• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

‘ಟಕೀಲಾ’ ಡ್ರಗ್ಸ್ ಸುಳಿಯಲ್ಲಿ ನಲುಗಿದವರು..

ಪ್ರತಿಧ್ವನಿ by ಪ್ರತಿಧ್ವನಿ
April 28, 2025
in ಸಿನಿಮಾ
0
‘ಟಕೀಲಾ’ ಡ್ರಗ್ಸ್ ಸುಳಿಯಲ್ಲಿ ನಲುಗಿದವರು..
Share on WhatsAppShare on FacebookShare on Telegram

ಜಡ್, ಹೂ ಅಂತೀಯಾ ಉಹೂ ಅಂತೀಯಾ, ಮೀಸೆ ಚಿಗುರಿದಾಗದಂಥ ಚಿತ್ರಗಳ ನಿರ್ದೇಶಕ ಹಾಗೂ ಫೋಟೋ ಜರ್ನಲಿಸ್ಟ್ ಕೂಡ ಆಗಿರುವ ಕೆ.ಪ್ರವೀಣ್ ನಾಯಕ್ ಅವರು ಬಹಳ ದಿನಗಳ ನಂತರ ಆಕ್ಷನ್‌ಕಟ್ ಹೇಳಿರುವ ಚಿತ್ರ ಟಕೀಲಾ. ಶ್ರೀಸಿದ್ಧಿವಿನಾಯಕ ಫಿಲಂಸ್ ಲಾಂಛನದಲ್ಲಿ ಮರಡಿಹಳ್ಳಿ ನಾಗಚಂದ್ರ ಅವರ ನಿರ್ಮಾಣದ ಈ ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಇತ್ತೀಚೆಗೆ ಚಿತ್ರದ ೨ ಹಾಡುಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಟಿ ನೆರವೇರಿತು.

ADVERTISEMENT


ಧರ್ಮ ಕೀರ್ತಿರಾಜ್(Dharma Keerthiraj), ನಿಖಿತಾಸ್ವಾಮಿ(Nikhita Swamy) ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ನಾಗೇಂದ್ರ ಅರಸ್(Nagendra Urs), ಕೋಟೆ ಪ್ರಭಾಕರ್(Kote Prabhakar), ಸುಮನ್(Suman), ಜಯರಾಜ್(Jayaraj), ಸುಶ್ಮಿತಾ(Sushmitha), ನಿರ್ದೇಶಕ ಪ್ರವೀಣ್‌ ನಾಯಕ್ (Praveen Nayak) ಕೂಡ ಅಭಿನಯಿಸಿದ್ದಾರೆ.


ಈ ಸಂದರ್ಭದಲ್ಲಿ ಪ್ರವೀಣ್ ನಾಯಕ್ ಮಾತನಾಡುತ್ತ ಮನಸಿನ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿದ್ದೇನೆ, ಮನಸಿನ ಸಮಸ್ಯೆಗಳನ್ನು ನೋಡ್ತಾ ನೋಡ್ತಾ ಜನರ ಮನಸ್ಥಿತಿ ಅವಲೋಕಿಸಿದಾಗ ಎಲ್ಲರಿಗೂ ಒಂದಲ್ಲ ಒಂದು ಚಿಂತೆಯಿರುತ್ತೆ ಅನ್ನೋದು ಗೊತ್ತಾಯ್ತು, ಇದೆಲ್ಲವನ್ನೂ ಸೇರಿಸಿ ನಾನು, ನನ್ನ ಪತ್ನಿ ಸೇರಿ ನೈಜತೆಗೆ ಹತ್ತಿರವಾಗುವಂಥ ಒಂದು ಕಥೆ ಬರೆದೆವು. ಜೀವನದಲ್ಲಿ ಮನುಷ್ಯನಿಗೆ ಒಂದು ಅವಕಾಶ ಸಿಗುತ್ತೆ, ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಇದ್ದರೆ,‌ ಮತ್ತೆ ಎರಡನೇ ಅವಕಾಶ ಸಿಗದೇ ಇರಬಹುದು, ಹಾಗಾಗಿ ಸಿಕ್ಕ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಎಂದು ನಮ್ಮ ಚಿತ್ರದ ಮೂಲಕ ಹೇಳಿದ್ದೇನೆ, ತುಂಬಾ ತಡವಾಗಿ ನಿರ್ಧಾರ ತಗೊಂಡರೆ ಅದು ಕೂಡ ಉಪಯೋಗಕ್ಕೆ ಬರಲ್ಲ, ಚಟಗಳು ಅತಿಯಾದಾಗ ಏನು ಬೇಕಾದರೂ ಆಗಬಹುದು, ಡ್ರಗ್ಸ್ ಅನ್ನೋದು ಒಂದು ಸುಳಿ ಇದ್ದಹಾಗೆ, ಅದನ್ನು ಕುತೂಹಲದಿಂದ ಮುಟ್ಟಿ ನೋಡೋ ಪ್ರಯತ್ನ ಮಾಡಬಾರದು ಅನ್ನೋದು ಚಿತ್ರದ ಕಾನ್ಸೆಪ್ಟ್. ಈ ಚಿತ್ರದಲ್ಲಿ ೨ ಹಾಡುಗಳಿದ್ದು ನಾನು ಹಾಗೂ ನಾಗೇಂದ್ರ ಪ್ರಸಾದ್ ಲಿರಿಕ್ಸ್ ಬರೆದಿದ್ದೇವೆ.

Siddu Govt 2 years: ಎಂದೆಂದಿಗೂ ಹಿಂದೂಸ್ತಾನ್ ಹಮಾರ ಅಂತ ಅಬ್ಬರಿಸಿದ ಸಚಿವ ಜಮೀರ್ #pratidhvani

ಚಿತ್ರದಲ್ಲಿ ಸ್ವಲ್ಪ ಅಡಲ್ಟ್ ಕಂಟೆಂಟ್ ಕೂಡ ಬರುತ್ತೆ, ಹಾಗಂತ ಯಾವುದನ್ನೂ ವಲ್ಗರ್ ಆಗಿ ತೋರಿಸಿಲ್ಲ, ಕ್ಲಾಸ್ ಆಗಿ ಹೇಳೋ ಪ್ರಯತ್ನ ಮಾಡಿದ್ದೇನೆ. ಜೀವನದಲ್ಲಿ ನಾನು ನೋಡಿದ, ಕೇಳಿದ ಅನುಭವಗಳೇ ಈ ಸಿನಿಮಾವಾಗಿದೆ. ಸೈಕಾಲಜಿ ಜತೆಗೆ ಸ್ಪಿರಿಚುಯಾಲಿಟಿ ಬೆರೆಸಿ ಮಾಡಿದ ಚಿತ್ರವಿದಾಗಿದ್ದು, ಈ ಮೂಲಕ ಒಂದು ಅರಿವು ಮೂಡಿಸುವ ಪ್ರಯತ್ನ ಎನ್ನಬಹುದು, ಟೈಟಲ್ ಸಾಂಗ್ ಒಂದೇ ದಿನದಲ್ಲಿ ಒಂದೂವರೆ ಲಕ್ಷ ವೀಕ್ಷಣೆಯಾಗಿದೆ ಎಂದು ಹೇಳಿದರು. ನಂತರ ನಿರ್ಮಾಪಕ ನಾಗಚಂದ್ರ (Director Nagachandra) ಮಾತನಾಡಿ ಮೊದಲು ಚಿಕ್ಕದಾಗಿ ಮಾಡೋಣ ಅಂದುಕೊಂಡದ್ದು ನಂತರ ದೊಡ್ಡದಾಯ್ತು. ಅಲ್ಲದೆ ಹಲವಾರು ಕಾರಣಗಳಿಂದ ಸಿನಿಮಾದ ಬಿಡುಗಡೆ ತಡವಾಗಿದೆ. ಚಿತ್ರವನ್ನು ವಿತರಕ‌ ಜಯಣ್ಣ ಅವರು ರಿಲೀಸ್ ಮಾಡುತ್ತಿದ್ದಾರೆ, ಕರ್ನಾಟಕದಾದ್ಯಂತ ೧೫೦ಕ್ಕೂ ಹೆಚ್ಚು ಸೆಂಟರ್‌ಗಳಲ್ಲಿ ಟಕೀಲ ತೆರೆಗೆ ಬರಲಿದೆ ಎಂದರು,


ನಾಯಕ ಧರ್ಮ ಕೀರ್ತಿರಾಜ್ (Hero Dharma Keerthiraj) ಮಾತನಾಡುತ್ತ ನಾನು ಈ ಸಿನಿಮಾದಲ್ಲಿ ಅಭಿನಯಿಸಲು ಕಾರಣ ನಿರ್ಮಾಪಕ ನಾಗಚಂದ್ರ(Nagachandra), ಅವರಿಗೆ ಈ ಚಿತ್ರದಿಂದ ಒಳ್ಳೇ ಹೆಸರು ಬರಲಿ, ನಮ್ಮ ತಂದೆಯವರಿಗೆ ಪ್ರವೀಣ್ ನಾಯಕ್ ಅವರಜತೆ ಸಿನಿಮಾ ಮಾಡ್ತಿದೀನಿ ಎಂದಾಗ ಮಾಡು ಅಂಥವರ ಬಳಿ ಕಲಿಯುವುದು ಬಹಳಷ್ಟಿರುತ್ತೆ ಎಂದು ಪ್ರೋತ್ಸಾಹಿಸಿದರು. ಈ ಸಿನಿಮಾ ಮೂಲಕ ನನಗೆ ಖಂಡಿತ ಒಳ್ಳೇ ಹೆಸರು ಬರುತ್ತೆ ಎಂಬ ನಂಬಿಕೆಯಿದೆ, ಒಬ್ಬ ಬ್ಯುಸಿನೆಸ್ ಮ್ಯಾನ್ ಪಾತ್ರ ಮಾಡಿದ್ದು, ಆತ ಯಾವುದೋ ಒಂದು ಚಟಕ್ಕೆ ಬಿದ್ದಾಗ ಏನೆಲ್ಲ ಆಗಬಹುದೆಂದು ತೋರಿಸಲಾಗಿದೆ ಎಂದರು. ನಾಯಕಿ ನಿಖಿತಾಸ್ವಾಮಿ (Nikhitha swamy) ಮಾತನಾಡಿ ನನಗೆ ಈ ಕಥೆ ಹೇಳಿದಾಗ ತುಂಬಾ ಚಾಲೆಂಜಿಂಗ್ ಪಾತ್ರ ಎನಿಸಿತು, ಇದರಲ್ಲಿ ಹಲವಾರು ಶೇಡ್ಸ್ ಬರುತ್ತೆ, ನನ್ನಿಂದಾದ ಎಫರ್ಟ್ ಹಾಕಿದ್ದೇನೆ ಎಂದರು. ನಂತರ ಸಂಗೀತ ನಿರ್ದೇಶಕ ರೇಣುಕುಮಾರ್(Renu Kumar), ನಟ ಸಂಕಲನಕಾರ ನಾಗೇಂದ್ರ ಅರಸ್, ಸಹ ನಿರ್ಮಾಪಕರಾದ ಶಂಕರ ರಾಮರೆಡ್ಡಿ(Shankar Ramareddy), ಚನ್ನತಿಮ್ಮಯ್ಯ (Channathimmayya) ಮುಂತಾದವರು ಟಕೀಲಾ ಚಿತ್ರದ ಕುರಿತಂತೆ ಮಾತನಾಡಿದರು. ಪಿ.ಕೆ.ಹೆಚ್. ದಾಸ್ (PKH Das) ಅವರ ಛಾಯಾಗ್ರಹಣ, ಗಿರೀಶ್ ಅವರ ಸಂಕಲನ, ಪ್ರಶಾಂತ್ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ.

Tags: best sandalwood moviesKannada moviekannada movie hdkannada movie sceneskannada movieskannada movies 2023kannada new movieslatest kannada moviesnew kannada moviesandalwoodsandalwood dubbed moviessandalwood filmssandalwood full moviessandalwood latest moviesSandalwood moviesandalwood movie industrysandalwood moviessandalwood movies 2023sandalwood upcoming moviestollywood vs sandalwood movie industry
Previous Post

ಭಾರತ ಯುದ್ಧ ಮಾಡಲು ಸಿದ್ಧ, ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಭೀತು ಮಾಡಿದೆ: ಸಿಎಂ ಸಿದ್ದರಾಮಯ್ಯ

Next Post

ಸರ್ಕಾರ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
0

ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ (Anil Shetty) ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ. ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ...

Read moreDetails

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

June 26, 2025

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

June 26, 2025

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

June 25, 2025
ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

ವಿಶೇಷ ಚೇತನ ಮಕ್ಕಳಿಗಾಗಿ ‘ಸಿತಾರೆ ಜಮೀನ್ ಪರ್’ ಚಿತ್ರದ ವಿಶೇಷ ಪ್ರದರ್ಶನ

June 24, 2025
Next Post
ಸರ್ಕಾರ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸರ್ಕಾರ ಜನರ ಋಣ ತೀರಿಸುವ ಕೆಲಸ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
Top Story

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

by Pratidhvani
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada