
ದಾವಣಗೆರೆಯಲ್ಲಿ ಬಿಜೆಪಿ ಒಳಜಗಳ ಮತ್ತೆ ಸ್ಫೋಟವಾಗಿದೆ. ದಾವಣಗೆರೆಯಲ್ಲಿ ನಡೆದ ಕಾಂಗ್ರೆಸ್ ವಿರುದ್ದ ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿಯಲ್ಲಿ ಇನ್ನು ಗೊಂದಲ ಇದೆ ಅನ್ನೋದು ಬಯಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಮತ್ತೆ ಭುಗಿಲೆದ್ದಿದೆ ಬಿಜೆಪಿ ಒಳ ಜಗಳ. ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ನಡೆದ ಸಮಾವೇಶದಲ್ಲಿ ಕೇಂದ್ರದ ಮಾಜಿ ಸಚಿವ ಜಿ.ಎಂ ಸಿದ್ದೇಶ್ವರ್, ಹರಿಹರ ಶಾಸಕ ಬಿಪಿ ಹರೀಶ್, ಮಾಜಿ ಶಾಸಕ ಎಸ್.ವಿ ರಾಮಚಂದ್ರಪ್ಪ ಗೈರು ಹಾಜರಾಗಿದ್ರು..

ದಾವಣಗೆರೆ ನಗರದಲ್ಲಿ ಜನಾಕ್ರೋಶ ಯಾತ್ರೆ ನಡೆಯುತ್ತಿದ್ದರು ಫ್ಲೆಕ್ಸ್ಗಳಲ್ಲೂ ಜಿ.ಎಂ ಸಿದ್ದೇಶ್ವರ್, ಬಿ.ಪಿ ಹರೀಶ್ ಫೋಟೊ ಹಾಕಿಸದ ವಿಜಯೇಂದ್ರ ಟೀಂ, ಎಂ.ಪಿ ರೇಣುಕಾಚಾರ್ಯ ಅಂಡ್ ಟೀಂ ಜೊತೆಗೆ ಸಮಾವೇಶ ಮಾಡಲಾಗಿದೆ. ದಾವಣಗೆರೆಯಲ್ಲಿ ಮತ್ತೆ ಒಳಜಗಳ ಬಟಾ ಬಯಲು ಆಗಿದೆ. ಕಾರ್ಯಕರ್ತರು ಕೂಡ ಕಡಿಮೆ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯಾಧ್ಯಕ್ಣ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಸದಾನಂದ ಗೌಡ, ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಪಿ ರಾಜೀವ್, ಮಾಡಾಳ್ ವಿರುಪಾಕ್ಷಪ್ಪ ಭಾಗಿಯಾಗಿದ್ದರು.
ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಬಿ.ವೈ ವಿಜಯೇಂದ್ರ, ಮೂರನೇ ಹಂತದ ಜನಾಕ್ರೋಶ ಯಾತ್ರೆಗೆ ದಾವಣಗೆರೆಯಲ್ಲಿ ಚಾಲನೆ ಸಿಕ್ಕಿದೆ. ಕಳೆದ ವಿಧಾಸಭೆಯಲ್ಲಿ ಹಿನ್ನೆಡೆ ಆಗಿರೋದ್ರಿಂದ ಜನಾಕ್ರೋಶ ಯಾತ್ರೆ ಮಾಡ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ವಿಧಾಸಭೆಯಲ್ಲಿ ನೀಡಿದ್ದ ಎಲ್ಲಾ ಭರಸೆ ಗಾಳಿಗೆ ತೂರಿದೆ. 50 ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆಗಳ ದುಬಾರಿ ಆಗಿದೆ. ಕೇವಲ ಅಲ್ಪಸಂಖ್ಯಾತರ ಹಿಂದೆ ಸಿದ್ದರಾಮಯ್ಯ ಹೊರಟ್ಟಿದ್ದಾರೆ. ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯ ಸರ್ಕಾರ ಜನರ ಮೇಲೆ ಬರೆ ಎಳೆದಿದೆ. ಈ ಹಿಂದೆ ಇದ್ದ ಬಿಜೆಪಿ ಅನುದಾನದಲ್ಲಿ ಕೆಲಸಗಳು ಆಗ್ತಾಯಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಯಾವುದೇ ಕೆಲಸಗಳು ಆಗ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯನವರು ಮುಂದಿನ ದಿನಗಳಲ್ಲಿ ಬುರ್ಕಾ ಹಾಕಿಕೊಂಡು ಓಡಾಡೋ ಪರಿಸ್ಥಿತಿ ಬಂದ್ರು ಬರಬಹುದು ಎಂದು ಸಿಎಂ ಸಿದ್ದರಾಮಯ್ಯ ಬಗ್ಗೆ ಲೇವಡಿ ಮಾಡಿದ್ದಾರೆ ಬಿ.ವೈ.ವಿಜಯೇಂದ್ರ. ಭ್ರಷ್ಟಾಚಾರದಲ್ಲಿ ಕರ್ನಾಟಕ ಇಡೀ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ. ರಾಯರೆಡ್ಡಿಯವರೆ ಈ ಬಗ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಸರ್ಕಾರದಲ್ಲಿ ಕೆಲಸ ಮಾಡೋಕೆ ಆಗ್ತಿಲ್ಲ ಅಂತಿದ್ದಾರೆ. ಅಭಿವೃದ್ಧಿ ಬಿಟ್ಟು ಭ್ರಷ್ಟಾಚಾರದಲ್ಲಿ ದೇಶದಲ್ಲಿ ಪ್ರಥಮ ಬಂದಿದೆ. ಕಾಂತಾರಾಜ್ ವರದಿ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಹೊರ ತರೋಕೆ ಆಗೋದಿಲ್ಲ. ತಮ್ಮ ಕುರ್ಚಿ ಭದ್ರಗೊಳಿಸುವ ಸಲುವಾಗಿಯೇ ಜಾತಿ ಜಾತಿ ಮಧ್ಯ ಕಂದಕ ತೊಡ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕಾಗುತ್ತೆ ಅಂತ ಜಾತಿಗಣತಿ ಮುಂದೆ ತಂದಿದ್ದಾರೆ ಎಂದಿರುವ ವಿಜಯೇಂದ್ರ ಕೇವಲ ಮುಸ್ಲಿಂ ಮತ ಪಡೆದು ಮುಖ್ಯಮಂತ್ರಿ ಆಗಿದ್ದಿರಾ..? ಅಂತ ಪ್ರಶ್ನೆ ಮಾಡಿದ್ದಾರೆ.







