• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಜಿಲ್ಲಾ ಮಟ್ಟದ 9ನೇ ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಖಡಕ್‌ ನಿರ್ದೇಶನ

ಪ್ರತಿಧ್ವನಿ by ಪ್ರತಿಧ್ವನಿ
April 21, 2025
in ಕರ್ನಾಟಕ, ರಾಜಕೀಯ
0
ಜಿಲ್ಲಾ ಮಟ್ಟದ 9ನೇ ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಖಡಕ್‌ ನಿರ್ದೇಶನ
Share on WhatsAppShare on FacebookShare on Telegram

ಮಾನವೀಯತೆ, ಆತ್ಮಸಾಕ್ಷಿಯಿಂದ ಕೆಲಸ ಮಾಡಿ; ಇಲ್ಲಾ ಹೊರಟು ಹೋಗಿ

ಪ್ರತಿ 15 ದಿನಕೊಮ್ಮೆ ಇಲಾಖಾವಾರು ಸ್ವತಃ ಪ್ರಗತಿ ಪರಿಶೀಲನೆ ಮಾಡಿ

ADVERTISEMENT

ಧಾರವಾಡ ಏ.21: ನಮಗೆ, ನಿಮಗೆಲ್ಲರಿಗೂ ಇರುವ ಸಂಬಳ, ಸವಲತ್ತು ಸಾರ್ವಜನಿಕರಿಂದ ಬಂದಿದ್ದು, ನಮ್ಮ ನಮ್ಮ ಕೆಲಸ, ಕರ್ತವ್ಯಗಳನ್ನು ಮಾನವೀಯತೆ, ಆತ್ಮಸಾಕ್ಷಿಯಿಂದ ಮಾಡಬೇಕು. ವಿನಾಕಾರಣ ವಿಳಂಬ, ಉದ್ಯೋಗದಲ್ಲಿ ಆಲಸ್ಯ ತೋರಿಸುವ ಮತ್ತು ನಡಿತೈತಿ ಬಿಡು ಎನ್ನುವ ಮನೋಭಾವನೆಯ ಅಧಿಕಾರಿ, ಸಿಬ್ಬಂದಿ ಮನೆಗೆ ಹೋಗಬಹುದು. ಜಿಲ್ಲೆಯ ಅಧಿಕಾರಿ, ನೌಕರರು ಕರ್ತವ್ಯದಲ್ಲಿ ಅಶಿಸ್ತು ತೋರಿದರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 9ನೇ ಜನತಾ ದರ್ಶನದಲ್ಲಿ ಸಾರ್ವಜನಿಕರ, ಸಂಘ ಸಂಸ್ಥೆಗಳ ದೂರು, ಅಹವಾಲುಗಳನ್ನು ಸ್ವೀಕರಿಸಿ, ನಂತರ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಉದ್ದೇಶಿಸಿ, ಮಾತನಾಡಿದರು.

