• Home
  • About Us
  • ಕರ್ನಾಟಕ
Thursday, September 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Operation Sindhoora: ನರೇಂದ್ರ ಮೋದಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
May 8, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು, ಭಾರತದ್ದು ಪ್ರಬುದ್ಧ, ಸಂಯಮದ ಮಿಲಿಟರಿ ಪ್ರತಿಕ್ರಿಯೆ ಎಂದ ಜೆಡಿಎಸ್ ರಾಷ್ಟ್ರಾಧ್ಯಕ್ಷರು.

ADVERTISEMENT

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸಿರುವ ಭಾರತ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಮುಕ್ತ ಕಂಠದಿಂದ ಸ್ವಾಗತಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಪತ್ರ ಬರೆದಿರುವ ದೇವೇಗೌಡರು; ಮೇ 7ರಂದು ಪಹಲ್ಗಾಮ್ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಭಾರತದ ಪ್ರಬುದ್ಧ ಮತ್ತು ಸಂಯಮದ ಮಿಲಿಟರಿ ಪ್ರತಿಕ್ರಿಯೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

“ಸೌದಿ ಅರೇಬಿಯಾ ಭೇಟಿಯಲ್ಲಿದ್ದ ನೀವು ಭಯೋತ್ಪಾದಕ ದಾಳಿ ವಿಷಯ ಗೊತ್ತಾಗುತ್ತಿದ್ದಂತೆ ಭೇಟಿಯನ್ನು ಮೊಟಕುಗೊಳಿಸಿ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದಿರಿ. ತಕ್ಷಣದಿಂದಲೇ ದೇಶದಲ್ಲಿ ಸೃಷ್ಟಿಯಾಗಿದ್ದ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುವುದರ ಜೊತೆಗೆ, ವ್ಯೂಹಾತ್ಮಕ ಸಭೆಗಳನ್ನು ನಡೆಸಿ ಜಾಗತಿಕ ಬೆಂಬಲವನ್ನು ಸಜ್ಜುಗೊಳಿಸಲು ಮಹತ್ವದ ಪಾತ್ರ ವಹಿಸಿದಿರಿ. ಸಶಸ್ತ್ರ ಪಡೆಗಳಿಗೆ ಸ್ಫೂರ್ತಿ ನೀಡಲು ತಾವು ಮೊದಲ ದಿನದಿಂದಲೇ ನೀವು ತೆಗೆದುಕೊಂಡ ದೃಢ ನಿರ್ಧಾರದ ಕ್ರಮಗಳನ್ನು ನಾನು ಗಮನಿಸುತ್ತಿದ್ದೇನೆ. ನಂತರ ನೀವು ಎಲ್ಲಾ ತುರ್ತು ಪರಿಸ್ಥಿತಿಗಳ ಮೇಲ್ವಿಚಾರಣೆ ನಡೆಸಲು ಯುರೋಪ್ ಪ್ರವಾಸವನ್ನು ರದ್ದುಗೊಳಿಸಿದ್ದೀರಿ” ಎಂದು ಮಾಜಿ ಪ್ರಧಾನಿಗಳು ಮೋದಿ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ವಾರಗಳಿಂದ ನೀವು ಬಹಳ ಒತ್ತಡ ಮತ್ತು ಸಂಯಮದಿಂದ ಕರ್ತವ್ಯ ನಿರ್ವಹಿಸುತ್ತಿದ್ದೀರಿ. ದೇವರು ನಿಮಗೆ ದುಷ್ಟರನ್ನು ಹತ್ತಿಕ್ಕುವ ಸರ್ವಶಕ್ತಿಯನ್ನು ನೀಡಲಿ. ದೇಶ ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನೂ ನಿವಾರಿಸುವ ಶಕ್ತಿಯೂ ನಿಮಗೆ ಸಿಗಲಿ. ಕಠಿಣ ಸಂದರ್ಭದಲ್ಲಿ ದೇಶದ ನಾಯಕತ್ವ ವಹಿಸಿರುವ ನಿಮ್ಮ ಹೆಸರು ಇತಿಹಾಸದಲ್ಲಿ ಪ್ರಕಾಶಮಾನವಾಗಿ ದಾಖಲಾಗಲಿದೆ ಎಂದು ದೇವೇಗೌಡರು ಪ್ರಧಾನಿಗಳಿಗೆ ಪತ್ರದಲ್ಲಿ ಹೇಳಿದ್ದಾರೆ.

ಆಧ್ಯಾತ್ಮಿಕ ಪ್ರಜ್ಞೆ, ಆಳವಾದ ಚಿಂತನೆ ಮತ್ತು ನಿರಂತರ ಪ್ರಾರ್ಥನೆ ಇಲ್ಲದೆ ಸಮತೋಲನ ಮತ್ತು ಸಮಚಿತ್ತತೆಯನ್ನು ಕಂಡುಕೊಳ್ಳುವುದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಕಳೆದ ಕೆಲವು ದಿನಗಳಲ್ಲಿ ನೀವು ಎಲ್ಲವನ್ನೂ ಉತ್ತಮ ರೀತಿಯಲ್ಲಿ ಸಾಧಿಸಿದ್ದೀರಿ. ನಿಮ್ಮ ಇಚ್ಛಾಶಕ್ತಿಯನ್ನು ಸಶಕ್ತವಾಗಿ ಪ್ರದರ್ಶಿಸಿದ್ದೀರಿ. ಹಿಂದೆಯೂ ಹಲವಾರು ಸಂದರ್ಭಗಳಲ್ಲಿ ನಿಮ್ಮ ಈ ರೀತಿಯ ನಾಯಕತ್ವ ಗುಣ ಸ್ಪಷ್ಟವಾಗಿ ಗೋಚರಿಸಿದೆ ಎಂದು ಮಾಜಿ ಪ್ರಧಾನಿಗಳು ಪತ್ರದಲ್ಲಿ ತಿಳಿಸಿದ್ದಾರೆ.

ಭಯೋತ್ಪಾದನೆಯಂತಹ ಅಧರ್ಮದ ವಿರುದ್ಧ ನಾವು ಈ ಧರ್ಮದ ಯುದ್ಧವನ್ನು ನಡೆಸುತ್ತಿರುವಾಗ ದೇವರು ನಿಮ್ಮ ಜೊತೆಯಲ್ಲಿಯೇ ಇರಲಿ. ನಮ್ಮ ಮಹಾನ್ ರಾಷ್ಟ್ರವನ್ನು ರಕ್ಷಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಭಾರತವು ಶಾಂತಿಪ್ರಿಯ ರಾಷ್ಟ್ರವಾಗಿದೆ ಮತ್ತು ಯಾವಾಗಲೂ ಜಗತ್ತಿನಲ್ಲಿ ಸಕಾರಾತ್ಮಕತೆಯ ಬೆಳಕನ್ನು ಹರಡಿದೆ. ಆದರೆ ಯಾರಾದರೂ ರಾಷ್ಟದ ಶಾಂತಿಪ್ರಿಯತೆಯನ್ನೇ ನಮ್ಮ ದೌರ್ಬಲ್ಯವೆಂದು ನೋಡಿದರೆ, ನಾವು ಎಂತಹ ಸಮರ್ಥರು ಎಂಬುದನ್ನು ಅವರಿಗೆ ತೋರಿಸಿ ಕೊಟ್ಟಿದ್ದೀರಿ ಎಂದು ಮಾಜಿ ಪ್ರಧಾನಿಗಳು ಮೋದಿ ಅವರನ್ನು ಕೊಂಡಾಡಿದ್ದಾರೆ.

ನಾವು ಎದುರಿಸುತ್ತಿರುವ ಸವಾಲುಗಳು ಖಂಡಿತವಾಗಿಯೂ ಇಲ್ಲಿಗೆ ಕೊನೆಗೊಳ್ಳದಿರಬಹುದು, ಆದರೆ ನಾವು ಒಂದು ರಾಷ್ಟ್ರವಾಗಿ ಒಗ್ಗಟ್ಟಿನಿಂದ ಇರುವುದರಲ್ಲಿ ಅಪಾರ ಸಮಾಧಾನವಿದೆ. ನಾವು ಒಟ್ಟಿಗೆ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಹಾಗೂ ಒಂದು ರಾಷ್ಟ್ರವಾಗಿ ಮುನ್ನಡೆಯುತ್ತೇವೆ ಎಂದು ಮಾಜಿ ಪ್ರಧಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Tags: BJPCongress PartydevegowdaHD Devegowdajammu kashmirJDSMilitary ForceNarendra ModiOperation Sindhoorapahalgam attackPakistanPM ModiSindhooraನರೇಂದ್ರ ಮೋದಿಬಿಜೆಪಿ
Previous Post

Operation Sindoora: ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಸಂದೇಶ ನೀಡಿದ ಜಮೀರ್..!!

Next Post

ಭಾರತದ ‘ಆಪರೇಷನ್​ ಸಿಂಧೂರ್’ ದಾಳಿಗೆ ಪಾಕ್ ಹೇಗೆ ತತ್ತರಿಸಿದೆ..?​

Related Posts

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
0

ವೃತ್ತಿ ಜೀವನದಲ್ಲಿ ವಿರಾಮದ ನಂತರ, ವಿಶೇಷವಾಗಿ ತಾಂತ್ರಿಕ ಕರ್ತವ್ಯಗಳಲ್ಲಿ ಮಹಿಳೆಯರು ಮತ್ತೆ ಕಾರ್ಯಪಡೆಗೆ ಸೇರಲು ಸಹಾಯ ಮಾಡುವಲ್ಲಿ ಮತ್ತು ಮಹಿಳೆಯರು ಮರುಕೌಶಲ್ಯ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲು ಅಭ್ಯರ್ಥಿಗಳನ್ನು ಹುರಿದುಂಬಿಸುತ್ತಿರುವ...

Read moreDetails
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

September 4, 2025

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

September 4, 2025

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

September 4, 2025
Next Post
ಭಾರತದ ‘ಆಪರೇಷನ್​ ಸಿಂಧೂರ್’ ದಾಳಿಗೆ ಪಾಕ್ ಹೇಗೆ ತತ್ತರಿಸಿದೆ..?​

ಭಾರತದ ‘ಆಪರೇಷನ್​ ಸಿಂಧೂರ್’ ದಾಳಿಗೆ ಪಾಕ್ ಹೇಗೆ ತತ್ತರಿಸಿದೆ..?​

Recent News

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ
Top Story

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

by ನಾ ದಿವಾಕರ
September 4, 2025
Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

by ಪ್ರತಿಧ್ವನಿ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada