• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 1, 2025
in Top Story, ಕರ್ನಾಟಕ
0
ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ADVERTISEMENT

ಬೆಂಗಳೂರಿನ ಅಭಿವೃದ್ಧಿಗೆ 1 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ

2028ರ ಚುನಾವಣೆಯಲ್ಲಿ ದಾಸರಹಳ್ಳಿಯಲ್ಲಿ ಮಂಜುನಾಥ್ ಅವರೇ ಗೆಲ್ಲುವ ವಿಶ್ವಾಸ

ಬೆಂಗಳೂರು, ಜೂ.01:

“ಬೆಂಗಳೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರಗಳ ಕೊಡುಗೆಯೇ ಹೆಚ್ಚು. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ 1 ಲಕ್ಷ ಕೋಟಿ ಮೊತ್ತದ ದೊಡ್ಡ ಯೋಜನೆಗಳನ್ನು ಹಮ್ಮಿಕೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

“ಕಳೆದ 20 ವರ್ಷಗಳಲ್ಲಿ ಬೆಂಗಳೂರು ಜನತೆ 70 ಲಕ್ಷದಿಂದ 1.50 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿಗೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ 1 ಲಕ್ಷ ಕೋಟಿ ಮೊತ್ತದ ಯೋಜನೆ ರೂಪಿಸಿದ್ದೇವೆ. ನಿಮ್ಮ ಕ್ಷೇತ್ರದಲ್ಲಿ ಹಾದು ಹೋಗುವ ನೆಲಮಂಗಲ ಮೇಲ್ಸೇತುವೆ ಬಿಜೆಪಿಯವರು ಮಾಡಿದ್ದಲ್ಲ, ಕೃಷ್ಣ ಭೈರೇಗೌಡ ಅವರ ಕ್ಷೇತ್ರದಲ್ಲಿ ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ಸೇತುವೆ, ಹೊಸೂರು ರಸ್ತೆಯಲ್ಲಿರುವ ಮೇಲ್ಸೇತುವೆ, ಕೋಲಾರಕ್ಕೆ ಡಬಲ್ ರೋಡ್ ಮಾಡಿದ್ದು ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ. ಬೆಂಗಳೂರಿನಲ್ಲಿ ಇಂತಹ ಯಾವುದೇ ಕಾರ್ಯಕ್ರಮವಿದ್ದರೂ ಅದು ಕಾಂಗ್ರೆಸ್ ಸರ್ಕಾರದ ಕೊಡುಗೆಯೇ ವಿನಃ ಬಿಜೆಪಿ ಸರ್ಕಾರವಲ್ಲ” ಎಂದು ತಿಳಿಸಿದರು.

DCM DK Shivakumar : ನನ್ನ ಅನುಮತಿ ಇಲ್ಲದೆ ಯಾರ ವರ್ಗಾವಣೆಯನ್ನೂ ಮಾಡಂಗಿಲ್ಲ.. #pratidhvani

“ಬೆಂಗಳೂರು ಬೆಳೆಯುತ್ತಿದೆ. ಹೀಗಾಗಿ ನಾವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿದ್ದೇವೆ. ಇದರಲ್ಲಿ ಎಷ್ಟು ಪಾಲಿಕೆ ಮಾಡಬೇಕು ಎಂದು ಚರ್ಚೆ ಮಾಡಲು ಸಚಿವರು ಹಾಗೂ ಶಾಸಕರ ಸಭೆ ಮಾಡಿದ್ದೇನೆ. ಇನ್ನೊಂದು ವಾರದಲ್ಲಿ ಮತ್ತೊಂದು ಸಭೆ ಮಾಡಿ ಅಂತಿಮ ತೀರ್ಮಾನ ಮಾಡಲಾಗುವುದು. ಪಾಲಿಕೆ ರಚಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯನ್ನು ಮಾಡುತ್ತೇವೆ. ಹೊಸ ಪಾಲಿಕೆ ಸದಸ್ಯರು ಆಯ್ಕೆಯಾಗಬೇಕು. ಮುಂದೆ ದಾಸರಹಳ್ಳಿಯಲ್ಲಿ ಶಾಸಕ ಹಾಗೂ ಕಾರ್ಪೊರೇಟರ್ ಸ್ಥಾನಗಳು ಕಾಂಗ್ರೆಸ್ ಪಕ್ಷಕ್ಕೆ ಎಂಬ ನಂಬಿಕೆ ಇದೆ” ಎಂದು ತಿಳಿಸಿದರು.

“ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸಲು ಇತ್ತೀಚೆಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿದೆವು. ಅದರಲ್ಲಿ 10 ಲಕ್ಷ ಕೋಟಿ ಬಂಡವಾಳ ಹೂಡಿಕೆ ಒಪ್ಪಂದವಾಗಿವೆ” ಎಂದರು.

ನಮ್ಮದು ನುಡಿದಂತೆ ನಡೆದ ಸರ್ಕಾರ

“ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡಿದಾಗ ಒಂದು ಮಾತು ಹೇಳಿದ್ದೆ. ಮಹಿಳೆಯರು ಹಾಗೂ ಯುವಕರು ಮನಸ್ಸು ಮಾಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಹೇಳಿದ್ದೆ. ಮಹಿಳೆಯರಿಗೆ ಉಪಕಾರ ಸ್ಮರಣೆ ಇರುತ್ತದೆ. ಹೀಗಾಗಿ ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ” ಎಂದು ತಿಳಿಸಿದರು.

“ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳನ್ನು ಮಹಿಳೆಯರಿಗಾಗಿ ಮಾಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಐದೂ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅನುಮೋದನೆ ನೀಡಲಾಯಿತು. ಆಮೂಲಕ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ” ಎಂದು ಹೇಳಿದರು.

“ನಮ್ಮ ಸರ್ಕಾರ 2 ವರ್ಷ ಪೂರೈಸಿದ್ದು, ಸಚಿವ ಕೃಷ್ಣ ಭೈರೇಗೌಡ ಅವರ ನೇತೃತ್ವದಲ್ಲಿ 1,11,111 ಕುಟುಂಬಗಳಿಗೆ ಉಚಿತವಾಗಿ ಪಟ್ಟಾ ಖಾತೆಯನ್ನು ನೀಡುವ ಮೂಲಕ 6ನೇ ಗ್ಯಾರಂಟಿ ಯೋಜನೆ ಭೂ ಗ್ಯಾರಂಟಿಯನ್ನು ನೀಡಿದ್ದೇವೆ” ಎಂದರು.

ನಮ್ಮ ಪಾಲಿಗೆ ಮಂಜುನಾಥ್ ಶಾಸಕ

“ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಮಾಜಿ ಶಾಸಕ ಮಂಜುನಾಥ್ ಗೆ ಎಲ್ಲಾ ರೀತಿ ಹೇಳಿದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ, ಅಧಿಕಾರದಲ್ಲಿದ್ದರೆ ಚೆಂದ ಎಂದು ಹೇಳಿದ್ದೆ. ಮಂಜಣ್ಣ ನನ್ನ ಮಾತು ಕೇಳಿದ್ದರೆ, ನನ್ನ ಹಾಗೂ ಕೃಷ್ಣ ಭೈರೇಗೌಡ ಅವರ ಮಧ್ಯೆ ವಿಧಾನಸೌಧದಲ್ಲಿ ಕೂರುತ್ತಿದ್ದರು. ಮಂಜಣ್ಣ ಇಲ್ಲಿ ಶಾಸಕರಾಗಿ ಗೆದ್ದಿದ್ದು, ತನ್ನ ಸಾಮರ್ಥ್ಯದ ಮೇಲೆ ಹೊರತು ಜೆಡಿಎಸ್ ಪಕ್ಷದಿಂದ ಅಲ್ಲ” ಎಂದರು.

“ಈಗ ಆಗಿಹೋಗಿರುವುದನ್ನು ಬಿಟ್ಟು, ಮುಂಬರುವ 2028ರ ಚುನಾವಣೆಯಲ್ಲಿ ನೀವು ಮಂಜಣ್ಣ ಅವರನ್ನು ವಿಧಾನ ಸೌಧದಲ್ಲಿ ಕೂರಿಸಬೇಕು. ನಮ್ಮ ಸರ್ಕಾರ ಈ ದೇಶಕ್ಕೆ ಮಾದರಿ. ಬಿಜೆಪಿ ಭಾವನೆ ಮೇಲೆ ರಾಜಕೀಯ ಮಾಡಿದರೆ, ನಾವು ಬದುಕಿನ ಮೇಲೆ ರಾಜಕೀಯ ಮಾಡುತ್ತೇವೆ. ನಮಗೆ ನಿಮ್ಮ ಬದುಕು ಮುಖ್ಯ. ನಿಮಗೆ ಪ್ರತಿ ತಿಂಗಳು ಕನಿಷ್ಠ 5 ಸಾವಿರ ಉಳಿತಾಯ ಆದರೆ ನಿಮಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ನಾವು ಗ್ಯಾರಂಟಿ ಯೋಜನೆ ಜಾರಿಗೆ ತಂದೆವು. ಬೆಲೆ ಏರಿಕೆ ಸಮಸ್ಯೆಯಿಂದ ಜನರನ್ನು ರಕ್ಷಣೆ ಮಾಡಲಾಗಿದೆ” ಎಂದು ವಿವರಿಸಿದರು.

#watch Suresh Gowda: ಸಿದ್ದರಾಮಯ್ಯಗೆ, ಡಿಕೆಶಿ ಸವಾಲ್‌ ಹಾಕಿದ ಸುರೇಶ್‌ ಗೌಡ..! #hemavati #tumkurrural

“ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಬಿಜೆಪಿ ಇಂತಹ ಒಂದೇ ಒಂದು ಯೋಜನೆಯನ್ನು ನೀಡಲಿಲ್ಲ. ನಿಮ್ಮ ಶಾಸಕರು ಕೇವಲ ಬರಿ ಮಾತಲ್ಲೇ ನಿಮಗೆ ಮರಳು ಮಾಡುತ್ತಿದ್ದಾರೆ. ಖಾಲಿ ಡಬ್ಬಾದಂತೆ ಕೇವಲ ಸದ್ದು ಮಾತ್ರ ಮಾಡುತ್ತಾರೆ. ಮಂಜಣ್ಣ ಇಲ್ಲಿ ಸೋತಿದ್ದರು. 8 ಸಾವಿರ ಕುಟುಂಬಗಳ ಆಸ್ತಿಯನ್ನು ಇ ಖಾತಾ ಮಾಡುಸಿದ್ದಾರೆ. ನಮ್ಮ ಪಾಲಿಗೆ ಇಲ್ಲಿ ಮಂಜುನಾಥ್ ಅವರೇ ಶಾಸಕರು. ಅವರು ಹೇಳಿದಂತೆ ನಾವು ಕೇಳುತ್ತೇವೆ. ನಿಮ್ಮ ಆಸ್ತಿ ದಾಖಲೆ ಸರಿಪಡಿಸಿ, ಅದನ್ನು ನಿಮ್ಮ ಮನೆಬಾಗಿಲಿಗೆ ಉಚಿತವಾಗಿ ತಲುಪಿಸುವ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ” ಎಂದರು.

ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ

“ಕಾಂಗ್ರೆಸ್ ಪಕ್ಷ ಸದಾ ಜನರ ಬದುಕಿನ ಬಗ್ಗೆ ಆಲೋಚನೆ ಮಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಅದರದೇ ಇತಿಹಾಸವಿದೆ. ಇತ್ತೀಚೆಗೆ ದೇಶದಲ್ಲಿ ಯುದ್ಧದ ವಾತಾವರಣ ಸೃಷ್ಟಿಯಾಗಿತ್ತು. ಈ ಸಂದರ್ಭದಲ್ಲಿ ಜನ ಇಂದಿರಾ ಗಾಂಧಿ ಅವರನ್ನು ಸ್ಮರಿಸುತ್ತಿದ್ದರು. ಇಂದಿರಾ ಗಾಂಧಿ ಇದ್ದಿದ್ದರೆ ದೇಶವನ್ನು ಹೇಗೆ ಮುನ್ನಡೆಸುತ್ತಿದ್ದರು ಎಂದು ಜನ ಆಲೋಚನೆ ಮಾಡಿದರು” ಎಂದರು.

“ದೇಶಕ್ಕಾಗಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣ ಬಿಟ್ಟರು. ಸೋನಿಯಾ ಗಾಂಧಿ ಅವರು ಈ ದೇಶಕ್ಕಾಗಿ ಪ್ರಧಾನಮಂತ್ರಿ ಸ್ಥಾನವನ್ನು ಎರಡು ಬಾರಿ ತ್ಯಾಗ ಮಾಡಿದರು. ಇದು ಕಾಂಗ್ರೆಸ್ ಪಕ್ಷದ ಶಕ್ತಿ. ಬಿಜೆಪಿಯಲ್ಲಿ ಇಂತಹ ತ್ಯಾಗ ಮಾಡಿರುವವರು ಒಬ್ಬರಾದರೂ ಇದ್ದಾರಾ?” ಎಂದು ಪ್ರಶ್ನಿಸಿದರು.

“ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿರುವುದು ಬಹಳ ಸಂತೋಷ. ಆರಂಭದಲ್ಲಿ ನಾನು ಇದು ಮಹಿಳಾ ಕಾಂಗ್ರೆಸ್ ಸಭೆಯೇ ಎಂದು ಅನುಮಾನ ಮೂಡಿತು. ಇಲ್ಲಿ ಗಂಡಸರಿಗೆ ಜಾಗ ಕೊಡದೇ ಅವರು ರಸ್ತೆಯಲ್ಲಿ ನಿಂತಿದ್ದಾರೆ. ಮುಂದೆ ವಿಧಾನ ಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕೊಟ್ಟ ಬಳಿಕ ನಮ್ಮ ಪರಿಸ್ಥಿತಿ ಏನಾಗುತ್ತದೆಯೋ ಗೊತ್ತಿಲ್ಲ” ಎಂದು ಚಟಾಕಿ ಹಾರಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಟ್ರೇಲರ್ ಡಿಕೋಡ್’ ಸ್ಪರ್ಧೆ ಮೂಲಕ ಕೂತೂಹಲ ಹುಟ್ಟಿಸಿದ್ದ ‘ಮಾತೊಂದ ಹೇಳುವೆ’ ಚಿತ್ರದ ಟ್ರೇಲರ್ ಬಿಡುಗಡೆ .

Next Post

ವಿಭಿನ್ನ ಕಥಾ ಹಂದರದ, ಬರೀ ಎರಡೇ ಪಾತ್ರಗಳ ಸುತ್ತ ಹೆಣೆದ ಸುಧಾರಾಣಿ ನಿರ್ಮಾಣ ಹಾಗೂ ನಟನೆಯ “ಘೋಸ್ಟ್” ಕಿರು ಚಿತ್ರ

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ವಿಭಿನ್ನ ಕಥಾ ಹಂದರದ, ಬರೀ ಎರಡೇ ಪಾತ್ರಗಳ ಸುತ್ತ ಹೆಣೆದ ಸುಧಾರಾಣಿ ನಿರ್ಮಾಣ ಹಾಗೂ ನಟನೆಯ “ಘೋಸ್ಟ್” ಕಿರು ಚಿತ್ರ

ವಿಭಿನ್ನ ಕಥಾ ಹಂದರದ, ಬರೀ ಎರಡೇ ಪಾತ್ರಗಳ ಸುತ್ತ ಹೆಣೆದ ಸುಧಾರಾಣಿ ನಿರ್ಮಾಣ ಹಾಗೂ ನಟನೆಯ "ಘೋಸ್ಟ್" ಕಿರು ಚಿತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada