• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಸಮವಸ್ತ್ರದಲ್ಲಿದ್ದ ಪೊಲೀಸ್​ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಕ್ಷಮೆ ಕೇಳಲಿ’

ಕೃಷ್ಣ ಮಣಿ by ಕೃಷ್ಣ ಮಣಿ
April 29, 2025
in Top Story, ಕರ್ನಾಟಕ, ರಾಜಕೀಯ
0
‘ಸಮವಸ್ತ್ರದಲ್ಲಿದ್ದ ಪೊಲೀಸ್​ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಕ್ಷಮೆ ಕೇಳಲಿ’
Share on WhatsAppShare on FacebookShare on Telegram

ಪಾಕಿಸ್ತಾನದ ಪರ ಸಹಾನುಭೂತಿ ತೋರಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿದ್ದ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಮಾಡಲಾಗಿದೆ. ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಇದರಿಂದ ವಿಚಲಿತಗೊಂಡ ಮುಖ್ಯಮಂತ್ರಿಗಳು ಸಮವಸ್ತ್ರದಲ್ಲಿದ್ದ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ, ಕೈ ಮಾಡಲು ಮುಂದಾಗಿರುವ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.

ADVERTISEMENT
CM Siddaramaiah : ಏನ್ ಯಾವನ್ ಅವ SP ವೇದಿಕೆ ಮೇಲೆಯೇ CM ಗರಂ #pratidhvani

ಅಧಿಕಾರ ಮದದಲ್ಲಿ ತೇಲುತ್ತಿರುವ ಸಿದ್ದರಾಮಯ್ಯನವರ ನಡೆ, ನುಡಿಗಳು ಇತ್ತೀಚಿನ ದಿನಗಳಲ್ಲಿ ವಿಪರೀತಕ್ಕೆ ಹೋಗುತ್ತಿವೆ. ಕೆಲ ತಿಂಗಳ ಹಿಂದೆ ಸಭೆಯೊಂದರಲ್ಲಿ ದಕ್ಷ ಜಿಲ್ಲಾಧಿಕಾರಿಯೊಬ್ಬರನ್ನು ಕೇವಲವಾಗಿ ಅಪಮಾನಿಸಿ, ತಮ್ಮ ಸಂಸ್ಕೃತಿ ಹೀನ ನಡುವಳಿಕೆಯನ್ನು ಸಿದ್ದರಾಮಯ್ಯನವರು ಅನಾವರಣ ಮಾಡಿಕೊಂಡಿದ್ದರು. ಅವರ ವರ್ತನೆ ಇಂದು – ನಿನ್ನೆಯದಲ್ಲ, ತಮ್ಮ ಸ್ವಕ್ಷೇತ್ರದಲ್ಲಿ ಮಹಿಳೆಯೊಬ್ಬರ ಸೆರಗೆಳೆದು ರೌದ್ರಾವತಾರ ಪ್ರದರ್ಶಿಸಿದ ಘಟನೆ ಇನ್ನೂ ಹಸಿಯಾಗಿಯೇ ಇದೆ. ಅದೇ ರೀತಿ ಮೈಸೂರು ಭಾಗದ ಹಿರಿಯ ರಾಜಕಾರಿಣಿಯಾಗಿದ್ದ ನಂಜನಗೂಡಿನ ದಿವಂಗತ ಎಂ.ಮಹದೇವು ಅವರ ಮೇಲೂ ಹಲ್ಲೆ ನಡೆಸಿದ ಪ್ರಕರಣವನ್ನು ಮಾಧ್ಯಮಗಳು ʼಸಿದ್ದು-ಗುದ್ದುʼ ಪ್ರಕರಣ ಎಂದೇ ವ್ಯಾಖ್ಯಾನಿಸಿದ್ದವು ಎಂದು ಹಳೇ ಪ್ರಕರಣಗಳನ್ನು ಮೆಲುಕು ಹಾಕಿದ್ದಾರೆ.

ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತವರಿಗೆ ಅನುಭವದ ಹಿರಿತನ, ನಡುವಳಿಕೆ ಹಾಗೂ ಮಾತುಗಳನ್ನು ಮಾಗಿಸಬೇಕು. ಆದರೆ ಸಿದ್ದರಾಮಯ್ಯನವರ ವಿಷಯದಲ್ಲಿ ಇದು ತಿರುಗು-ಮುರುಗಾಗಿದೆ. ದಿನೇ ದಿನೇ ಅವರು ತಮ್ಮ ನಾಲಿಗೆಯ ಮೇಲೆ ಹಿಡಿತ ಕಳೆದುಕೊಳ್ಳುತ್ತಿದ್ದಾರೆ. ಹತಾಶೆಯಿಂದ ಜನರು ಹಾಗೂ ಅಧಿಕಾರಿಗಳ ಮೇಲೆ ಅಹಂಕಾರ ಹಾಗೂ ತೋಳ್ಬಲ ಪ್ರದರ್ಶಿಸುತ್ತಿದ್ದಾರೆ. ಇದು ಅತ್ಯಂತ ದುರ್ದೈವದ ಹಾಗೂ ಖಂಡನೀಯ ವರ್ತನೆಯಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಹುದೊಡ್ಡ ಹಿನ್ನೆಲೆಯಿದೆ, ಆ ಸ್ಥಾನದಲ್ಲಿ ಕುಳಿತ ಅನೇಕ ಮಹನೀಯರು ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಮೇರುಮಟ್ಟಕ್ಕೆ ಕೊಂಡೊಯ್ದಿದ್ದಾರೆ, ವಿಶ್ವಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ ಎಂದು ಸಿಎಂ ಸ್ಥಾನದ ಘನತೆ ಬಗ್ಗೆ ಜ್ಞಾಪಿಸಿದ್ದಾರೆ.

