• Home
  • About Us
  • ಕರ್ನಾಟಕ
Friday, September 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಉಗ್ರರನ್ನು ಸದೆ ಬಡಿಯುವ ಕೆಲಸವನ್ನು ಕೇಂದ್ರ ಮಾಡಬೇಕು..

ಕೃಷ್ಣ ಮಣಿ by ಕೃಷ್ಣ ಮಣಿ
April 23, 2025
in Top Story, ದೇಶ, ವಿಶೇಷ
0
ಉಗ್ರರನ್ನು ಸದೆ ಬಡಿಯುವ ಕೆಲಸವನ್ನು ಕೇಂದ್ರ ಮಾಡಬೇಕು..
Share on WhatsAppShare on FacebookShare on Telegram

ಪಹಲ್ಗಾಮ್​ನ ದಾಳಿಕೋರರನ್ನು ಸದೆಬಡಿಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಚಿವ ಎಂ‌ ಬಿ ಪಾಟೀಲ್ ಒತ್ತಾಯ ಮಾಡಿದ್ದಾರೆ. ಕಾಶ್ಮೀರದ ಪಹಲ್ಗಾಮ್​ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ನಡೆಸಿರುವ ದಾಳಿ ಅತ್ಯಂತ ಹೇಯ ಮತ್ತು ಹೇಡಿತನದ ಕೃತ್ಯವಾಗಿದೆ. ಇದಕ್ಕೆ ಕಾರಣರಾದ ಉಗ್ರಗಾಮಿಗಳನ್ನು ಯಾವ ಮುಲಾಜೂ ಇಲ್ಲದೆ ಸದೆಬಡಿಯುವ ಕೆಲಸ ಆಗಬೇಕು. ಉಗ್ರಗಾಮಿಗಳಿಗೆ ಯಾವುದೇ ಧರ್ಮ, ಜಾತಿ, ಸಂಸ್ಕೃತಿ ಏನೂ ಇಲ್ಲ. ಅಮಾಯಕರ ಹತ್ಯೆ ಅಮಾನುಷ ಕೃತ್ಯ. ಅವರನ್ನು ಹತ್ತಿಕ್ಕಬೇಕಷ್ಟೆ. ಇದಕ್ಕೆ ಪಾಕಿಸ್ತಾನದ ಬೆಂಬಲವಿದ್ದರೆ ಆ ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂಲೆಗುಂಪು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ಕಾಶ್ಮೀರದಲ್ಲಿ ಇತ್ತೀಚೆಗೆ ಪರಿಸ್ಥಿತಿ ಸಹಜವಾಗಿತ್ತು. ಅಲ್ಲಿಯ ಜನರು ಕೂಡ ವ್ಯಾಪಾರ ವಹಿವಾಟುಗಳಲ್ಲಿ ತೊಡಗಿಕೊಂಡು ಸಂತಸದಿಂದ ಇದ್ದರು. ಹೀಗಾಗಿ, ಕೇಂದ್ರ ಸರಕಾರವು ಸೇನಾಪಡೆಗಳನ್ನು ಸ್ವಲ್ಪ ಮಟ್ಟಿಗೆ ಹಿಂತೆಗೆದುಕೊಂಡಿತ್ತು. ಉಗ್ರಗಾಮಿಗಳು ಇದರ ದುರ್ಲಾಭ ಪಡೆದುಕೊಂಡು ಈ ಬರ್ಬರ ಕೃತ್ಯ ಎಸಗಿದ್ದಾರೆ. ಕೇಂದ್ರವು ಈಗ ಪುನಃ ಮತ್ತಷ್ಟು ಸೇನಾಪಡೆಯನ್ನು ಕಾಶ್ಮೀರದಲ್ಲಿ ನಿಯೋಜಿಸಬೇಕು. ಈ ದುರಂತದಲ್ಲಿ ರಾಜ್ಯದ ಇಬ್ಬರು ಅಸುನೀಗಿದ್ದಾರೆ. ಅವರ ಕುಟುಂಬಗಳಿಗೆ ಸರಕಾರ ಎಲ್ಲಾ ನೆರವು ನೀಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಚಿವ ಸಂತೋಷ್ ಲಾಡ್ ಅವರನ್ನು ಕಾಶ್ಮೀರಕ್ಕೆ ಕಳಿಸಿಕೊಟ್ಟು, ತ್ವರಿತವಾಗಿ ಸ್ಪಂದಿಸಿದ್ದಾರೆ ಎಂದಿದ್ದಾರೆ.

ಕಾಶ್ಮೀರದಲ್ಲಿ ಉಗ್ರರ ದಾಳಿ ಬಗ್ಗೆ ಹಾವೇರಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮಾತನಾಡಿದ್ದು, ದೇಶದಲ್ಲಿ 2 ಝೆಂಡಾ, ಭಾರತದ್ದೂ ಮತ್ತೆ ಕಾಶ್ಮೀರದ್ದೊಂದು ಬೇರೆ ಬೇರೆ. ದೇಶದಲ್ಲಿ ಆಗುವಂತಹ ಕಾನೂನು ಯಾವುದು ಅಲ್ಲಿ ಕಾಶ್ಮೀರದಲ್ಲಿ ಜಾರಿ ಆಗತ್ತೀರಲಿಲ್ಲ.. ಕಾಶ್ಮೀರದಲ್ಲಿ ಪೊಲೀಸರು ಮತ್ತು ಸೈನಿಕರ ರುಂಡವನ್ನ ಕತ್ತರಿಸ್ತಿದ್ದರು. ಆರ್ಟಿಕಲ್​ 370 ಜಾರಿ ಮಾಡಿರೋದು ಮೋದಿಯವರ ಐತಿಹಾಸಿಕ ನಿರ್ಣಯ. ಕಾಶ್ಮೀರದಲ್ಲಿ 370 ತೆಗೆದ ಮೇಲೆಯೂ ಶಾಂತಿಯುತವಾಗಿತ್ತು. ಇವಾಗ ಪಾಕಿಸ್ತಾನದವರೂ ಹತಾಶೆಗೊಂಡಿದ್ದಾರೆ. ಇನ್ಮೇಲೆ ಕಾಶ್ಮೀರದಲ್ಲಿ ಪಾಕಿಸ್ತಾನದವರಿಗೆ ಭವಿಷ್ಯವಿಲ್ಲ ಅಂತಾ.

ಕಾಶ್ಮೀರವನ್ನ ಮೋದಿಯವರು ಸಿಕ್ಕಾಪಟೆ ಡೆವಲಪ್ಮೆಂಟ್ ಮಾಡಿದ್ದಾರೆ. ಭಾರತದಿಂದ ಕಾಶ್ಮೀರವನ್ನ ವಾಪಸ್ ತೆಗೆದುಕೊಳ್ಳಲು ಆಗಲ್ಲ ಎಂಬ ಭಯವಿದೆ. ಕೆಲವೇ ದಿನಗಳಲ್ಲಿ ಬಲೂಚಿಸ್ತಾನ ಕೂಡ ಭಾರತದ ಭಾಗವಾಗುತ್ತದೆ. ಪಾಕಿಸ್ತಾನ ನಾಲ್ಕು ಭಾಗಗಳು ಆಗ್ತದೆ ಎಂಬ ಭಯ ಬಂದಿದೆ. ಕಾಶ್ಮೀರದಲ್ಲಿ ಸೈನಿಕರು ಗೌರವಯುತ ಸೇವೆ ಮಾಡಲು ಕಾರಣ ನರೇಂದ್ರ ಮೋದಿಯವರು. ಒಂದು ಘಟನೆಯಿಂದ ಕೇಂದ್ರ ಸರಕಾರದ ಭದ್ರತಾ ವೈಫಲ್ಯ ಎನ್ನಲು ಸಾಧ್ಯವಿಲ್ಲ. ಭಯೋತ್ಪಾದಕರು ಪೊಲೀಸ್ ಡ್ರೆಸ್​ನಲ್ಲಿ ಬಂದು ಹತ್ಯೆ ಮಾಡಿದ್ದಾರೆ. ಸಾಮಾನ್ಯ ಜನರಿಗೆ ಹೇಗೆ ಗುರುತು ಸಿಗಬೇಕು..? ಕಾಶ್ಮೀರವನ್ನ ಸಂಪೂರ್ಣವಾಗಿ ಕೇಂದ್ರಾಡಳಿತ ಪ್ರದೇಶವಾಗಿ ಮಾಡಲಿ ಎಂದು ಆಗ್ರಹ ಮಾಡಿದ್ದಾರೆ.

ಕಾಶ್ಮೀರದಲ್ಲಿ ಯಾವ ಮುಖ್ಯಮಂತ್ರಿಯೂ ಬ್ಯಾಡ. ಅಂಡಮಾನ್​ನಂತೆ ಕಾಶ್ಮೀರವನ್ನು ಕೇಂದ್ರದ ಕಂಟ್ರೋಲ್​ನಲ್ಲಿ ಇರಬೇಕು ಎಂದಿರುವ ಯತ್ನಾಳ್​, ಜಮ್ಮು ಮತ್ತು ಕಾಶ್ಮೀರಕ್ಕೆ ಕೇಂದ್ರಾಡಳಿತ ಅವಶ್ಯಕತೆಯಿದೆ. ಪಂಡಿತರು ನೆಲೆ ಉರಿದ ಬಳಿಕ ಚುನಾವಣೆ ಮಾಡಬೇಕಿತ್ತು. ಅಗ್ನಿಪಥ ಮೂಲಕ 5 ವರ್ಷ ದೇಶ ಸೇವೆ ಮಾಡ್ತಿದ್ದರೂ ಇದರ ಉದ್ದೇಶ ಹಳ್ಳಿಯಲ್ಲೂ ಸೈನಿಕರನ್ನು ತಯಾರಿ ‌ಮಾಡೋದು.. ಇಸ್ರೇಲ್​ನಲ್ಲಿ ಹುಟ್ಟಿದ ಕೂಡಲೇ ಮಿಲಿಟರಿ ಟ್ರೈನಿಂಗ್ ಆಗಬೇಕು. 50 ಪರ್ಸೆಂಟ್​ ಮುಸ್ಲಿಂ ಇದ್ದಲ್ಲಿ ದಂಗೆ ಗ್ಯಾರಂಟಿ. ಅದನ್ನು ರಕ್ಷಣೆ ಮಾಡಲು ಅಗ್ನಿಪಥ ಬೇಕಿದೆ. ಅಗ್ನಿಪಥಗೆ ಕಾಂಗ್ರೆಸ್ ಸೇರಿ ಜಾತ್ಯತೀತ ನಾಯಕರು ವಿರೋಧ ಮಾಡಿದ್ದರು. ನರೇಂದ್ರ ಮೋದಿಯವರು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಈ ಹತ್ಯೆ ಸೇಡನ್ನ 270 ಜನ ಭಯೋತ್ಪಾದಕ ಕೊಲ್ಲುವ ಮೂಲಕ ತಿರಿಸಿಕೊಳ್ತಾರೆ ಎಂದಿದ್ದಾರೆ.

Tags: Jammu and Kashmirjammu kashmir attackjammu kashmir newsjammu kashmir terror attackjammu kashmir terror attack todayjammu kashmir terrorist attackjammu kashmir terrorist attack latest newsjammu kashmir terrorist attack newskashmir attackkashmir terror attackkashmir terrorist attackpahalgam attackpahalgam terror attackpahalgam terrorist attackterror attackterror attack in jammu kashmirterror attack in kashmir
Previous Post

ಭದ್ರತಾ ವೈಫಲ್ಯ ಎಂದ ಕಾಂಗ್ರೆಸ್​ಗೆ ಸಿ.ಟಿ ರವಿ ತಿರುಗೇಟು..

Next Post

ಕಾಶ್ಮೀರದಲ್ಲಿನ ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
0

ವೃತ್ತಿ ಜೀವನದಲ್ಲಿ ವಿರಾಮದ ನಂತರ, ವಿಶೇಷವಾಗಿ ತಾಂತ್ರಿಕ ಕರ್ತವ್ಯಗಳಲ್ಲಿ ಮಹಿಳೆಯರು ಮತ್ತೆ ಕಾರ್ಯಪಡೆಗೆ ಸೇರಲು ಸಹಾಯ ಮಾಡುವಲ್ಲಿ ಮತ್ತು ಮಹಿಳೆಯರು ಮರುಕೌಶಲ್ಯ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲು ಅಭ್ಯರ್ಥಿಗಳನ್ನು ಹುರಿದುಂಬಿಸುತ್ತಿರುವ...

Read moreDetails
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

September 4, 2025

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

September 4, 2025

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

September 4, 2025
Next Post

ಕಾಶ್ಮೀರದಲ್ಲಿನ ಉಗ್ರರ ದಾಳಿ ಪ್ರಪಂಚಕ್ಕೇ ದೊಡ್ಡ ಆಘಾತ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ
Top Story

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

by ನಾ ದಿವಾಕರ
September 4, 2025
Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

by ಪ್ರತಿಧ್ವನಿ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada