ಮೋದಿ (Narendra modi), ಅಮಿತ್ ಶಾ (Amith Sha) ರಾಜೀನಾಮೆ ಕೊಟ್ರೆ ನಾವೂ ಕೊಡಿಸ್ತೇವೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ರಾಜೀನಾಮೆಗೆ ದೋಸ್ತಿ ನಾಯಕರ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿದರು..

ಸಿಎಂ ರಾಜೀನಾಮೆ ಕೇಳುವ ಕುಮಾರಸ್ವಾಮಿ (HD Kumaraswamy) ಅವರಿಗೆ ನಾಚಿಕೆ ಆಗಬೇಕು. ಡಾ. ರಾಜ್‌ಕುಮಾರ್ ತೀರಿಕೊಂಡಾಗ 4 ಜನರಿಗೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ ಅಂತ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ (Gopala Krishna Beluru) ಪ್ರಶ್ನೆ ಮಾಡಿದ್ದಾರೆ.

ಡಾ. ರಾಜ್‌ಕುಮಾರ್ ತೀರಿಕೊಂಡಾಗ ನಾಲ್ಕು ಜನರಿಗೆ ಗುಂಡೇಟು ಹೊಡೆಸಿದ್ರು. ಕಂಠೀರವ ಸ್ಟುಡಿಯೋದಲ್ಲಿ ಆಗ ನಾನೂ ಇದ್ದೆ. ಆಗ ಕುಮಾರಸ್ವಾಮಿ ರಾಜೀನಾಮೆ ನೀಡಿದ್ರಾ..? ಹಾವೇರಿಯಲ್ಲಿ ರೈತರ ಮೇಲೆ ಬಿಎಸ್‌ವೈ ಗೋಲಿಬಾರ್ ಮಾಡಿಸಿದ್ರು, ರಾಜೀನಾಮೆ ನೀಡಿದ್ರಾ..? ಪಹಲ್ಗಾಮ್ ಉಗ್ರರ ದಾಳಿಯಲ್ಲಿ (Pahalgam Terror Attack) 26 ಮಂದಿ ಸತ್ರು, ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ಆಗಿ ಹಲವರು ಸತ್ರು. ಪ್ರಧಾನಿ ಮೋದಿ (Narendra modi), ಅಮಿತ್ ಶಾ (Amith Sha),ರಾಜೀನಾಮೆ ನೀಡಿದ್ರಾ..? ಮೋದಿ, ಶಾ ರಾಜೀನಾಮೆ ಕೊಡಿಸಲಿ, ನಾವೂ ಕೂಡ ಸಿಎಂ, ಡಿಸಿಎಂ ರಾಜೀನಾಮೆ ಕೊಡಿಸ್ತೀವಿ ಅಂತ ಹೇಳಿದ್ದಾರೆ.

ಇಂತಹ ಘಟನೆ ಆಗಬಾರದಿತ್ತು, ಆದ್ರೆ ಆಗಿಹೋಗಿದೆ. ಅದಕ್ಕೆ ಪೊಲೀಸ್ ಅಧಿಕಾರಿಗಳನ್ನ ಸಸ್ಪೆಂಡ್ ಮಾಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಯ ನೇಮಕ ಹಿಂಪಡೆಯಲಾಗಿದೆ. ಸಿಎಂ, ಡಿಸಿಎಂ ಇಬ್ರೂ ಚೆನ್ನಾಗಿ ಕೆಲಸ ಮಾಡ್ತಿದ್ದಾರೆ. ಇವೆಲ್ಲ ಆಕಸ್ಮಿಕ ಘಟನೆ, ನಾವೂ ಕೂಡ ನೋವಲ್ಲಿ ಇದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು ಎಂದು ಹೇಳಿದರು.

10 ಲಕ್ಷ ರೂ. ಪರಿಹಾರ ಸಾಕಾಗಲ್ಲ, ಕನಿಷ್ಠ 50 ಲಕ್ಷ ರೂ. ಕೊಡಬೇಕು. ನಾನೂ ಕೂಡ ಸರ್ಕಾರಕ್ಕೆ ಈ ಬಗ್ಗೆ ಒತ್ತಾಯ ಮಾಡ್ತೀನಿ. ಸತ್ತವರ ಕುಟುಂಬಸ್ಥರನ್ನ ಇಟ್ಕೊಂಡು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಮೋದಿ ರಾಜೀನಾಮೆ ಕೊಟ್ಟರೆ ನಾವೂ ರಾಜೀನಾಮೆ ಕೊಡಿಸುತ್ತೇವೆ. ಮೋದಿ, (Narendra modi), ಅಮಿತ್ ಶಾ (Amith Sha) ರಾಜೀನಾಮೆ ಕೊಡಿಸಲು ತಾಕತ್ತು ಇದ್ಯಾ? ಕುಂಭಮೇಳದಲ್ಲಿ ಎಷ್ಟು ಜನ ಸತ್ತರು? ಬೆಂಕಿ ಹಚ್ಚೋ ಕೆಲಸ ಮಾಡಬಾರದು ಅಂತ ತಿಳಿವಳಿಕೆ ನೀಡಿದ್ದಾರೆ.