ಕರ್ನಾಟಕ ಎಂದರೆ ಸಜ್ಜನಿಕೆಯ ರಾಜಕಾರಣ, ಸಂಸ್ಕೃತಿ-ಸಂಸ್ಕಾರದ ನೆಲೆಬೀಡು ಎಂಬ ಮಾತಿದೆ. ಆದರೆ ಸಿದ್ದರಾಮಯ್ಯನವರ ವರ್ತನೆಯಿಂದಾಗಿ ಇತಿಹಾಸದ ಪರಂಪರೆಗೆ ಕಪ್ಪು ಮಸಿ ಬಳಿಯುತ್ತಿದೆ. ಕರ್ನಾಟಕದ ಗೌರವ ಹಾಗೂ ಮುಖ್ಯಮಂತ್ರಿ ಸ್ಥಾನದ ಘನತೆ ಸಂಪೂರ್ಣ ಕುಗ್ಗುತ್ತಿದೆ. ರಾಷ್ಟ್ರ ಭಕ್ತರೆಂದರೆ ಕೆಂಡಕಾರುವ, ದೇಶ ಸುರಕ್ಷತೆಯ ಬಗ್ಗೆ ಉಡಾಫೆಯ ಮಾತನಾಡುವ ಸಿದ್ದರಾಮಯ್ಯನವರಿಂದಾಗಿ ಇಡೀ ರಾಷ್ಟ್ರ ‘ಭಾರತದ ಸುಭದ್ರತೆಗೆ’ ಒಕ್ಕೊರಲ ದನಿಯಾಗಿ ನಿಂತಿದ್ದರೆ, ಅದಕ್ಕೆ ವ್ಯತಿರಿಕ್ತವಾಗಿ ಕರ್ನಾಟಕದ ಮುಖ್ಯಮಂತ್ರಿ ವರ್ತಿಸುತ್ತಿದ್ದಾರೆ. ಕರ್ನಾಟಕದ ಜನತೆಯ ದೇಶಾಭಿಮಾನವನ್ನು ಮೆಟ್ಟಿ ನಿಲ್ಲುವ ವರ್ತನೆ ಸಿದ್ದರಾಮಯ್ಯನವರು ತೋರುತ್ತಿದ್ದಾರೆ. ಅದರ ಮುಂದುವರೆದ ಭಾಗ ಬೆಳಗಾವಿಯ ಘಟನೆ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗುವ ಮೂಲಕ ರಾಷ್ಟ್ರ ಭಕ್ತಿ ಮೆರೆದ ದಿಟ್ಟ ಮಹಿಳೆಯರೆಲ್ಲರಿಗೂ ಅಭಿನಂದನೆ ಸಲ್ಲಿಸುವೆ. ಕರ್ತವ್ಯ ನಿರತ ಪೊಲೀಸ್ ವರಿಷ್ಠಾಧಿಕಾರಿಯ ಮೇಲೆ ದರ್ಪ ತೋರಿ ಅವರ ಮೇಲೆ ಹಲ್ಲೆಗೆ ಮುಂದಾದ ಸಿದ್ದರಾಮಯ್ಯನವರ ವರ್ತನೆ ಇಡೀ ಪೊಲೀಸ್‌ ಇಲಾಖೆಗೆ ಮಾಡಿದ ಅಪಮಾನವಾಗಿದೆ. ಈ ಹಿನ್ನೆಲೆಯಲ್ಲಿ ಅವಮಾನಕ್ಕೊಳಗಾದ ಪೊಲೀಸ್‌ ಅಧಿಕಾರಿ ಹಾಗೂ ಇಡೀ ಪೊಲೀಸ್‌ ಇಲಾಖೆಯನ್ನು ಸಿದ್ದರಾಮಯ್ಯನವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ ಬಿ.ವೈ ವಿಜಯೇಂದ್ರ. ಆದರೆ ಸಿಎಂ ಸಿದ್ದರಾಮಯ್ಯ ಇದಕ್ಕೆ ಏನು ಉತ್ತರ ಕೊಡ್ತಾರೆ ಕಾದು ನೋಡ್ಬೇಕು.

=============

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಾಂಗಲ್ಯ ಸಂಕಷ್ಟ.. ಬಗೆಹರಿಸಿದ ಸೋಮಣ್ಣ

Next Post

ಪಾಕ್​ನಲ್ಲಿ ಯುದ್ಧಕ್ಕೆ ಹೆದರಿ ರಾಜೀನಾಮೆ ಕೊಡ್ತಿದ್ದಾರಾ ಸೈನಿಕರು..?

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಪಾಕ್​ನಲ್ಲಿ ಯುದ್ಧಕ್ಕೆ ಹೆದರಿ ರಾಜೀನಾಮೆ ಕೊಡ್ತಿದ್ದಾರಾ ಸೈನಿಕರು..?

ಪಾಕ್​ನಲ್ಲಿ ಯುದ್ಧಕ್ಕೆ ಹೆದರಿ ರಾಜೀನಾಮೆ ಕೊಡ್ತಿದ್ದಾರಾ ಸೈನಿಕರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada