೆಯಾಗಲಿದೆ. ಇದರಲ್ಲಿ ನಮ್ಮ ಸಣ್ಣ ನೀರಾವರಿ ಇಲಾಖೆಯ 43 ಕೆರೆಗಳು ಸೇರಿವೆ. ಇವುಗಳ ಸಂಗ್ರಹಣಾ ಸಾಮರ್ಥ್ಯ1848.46 ಎಂ.ಸಿ.ಎಫ್ ಟಿ ಇದ್ದು, ಈ ಯೋಜನೆ ಮೂಲಕ ಇವುಗಳಿಗೆ 659.47 ಎಂಸಿಎಫ್ ಟಿ ನಷ್ಟು ನೀರನ್ನು ತುಂಬಿಸುವುದರಿಂದ ಕೊರಟಗೆರೆ ತಾಲೂಕಿನ ರೈತರ ನೆಮ್ಮದಿಯ ಬದುಕಿಗೆ ದಾರಿಯಾಗಲಿದೆ .

Nikhil kumaraswamy : ನಿಮ್ಮ ಸಿದ್ದರಾಮಯ್ಯ ಭವಿಷ್ಯ #pratidhvani

ನಮ್ಮ ಸರ್ಕಾರದ ಗುರಿಯಂತೆ, ಎತ್ತಿನಹೊಳೆ ಯೋಜನೆ ಅಡಿ ಈಗಾಗಲೇ ತಿಪಟೂರು ತಾಲೂಕಿನ 105 ಕೆರೆಗಳು, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 131 ಕೆರೆಗಳ ನೀರು ತುಂಬಿಸುವ ಕಾಮಗಾರಿಗಳನ್ನು ಅಂತಿಮ ಹಂತಕ್ಕೆ ತಂದು, ಆ ಭಾಗದ ರೈತರು, ಜನರ ಮೊಗದಲ್ಲಿ ನಮ್ಮ ಸರ್ಕಾರ ಮಂದಹಾಸ ಮೂಡಿಸಿದೆ. ಮಧುಗಿರಿ ಗುರುತ್ವಾ ಕಾಲುವೆಯಿಂದ ಮಧುಗಿರಿ ತಾಲೂಕಿನಲ್ಲಿ 45 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಳಿಗೂ ಈ ಎತ್ತಿನ ಯೋಜನೆ ಅಡಿ ತಾಂತ್ರಿಕ, ಆಡಳಿತಾತ್ಮಕ ಅನುಮೋದನೆ ಪಡೆದಿರುವುದಲ್ಲದೇ, ಕಾಮಗಾರಿಗಳೂ ಆರಂಭಿಸಿರುವುದು ಭವಿಷ್ಯದ ನೀರಿನಬವಣೆ ನೀಗಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಇಟ್ಟಿರುವ ದಿಟ್ಟ ಹೆಜ್ಜೆಗೆ ಸಾಕ್ಷಿಯಾಗಿದೆ.

ಎತ್ತಿನಹೊಳೆ ಯೋಜನೆಯ ಸಮರ್ಪಕ ಅನುಷ್ಠಾನದ ಮೂಲಕ ಬಯಲು ಸೀಮೆಯ 7 ಜಿಲ್ಲೆಗಳ ನೀರಿನ ಬವಣೆಗೆ ಮುಕ್ತಿ ದೊರಕಿಸುವುದಂತೂ ಖಚಿತ. ಮುಖ್ಯವಾಗಿ,ಇದರ ಹೆಚ್ಚಿನ ಲಾಭ ತುಮಕೂರು ಜಿಲ್ಲೆಯ ರೈತರಿಗೂ ಆಗಲಿದೆ. ಈ ಮುಖ್ಯ ಕಾಲುವೆಯ ಉದ್ದ 262 ಕಿ.ಮೀಯಾಗಿದ್ದು, ಇದರಲ್ಲಿ ಸುಮಾರು 159 ಕಿ.ಮೀಯಷ್ಟು ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲೇ ಹಾದುಹೋಗುವುದರಿಂದ ಸುತ್ತಮುತ್ತ ರೈತರ ಕೃಷಿ ಚಟುವಟಿಕೆಗಳಿಗೂ, ಜನರ ಕುಡಿಯುವ ನೀರಿಗೂ ಪರಿಹಾರ ದೊರೆಯಲಿದೆ ಎನ್ನುವುದು ಖುಷಿಯ ವಿಚಾರ

ಬಯಲುಸೀಮೆಯ ಜಿಲ್ಲೆಗಳಲ್ಲಿ ಜನರು ನೀರಿನ ಬವಣೆಯಿಂದ ತತ್ತರಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ಈಗಾಗಲೇ ಕೆಸಿ ವ್ಯಾಲಿ, ಹೆಚ್‌ ನ್‌ ವ್ಯಾಲಿಯಂತಹ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ತುಮಕೂರು ಜಿಲ್ಲೆಯಲ್ಲಿ ಕುಸಿದಿರುವ ಅಂತರ್ಜಲವನ್ನು ಅಭಿವೃದ್ದಿಗೊಳಿಸಿ, ವ್ಯವಸಾಯ ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವುದು ನಮ್ಮ ಪ್ರಮುಖ ಗುರಿಯಾಗಿದೆ.

Tags: #tumkur#yettinaholeEttinaholeettinahole disputeettinahole yojanemodi speech in tumakurumodi speech in tumkurmodi tumkurtumakurutumkurtumkur electiontumkur lok sabha election 2019Tumkur Newstumkur politicstumkur rainYettinaholeYettinahole Projectyettinahole project detailsyettinahole project latest newsyettinahole project mapyettinahole project newsyettinahole project planyettinahole project status
Previous Post

ತಂದೆಯವರ ಶಾಲೆಗೆ ನೆರವು ನೀಡಿದ ಸಚಿವ ಮಧು ಬಂಗಾರಪ್ಪ

Next Post

ಕುರುಬ ಸಾಹಿತ್ಯ ಸಮ್ಮೇಳನದಲ್ಲಿ ಮನಬಿಚ್ಚಿ ಮಾತನಾಡಿದ ಸಿಎಂ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಕುರುಬ ಸಾಹಿತ್ಯ ಸಮ್ಮೇಳನದಲ್ಲಿ ಮನಬಿಚ್ಚಿ ಮಾತನಾಡಿದ ಸಿಎಂ

ಕುರುಬ ಸಾಹಿತ್ಯ ಸಮ್ಮೇಳನದಲ್ಲಿ ಮನಬಿಚ್ಚಿ ಮಾತನಾಡಿದ ಸಿಎಂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada