ಕೇಂದ್ರ ಸರ್ಕಾರ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು (Suhas shetty murder case) ಎನ್‌ಐಎ (NIA) ತನಿಖೆಗೆ ವಹಿಸಿರುವ ನಿರ್ಧಾರ ಸ್ವಾಗತಾರ್ಹ ಕ್ರಮವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟ್ವಿಟ್ ಮಾಡಿದ್ದಾರೆ.

ಕರಾವಳಿಯಲ್ಲಿ ಹಿಂದೂ ಸಮುದಾಯ ಆತಂಕ ಪಡುವ ಪರಿಸ್ಥಿತಿ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಭೀಕರವಾಗಿ ನಡು ರಸ್ತೆಯಲ್ಲಿ ಸುಹಾಸ್ ಕೊಲೆ ನಡೆದಿತ್ತು. ಈ ಕೇಸ್‌ನ ತನಿಖೆಯ ಹಾದಿ ಕಾಂಗ್ರೆಸ್ ಸರ್ಕಾರದ ಆಡಳಿತದ ನೆರಳಿನಲ್ಲಿ ದಿಕ್ಕು ತಪ್ಪುತ್ತಿದ್ದ ಪರಿ ಹಾಗೂ ನ್ಯಾಯದ ನಿರೀಕ್ಷೆಯಲ್ಲಿದ್ದ ಕುಟುಂಬಸ್ಥರ ನಿರೀಕ್ಷೆ ಕುಸಿಯುತ್ತಿದ್ದ ವೇಳೆ ಎನ್‌ಐಎಗೆ ವಹಿಸಿದೆ. ಎಂದು ವಿಜಯೃಂದ್ರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರ ಸುಹಾಸ್ ಶೆಟ್ಟಿ ಕೊಲೆಗಡುಕರಿಗೆ ಶಿಕ್ಷೆಯಾಗುವ ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳ ಷಡ್ಯಂತ್ರ ಬಯಲು ಮಾಡುವ ಭರವಸೆ ಹುಟ್ಟಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವಿಟ್ ಮಾಡಿದ್ದಾರೆ.