ಜನತಾ ದರ್ಶನದಲ್ಲಿ ಬರುವ ಅರ್ಜಿಗಳನ್ನು ಗಮನಿಸಿದಾಗ ಆಯಾ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ದೂರುಗಳನ್ನು ಸರಿಯಾಗಿ ಪರಿಶೀಲಿಸದೆ ಕಾಟಾಚಾರಕ್ಕೆ ಉತ್ತರಿಸುತ್ತಿದ್ದಾರೆ ಎಂಬುದು ತಿಳಿಯುತ್ತದೆ. ಸಲ್ಲಿಕೆ ಆಗುವ ಸಮಸ್ಯೆಗಳನ್ನು ಸರಿಯಾಗಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕು. ಬೇರೆ ಹಂತಕ್ಕೆ ಅರ್ಜಿ ರವಾನಿಸಬೇಕಾದಲ್ಲಿ ಅರ್ಜಿದಾರನಿಗೆ ಸೂಕ್ತ ತಿಳುವಳಿಕೆ ನೀಡಬೇಕು. ಆದರೆ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕ ಕಳಕಳಿ, ಮಾನವೀಯತೆ ನೋಡದೆ ಯಾಂತ್ರಿಕವಾಗಿ ವರ್ತಿಸುತ್ತಿದ್ದಾರೆ ಎಂಬುದು ಸಲ್ಲಿಕೆ ಆಗುತ್ತಿರುವ ಅರ್ಜಿಗಳಿಂದ ತಿಳಿದುಬರುತ್ತಿದೆ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಬರೀ ವೇತನಕ್ಕೆ ದುಡಿಯಬಾರದು. ಸರಕಾರದ ಸಂಬಳ ಪಡಿತೀವಿ, ಎಚ್ಚರವಿರಬೇಕು. ಜನತಾ ದರ್ಶನಕ್ಕೆ ಬರುವ ಬಹುತೇಕ ಸಮಸ್ಯೆ, ಅಹವಾಲುಗಳು ಅಧಿಕಾರಿಗಳ, ಸಿಬ್ಬಂದಿ ತಪ್ಪಿನಿಂದ ಆಗುತ್ತಿವೆ. ಸುಖಾಸುಮ್ಮನೆ ಜನರನ್ನು ಕಚೇರಿಗಳಿಗೆ ಅಲೆದಾಡಿಸಬೇಡಿ. ಕಡತಗಳ ವಿಲೇವಾರಿಯಲ್ಲಿ ವಿಳಂಬ ಮಾಡಬೇಡಿ. ನೌಕರಿಗೆ ಬಂದ ಮೇಲೆ ಅಧಿಕಾರಿಗಳಲ್ಲಿ ಒಂದು ಮೌಲ್ಯ, ಪ್ರೇರಣೆ, ಸೇವಾ ಮನೋಭಾವ ಇರಬೇಕು ಎಂದು ಸಚಿವ ಸಂತೋಷ ಲಾಡ್ ಅಧಿಕಾರಿಗಳಿಗೆ ನೈತಿಕ ಪಾಠ ಮಾಡಿದರು.

ಕೆಲವು ಅಹವಾಲುಗಳು ಜನತಾ ದರ್ಶನಕ್ಕೆ ಮತ್ತೇ ಮತ್ತೇ ಸಲ್ಲಿಕೆ ಆಗುತ್ತಿವೆ. ಇವುಗಳಿಗೆ ಬರೀ ಹಿಂಬರಹ ನೀಡಿ, ಹೊತ್ತು ಹಾಕಬೇಡಿ, ನಿಜವಾದ ಪರಿಹಾರ ಸೂಚಿಸಿ. ಸರಕಾರದ ನೀತಿಗೆ ಸಂಬಂಧಿಸಿದ್ದರೆ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ. ಸರಕಾರಿ ಕರ್ತವ್ಯವನ್ನು ನಿಯಮಾನುಸಾರ ಮತ್ತು ಸಾರ್ವಜನಿಕ ಕಳಕಳಿಯಿಂದ ಮಾಡಿ ಎಂದು ಸಚಿವರು ತಿಳಿಸಿದರು.

ಅಹವಾಲು ಮರು ಸಲ್ಲಿಕೆಯಾದರೆ, ಅಧಿಕಾರಿ ಹೋಣೆಗಾರ: ಮುಂದಿನ ಜನತಾ ದರ್ಶನದಲ್ಲಿ ಯಾವುದೇ ಸಾರ್ವಜನಿಕ ದೂರು, ಅಹವಾಲು ಮರು ಸಲ್ಲಿಕೆಯಾದರೆ ಮತ್ತು ಅದನ್ನು ಸರಿಯಾಗಿ ನಿಯಮಾನುಸಾರ ಪರಿಶೀಲಿಸಿದೇ, ವಿಲೇವಾರಿ ಮಾಡಿದ್ದರೆ ಸಂಬಂಧಿಸಿದ ಅಧಿಕಾರಿಯನ್ನು ಜವಾಬ್ದಾರ ಮಾಡಲಾಗುತ್ತದೆ. ಅಹವಾಲುಗಳು ಕಾಲಮಿತಿಯಲ್ಲಿ ವಿಲೇವಾರಿ ಆಗಬೇಕು. ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ್‌ ಲಾಡ್ ಎಚ್ಚರಿಸಿದರು.

ಕಮಿಷನರ್, ಬೆಳಿಗ್ಗೆ 6 ಗಂಟೆಗೆ ಭೇಟಿ ನೀಡಿ: ಪ್ರತಿ ಜನತಾ ದರ್ಶನದಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಿಂದ ಹೆಚ್ಚು ಅಹವಾಲು ಸಲ್ಲಿಕೆ ಆಗುತ್ತಿವೆ. ಇದಕ್ಕೆ ಮುಖ್ಯವಾಗಿ ವಿವಿಧ ಸ್ಥಳೀಯ ಪ್ರಾಧಿಕಾರ, ಇಲಾಖೆಗಳ ಮಧ್ಯದಲ್ಲಿ ಸಮನ್ವಯತೆ ಇಲ್ಲದಿರುವುದು ಕಾರಣವಾಗಿದೆ. ಮಹಾನಗರ ಪಾಲಿಕೆ ಆಯುಕ್ತರು, ವಲಯ ಸಹಾಯಕ ಆಯುಕ್ತರು ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ವಾರ್ಡಗಳಲ್ಲಿ ಇರಬೇಕು. ಸ್ವಚ್ಛತೆ, ಸಾರ್ವಜನಿಕ ದೂರುಗಳಿಗೆ ಸ್ಥಳದಲ್ಲಿಯೇ ಸ್ಪಂದಿಸಬೇಕು. ಅನಧಿಕೃತ ಕಟ್ಟಡ, ಅನಧಿಕೃತ ಕಾಮಗಾರಿ ಕಂಡುಬಂದಲ್ಲಿ ತಕ್ಷಣ ಕಾನೂನು ಕ್ರಮಕೈಗೊಳ್ಳಬೇಕು. ಪಾಲಿಕೆ ಆಯುಕ್ತರು ಒಂದು ತಂಡವಾಗಿ ಕೆಲಸ ಮಾಡಬೇಕು ಎಂದರು.

ಶೀಘ್ರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ: ಮಹಾನಗರ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ, ಅನಧಿಕೃತ ವಸತಿ ವಿನ್ಯಾಸ ಮತ್ತು ಸಾರ್ವಜನಿಕ ಜಾಗೆಗಳ ಒತ್ತುವರಿ ಹೆಚ್ಚಾಗಿದೆ. ಈ ಕುರಿತು ಸದ್ಯದಲ್ಲಿ ಮಹಾನಗರಪಾಲಿಕೆ, ಜಿಲ್ಲಾಡಳಿತ, ಹುಡಾ, ಪೊಲೀಸ್ ಹಾಗೂ ಸಂಬಂಧಿಸಿದ ಇತರ ಏಜನ್ಸಿಗಳ ಸಭೆ ಜರುಗಿಸಿ, ಅನಧಿಕೃತ ಒತ್ತುವರಿ ತೆರವುಗೊಳಿಸಲು ನೋಟಿಸ್ ನೀಡಲಾಗುತ್ತದೆ.





ಒತ್ತುವರಿದಾರರು ತಾವಾಗಿ ತೆರವುಗೊಳಿಸದಿದ್ದಲ್ಲಿ, ಮಹಾನಗರ ಪಾಲಿಕೆಯಿಂದ ಶೀಘ್ರದಲ್ಲಿ ಒತ್ತುವರಿ ತೆರವು ಹಾಗೂ ಅನಧಿಕೃತ ಕಟ್ಟಡ, ಲೇಜೌಟ್ ತೆರವಿಗೆ ಏಕಕಾಲಕ್ಕೆ ದೊಡ್ಡ ಮಟ್ಟದ ತೆರವು ಕಾರ್ಯಚರಣೆ ಕೈಗೊಳ್ಳಲಾಗುತ್ತದೆ. ಈ ಕುರಿತು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಪೊಲೀಸ್, ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸಚಿವ ಸಂತೋಷ್‌ ಲಾಡ್ ಅವರು ಸಭೆಯಲ್ಲಿ ಸೂಚನೆ ನೀಡಿದರು.

167 ಅನಧಿಕೃತ ಲೇಜೌಟ್: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹುಡಾ ಅಧಿಕೃತವಾಗಿ ಗುರುತಿಸಿರುವ ಸುಮಾರು 167 ಅನಧಿಕೃತ ಲೇಜೌಟ್ ಇವೆ. ಇವುಗಳನ್ನು ತೆರವುಗೊಳಿಸಬೇಕು. ಅನಧಿಕೃತ ಲೇಔಟಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕು. ಮತ್ತು ಅಧಿಕೃತವಾಗಿರುವ 2600 ಲೇಔಟಗಳಲ್ಲಿ ಸರಿಯಾಗಿ ನಾಗರಿಕ ಸೌಲಭ್ಯಗಳು ಸೀಗುವಂತೆ ನೋಡಿಕೊಳ್ಳಬೇಕೆಂದು ಸೂಚಿಸಿದರು.

Former DGP Om Prakash Family Crying | ಮೃತದೇಹದ ಮುಂದೆ ಕುಟುಂಬಸ್ಥರ ಆಕ್ರಂದನ #pratidhvani

ಪ್ರತಿ 15 ದಿನಕೊಮ್ಮೆ ಪ್ರಗತಿ ಪರಿಶೀಲನೆ: ಇಲಾಖಾವಾರು ಪ್ರಗತಿ ಮತ್ತು ಸಾರ್ವಜನಿಕ ಅರ್ಜಿ, ಕಡತಗಳ ವಿಲೇವಾರಿ ಬಗ್ಗೆ ಪರಿಶೀಲಿಸಲು ಪ್ರತಿ 15 ದಿನಕೊಮ್ಮೆ ಎಲ್ಲ ಇಲಾಖೆ, ನಿಗಮ ಮಂಡಳಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಅದನ್ನು ಕ್ರೂಢೀಕರಿಸಿ, ಪರಿಶೀಲಿಸಿ ಯಾವ ಇಲಾಖೆ ಪ್ರಗತಿಯಲ್ಲಿ ಹಿಂದುಳಿದೆ ಎಂಬುದನ್ನು ಪರಿಶೀಲಿಸಿ, ತಮ್ಮ ಕಚೇರಿಗೆ ವರದಿ ಸಲ್ಲಿಸಲು ಅಧಿಕಾರಿಗಳ ಸಮಿತಿ ರಚಿಸಲು ಸಚಿವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಶೇಷವಾಗಿ ತಹಶೀಲ್ದಾರ ಕಚೇರಿ, ತಾಲೂಕು ಪಂಚಾಯತ, ನೋಂದಣಿ ಅಧಿಕಾರಿ, ಆರೋಗ್ಯ, ಮಹಿಳಾ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು ಎಂದರು.

ಜನತಾ ದರ್ಶನಕ್ಕೆ ಗೈರು; ಸೂಕ್ತ ಕ್ರಮಕ್ಕೆ ಶಿಫಾರಸ್ಸು: ಜನತಾ ದರ್ಶನ ಕಾರ್ಯಕ್ರಮದ ನಂತರ ಅಧಿಕಾರಿಗಳ ಸಭೆ ಜರುಗಿಸಿದ ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಅನುಮತಿ ಇಲ್ಲದೆ ಗೈರುಹಾಜರಾಗಿರುವುದನ್ನು ಕಂಡು ಕೋಪಗೊಂಡರು. ಸಭೆಯಿಂದ ಅರ್ಧಕ್ಕೆ ಹೋಗಿದ್ದ ಕೆಲವು ಅಧಿಕಾರಿಗಳನ್ನು ಮರಳಿ ಸಭೆಗೆ ಕರೆಸಿ, ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ ಅವರು ಇದ್ದರು.

ಜನತಾ ದರ್ಶನದಲ್ಲಿ: 125 ಅಹವಾಲು ಸಲ್ಲಿಕೆ
ಧಾರವಾಡ : ಜನತಾ ದರ್ಶನದಲ್ಲಿ ಸಾರ್ವಜನಿಕರಿಂದ 125 ದೂರು, ಅಹವಾಲುಗಳು ಸಲ್ಲಿಕೆಯಾದವು.
ಇವುಗಳಲ್ಲಿ ಕಂದಾಯ 31, ಮಹಾನಗರ ಪಾಲಿಕೆ 26, ಜಿಲ್ಲಾ ಪಂಚಾಯತ 18, ಕಾರ್ಮಿಕ ಇಲಾಖೆ 16, ಪೊಲೀಸ್ ಇಲಾಖೆ 6, ಶಿಕ್ಷಣ ಇಲಾಖೆ 5 ಮತ್ತು ಇತರೆ 23 ಅಹವಾಲುಗಳು ಸೇರಿ ಒಟ್ಟು 125 ದೂರುಗಳಿವೆ. ಇವುಗಳನ್ನು ಸೂಕ್ತವಾಗಿ, ನಿಯಮಾನುಸಾರ ಪರಿಶೀಲಿಸಿ, ಕಾಲಮಿತಿಯಲ್ಲಿ ವಿಲೇವಾರಿ ಮಾಡುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಳೆದ 8 ಜನತಾ ದರ್ಶನಗಳಲ್ಲಿ ಸಾರ್ವಜನಿಕರಿಂದ ಒಟ್ಟು 1,655 ಅಹವಾಲುಗಳನ್ನು ಸ್ವೀಕರಿಸಿ, ಸೂಕ್ತವಾಗಿ ವಿಲೇವಾರಿ ಮಾಡಲಾಗಿದೆ.

Tags: cabinet ministerscongress minister postdharwad districtdistrict in charge ministerex minister santosh ladkarnataka district incharge ministersMinister Lakshmi Hebbalkarminister santosh ladPrime Minister Narendra Modiprime minister of indiaSantosh Ladsantosh lad chebbi nagarajsantosh lad foundationsantosh lad is angrysantosh lad latest newssantosh lad mlasantosh lad speechsantosh lad vs chebbi nagaraj
Previous Post

ತನಿಖೆ ವೇಳೆ ಡಿಜಿಪಿ ಪುತ್ರಿ ಹೈಡ್ರಾಮಾ.. ಫಿಂಗರ್​ ಪ್ರಿಂಟ್​ ಕೊಡದೆ ರಂಪಾಟ..

Next Post

ದೂರ ತೀರ ಯಾನ”ದ ಮೊದಲ ಪ್ರೇಮಗೀತೆಗೆ ಮೆಚ್ಚುಗೆಯ ಸುರಿಮಳೆ ..

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ದೂರ ತೀರ ಯಾನ”ದ ಮೊದಲ ಪ್ರೇಮಗೀತೆಗೆ ಮೆಚ್ಚುಗೆಯ ಸುರಿಮಳೆ ..

ದೂರ ತೀರ ಯಾನ"ದ ಮೊದಲ ಪ್ರೇಮಗೀತೆಗೆ ಮೆಚ್ಚುಗೆಯ ಸುರಿಮಳೆ ..

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada