• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಾತಿ ಗಣತಿ; ದೇವೇಗೌಡರ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಪ್ರತಿಧ್ವನಿ by ಪ್ರತಿಧ್ವನಿ
May 4, 2025
in ಕರ್ನಾಟಕ, ರಾಜಕೀಯ
0
ಜಾತಿ ಗಣತಿ; ದೇವೇಗೌಡರ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು
Share on WhatsAppShare on FacebookShare on Telegram

ನಿಮ್ಮ ಗಣತಿಯನ್ನು ವಿರೋಧಿಸಿಲ್ಲ; ಕ್ರಮಬದ್ಧವಾಗಿಲ್ಲ ಎಂದಷ್ಟೇ ಜೆಡಿಎಸ್ ವಿರೋಧಿಸಿದೆ

ADVERTISEMENT

ಸಿದ್ದರಾಮಯ್ಯನವರು ದೇಹವೊಂದು, ನಾಲಿಗೆ ಎರಡು!!

ಇಂದಿರಾ ಗಾಂಧಿ ಬಗ್ಗೆ ಸಿದ್ದರಾಮಯ್ಯ ಉದುರಿಸಿದ್ದ ಆಣಿಮುತ್ತುಗಳನ್ನು ಜೀರ್ಣಿಸಿಕೊಳ್ಳಲು ಕಾಂಗ್ರೆಸ್ಸಿಗೆ ಸಾಧ್ಯವಿದೆಯಾ?

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಜಾತಿ ಗಣತಿ ವಿಷಯದಲ್ಲಿ ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಅವರಿಗೆ ಜೆಡಿಎಸ್ ತಿರುಗೇಟು ನೀಡಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷವು; ನರೇಂದ್ರ ಮೋದಿ ಅವರ ನಿರ್ಣಯದ ಜಾತಿ ಗಣತಿಯನ್ನು ಜೆಡಿಎಸ್ ಸ್ವಾಗತಿಸಿದೆ. ಆದರೆ, ನಿಮ್ಮ ಜಾತಿಗಣತಿಯನ್ನು ಜೆಡಿಎಸ್ ವಿರೋಧಿಸಿಲ್ಲ, ನೆನಪಿರಲಿ. ನಿಮ್ಮ ಗಣತಿ ಕ್ರಮಬದ್ಧವಾಗಿಲ್ಲ ಎಂಬ ಕಾರಣಕ್ಕೆ ವಿರೋಧಿಸಿದೆ ಎಂದು ಸಿಎಂಗೆ ಟಾಂಗ್ ನೀಡಿದೆ.

ದೇವೇಗೌಡರ ಗರಡಿಯಲ್ಲೇ ಬೆಳೆದು ರಾಜಕೀಯ ಬದುಕು ಕಟ್ಟಿಕೊಂಡ ಸಿದ್ದರಾಮಯ್ಯನವರು ಇಬ್ಬಗೆಯ ನೀತಿ ಬಗ್ಗೆ ಆಣಿಮುತ್ತು ಉದುರಿಸಿದ್ದಾರೆ! ಆಣಿಮುತ್ತು ಉದುರಿಸುವ ಭರದಲ್ಲಿ ತಾವೇನು? ತಮ್ಮ ನಿಜಬಣ್ಣವೇನು ಎಂಬುದನ್ನು ಮತ್ತೊಮ್ಮೆ ಲೋಕಾರ್ಪಿತ ಮಾಡಿದ್ದಾರೆ! ಸಿದ್ದರಾಮಯ್ಯನವರು ಎಂದರೆ ಹಾಗೆಯೇ.. ದೇಹವೊಂದು, ನಾಲಿಗೆ ಎರಡು!! ಎಂದು ಜೆಡಿಎಸ್ ಕುಟುಕಿದೆ.

#watch :CM Siddaramaiah,ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ ಎಂದು ರೊಚ್ಚಿಗೆದ್ದ ಜನರು #pratidhvani #politics

ದೇವೇಗೌಡರು ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಬಗ್ಗೆ ಸಿದ್ದರಾಮಯ್ಯನವರು ಸಹಜ, ಸಕಾರಾತ್ಮಕ ಟೀಕೆ ಮಾಡಲಿ. ಬೇಡ ಎಂದವರು ಯಾರು? ಆದರೆ, ಅದೇ ನಿತ್ಯಕೃಷಿ ಎಂಬಂತೆ ನಿರಂತರವಾಗಿ ರಾಜಕೀಯ ಜನ್ಮಕೊಟ್ಟ ಮೇರು ನಾಯಕನ ಬಗ್ಗೆಯೇ ವಿಷಕಾರುವುದು ಎಷ್ಟು ಸರಿ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಸಿದ್ದರಾಮಯ್ಯನವರು ಜನತಾ ಪರಿವಾರದಲ್ಲಿದ್ದಾಗ ಇಂದಿರಾ ಗಾಂಧಿ ಅವರ ಬಗ್ಗೆ ಉದುರಿಸಿದ್ದ ಭಾರೀ ಭಾರೀ ಆಣಿಮುತ್ತುಗಳನ್ನು ಜೀರ್ಣಿಸಿಕೊಳ್ಳಲು ಕಾಂಗ್ರೆಸ್ ನಾಯಕರಿಂದ ಸಾಧ್ಯವಿದೆಯಾ? ಇಂದಿರಾ ಗಾಂಧಿ ಅವರು ನಮ್ಮ ನಡುವೆ ಇಲ್ಲ. ಹೀಗಾಗಿ ಅವರ ಬಗ್ಗೆ ಸಿದ್ದರಾಮಯ್ಯನವರು ಉದುರಿಸಿದ್ದ ಆಣಿಮುತ್ತುಗಳನ್ನು ಉಲ್ಲೇಖಿಸುವುದು ಅಪ್ರಸ್ತುತ ಎಂದು ಜೆಡಿಎಸ್ ಹೇಳಿದೆ.

ಕೊನೆಪಕ್ಷ, ಹುದ್ದೆಯ ಶಿಷ್ಟಾಚಾರಕ್ಕಾದರೂ ಕಟ್ಟುಬಿದ್ದು ಸಿಎಂ ಅವರು ತಮ್ಮ ನಾಲಿಗೆಗೆ ಆಚಾರ ಕಲಿಸಿಕೊಳ್ಳದಿದ್ದರೆ ಅವರು ಹಿಂದೆ ಉದುರಿಸಿದ್ದ ಎಲ್ಲಾ ಆಣಿಮುತ್ತುಗಳನ್ನು ಹೆಕ್ಕಿಹೆಕ್ಕಿ ಇಡಲಾಗುವುದು ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.

ಜೆಡಿಎಸ್ ಪಕ್ಷವು ಮುಂದಿನ ಜನಗಣತಿಯಲ್ಲಿಯೇ ಜಾತಿ ಗಣತಿ ನಡೆಸುವ ಮೋದಿ ಅವರ ನಿರ್ಣಯವನ್ನು ಜೆಡಿಎಸ್ ಸ್ವಾಗತಿಸಿದೆ. ಹಾಗೆಂದು, ಸಿದ್ದರಾಮಯ್ಯನವರೇ.., ನಿಮ್ಮ ಜಾತಿಗಣತಿಯನ್ನು ಜೆಡಿಎಸ್ ವಿರೋಧಿಸಿಲ್ಲ, ನೆನಪಿರಲಿ. ಆದರೆ; ನಿಮ್ಮ ಗಣತಿ ಕ್ರಮಬದ್ಧವಾಗಿಲ್ಲ ಎಂಬ ಕಾರಣಕ್ಕೆ ವಿರೋಧಿಸಿದೆ. ಅದು ಸುಳ್ಳು ಅಂಕಿ-ಅಂಶಗಳ ಕಾಗಕ್ಕಗುಬ್ಬಕ್ಕನ ಕಥೆ ಎಂಬುದನ್ನು ಜನರಿಗೆ ತಿಳಿಸಿದೆ ಎಂದು ಜೆಡಿಎಸ್ ಸ್ಪಷ್ಟಪಡಿಸಿದೆ.

ನಿಮ್ಮ ಗಣತಿಗಾರುಡಿ ಎಲ್ಲರಂತೆ ನಮಗೂ ಅರ್ಥವಾಗಿದೆ. ನಿಮ್ಮದೇ ಪಕ್ಷದ ಶಾಸಕರು, ಸಚಿವರು ನಿಮ್ಮ ಗಣತಿಯ ಬಾಲ-ಬುಡ ಹಿಡಿದು ಬೀದಿಬೀದಿಯಲ್ಲಿ ಅಲ್ಲಾಡಿಸುತ್ತಿದ್ದಾರೆ. ನಿಮ್ಮ ಸರಕಾರದ ಬುಡವನ್ನೂ ಸಹ.. ಏನಂತೀರಿ..? ಎಂದು ಪ್ರಶ್ನೆ ಮಾಡಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ

Next Post

ಪಹಲ್ಗಾಮ್​ ಉಗ್ರರ ಕ್ರೌರ್ಯ ಖಂಡಿಸಿ ಅನಿವಾಸಿ ಭಾರತೀಯರಿಂದ ದೂರದ ಹಾಲೆಂಡ್ ನಲ್ಲಿ ಪ್ರತಿಭಟನೆ .

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಪಹಲ್ಗಾಮ್​ ಉಗ್ರರ ಕ್ರೌರ್ಯ ಖಂಡಿಸಿ ಅನಿವಾಸಿ ಭಾರತೀಯರಿಂದ ದೂರದ ಹಾಲೆಂಡ್ ನಲ್ಲಿ ಪ್ರತಿಭಟನೆ .

ಪಹಲ್ಗಾಮ್​ ಉಗ್ರರ ಕ್ರೌರ್ಯ ಖಂಡಿಸಿ ಅನಿವಾಸಿ ಭಾರತೀಯರಿಂದ ದೂರದ ಹಾಲೆಂಡ್ ನಲ್ಲಿ ಪ್ರತಿಭಟನೆ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada