• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಸಿಎಂ ಡಿಕೆ ಶಿವಕುಮಾರ್ ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ನೀಡಿದ್ದು ಯಾಕೆ?

ಪ್ರತಿಧ್ವನಿ by ಪ್ರತಿಧ್ವನಿ
May 31, 2025
in Top Story, ಕರ್ನಾಟಕ, ರಾಜಕೀಯ
0
ಡಿಸಿಎಂ ಡಿಕೆ ಶಿವಕುಮಾರ್ ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ನೀಡಿದ್ದು ಯಾಕೆ?
Share on WhatsAppShare on FacebookShare on Telegram

ಮಳೆ ಅನಾಹುತ ವೀಕ್ಷಿಸಲಿಕ್ಕಾ? ಅಥವಾ ರಾಜಕಾಲುವೆ ಒತ್ತುವರಿದಾರರನ್ನು ರಕ್ಷಣೆ ಮಾಡಲಿಕ್ಕಾ?*

ADVERTISEMENT

ಮಾನ್ಯತಾ ಟೆಕ್ ಪಾರ್ಕ್ ಬಳಿ ರಾಜಕಾಲುವೆ ಮೇಲೆ ಅಕ್ರಮವಾಗಿ ಎದ್ದಿರುವ ಬೃಹತ್ ಕಟ್ಟಡ ಯಾರದ್ದು?

‘ಭಾರೀ ಆಸಾಮಿ’ಯೊಬ್ಬರ ಭಾರೀ ಕಟ್ಟಡ ಕಣ್ಣಿಗೆ ಕಾಣಲಿಲ್ಲವೆ?

ರಾಜಕಾಲುವೆ ಮೇಲಿರುವ ಅಕ್ರಮ ಕಟ್ಟಡ ತೆರವು ಮಾಡುವ ದಮ್ಮು ತಾಕತ್ತು ಇದೆಯಾ?

ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿ ಭೇಟಿ ನೀಡಿದ್ದು ನೆರೆ ಮತ್ತು ಮಳೆ ಅನಾಹುತ ವೀಕ್ಷಿಸಲಿಕ್ಕಾ ಅಥವಾ ರಾಜಕಾಲುವೆ ಒತ್ತುವರಿದಾರನ್ನು ರಕ್ಷಣೆ ಮಾಡಲಿಕ್ಕಾ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

Siddaramaiah : ಎಸ್.ಆರ್.ನಾಯಕ್ ನೆನೆದು ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ #watch #pratidhvani

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ ಪ್ರವಾಹ ವೀಕ್ಷಣೆಗೋ ಅಥವಾ ರಾಜಕಾಲುವೆ ರಕ್ಕಸರ ರಕ್ಷಣೆಗೋ..? ಈ ಬಗ್ಗೆ ಬೆಂಗಳೂರು ಮಹಾಜನತೆಗೆ ಬೆಂಗಳೂರು ಉಸ್ತುವಾರಿ ಸಚಿವರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಅವರು ಪಾದಸ್ಪರ್ಶ ಮಾಡಿದ್ದ ರಾಜಕಾಲುವೆ ಪುನೀತವಾಗಿರಬೇಕು!! ಪಾಪ.. ಅದೇ ರಾಜಕಾಲುವೆ ಮೇಲೆ ಬೃಹದಾಕಾರವಾಗಿ ಎದ್ದು ನಿಂತಿರುವ ‘ಭಾರೀ ಆಸಾಮಿ’ಯೊಬ್ಬರ ಕಟ್ಟಡ ಅವರ ಕಣ್ಣಿಗೆ ಕಾಣಲಿಲ್ಲವೆ? ರಾಜಾರೋಷವಾಗಿ ರಾಜಕಾಲುವೆಯನ್ನು ಮುಕ್ಕಿ ತಿಂದಿರುವ ಆಸಾಮಿಯ ಬಗ್ಗೆ ಅವರು ಚಕಾರವನ್ನೇ ಎತ್ತಲಿಲ್ಲ!! ಕೊನೆಪಕ್ಷ ಅವರ ಹೆಸರನ್ನೂ ಹೇಳಲಿಲ್ಲ!! ಎಂದು ಕುಮಾರಸ್ವಾಮಿ ಅವರು ಡಿಕೆಶಿ ಕಾಲೆಳೆದಿದ್ದಾರೆ.

ರಾಜಕಾಲುವೆಗಳ ಮೇಲೆ ಐಷಾರಾಮಿ ಸೌಧಗಳನ್ನು ಕಟ್ಟಿಕೊಂಡು ಕೋಟಿ ಕೋಟಿ ದುಡಿಯುತ್ತಿರುವ ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ
ಇದೆಯಾ ಡಿ.ಕೆ. ಶಿವಕುಮಾರ್ ರವರೇ? ಹೋಗಲಿ, ಅಂಥವರ ವಿರುದ್ಧ ಕ್ರಮ ಜರುಗಿಸಲು ನಿಮ್ಮ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ, ಅಧಿಕಾರ ನೀಡಿದ್ದೀರಾ? ಒಂದು ವೇಳೆ ನೀಡಿದ್ದರೆ ಆ ಅಕ್ರಮ ಕಟ್ಟಡಗಳು ಇನ್ನೂ ಯಾಕೆ ಹಾಗೆಯೇ ಇವೆ? ಎಂಬುದನ್ನು ನೀವು ಹೇಳಬೇಕಲ್ಲವೇ? ಎಂದು ಕೇಂದ್ರ ಸಚಿವರು ಕೇಳಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ನೀವು ಕುರ್ಚಿ ಮೇಲೆ ಕೂತು ಎರಡು ವರ್ಷವೇ ಆಯಿತು. ಅದೆಷ್ಟೋ ಬಾರಿ ಸಾಯಿ ಬಡಾವಣೆ ಮುಳುಗಿದ್ದೂ ಆಯಿತು, ತೇಲಿದ್ದೂ ಆಯಿತು! ನಿಮ್ಮಿಂದ ಆಗಲಿ ಅಥವಾ ಕಾಂಗ್ರೆಸ್ ಸರಕಾರದಿಂದ ಆಗಲಿ ಯಾವುದೇ ಪರಿಹಾರ ಸಿಗಲಿಲ್ಲ! ಬಡಾವಣೆಯ ಜನರು ನರಳುತ್ತಿರುವುದು ಮಾತ್ರ ತಪ್ಪಿಲ್ಲ.
ಈ ಅಸಡ್ಡೆ ಯಾಕೆ? ಇವರೆಲ್ಲ ತೆರಿಗೆ ಕಟ್ಟುತ್ತಿಲ್ಲವೇ? ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದ.ಕನ್ನಡದಲ್ಲಿ ಶಾಂತಿಭಂಗ ಆಗುತ್ತೆ – ಜಿಲ್ಲೆ ಹೊಡೆದು ರಾಜಕಾರಣ ಮಾಡ್ತೀರಾ : ಶೋಭಾ ಕರಂದ್ಲಾಜೆ 

Next Post

ಕೆಲ ಹೆಣ್ಣಿನ ಮನೆಯವರಿಗೆ ಹಣಕ್ಕೆ ಆಸೆ ಪಡುವ ಕಾಲ ಬಂತಲ್ಲ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post
ಕೆಲ ಹೆಣ್ಣಿನ ಮನೆಯವರಿಗೆ ಹಣಕ್ಕೆ ಆಸೆ ಪಡುವ ಕಾಲ ಬಂತಲ್ಲ

ಕೆಲ ಹೆಣ್ಣಿನ ಮನೆಯವರಿಗೆ ಹಣಕ್ಕೆ ಆಸೆ ಪಡುವ ಕಾಲ ಬಂತಲ್ಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada