ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದ ಭೀಕರ ವಿಮಾನ ದುರಂತ (Air India flight crash) ನಡೆದ ಸ್ಥಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ (Pm modi) ಭೇಟಿ ಕೊಟ್ಟು ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಈ ವೇಳೆ ವಿಮಾನ ಡಿಕ್ಕಿ ಹೊಡೆದ ಬಹು ಹಂತಸ್ತಿನ ಹಾಸ್ಟೆಲ್ ಕಟ್ಟಡ ಮತ್ತು ಸಂಪೂರ್ಣ ಘಟನೆಯ ಸ್ಥಳದಲ್ಲಿ ಕೆಲಕಾಲ ಅವಲೋಕಿಸಿದ್ರು. ಆ ಬಳಿಕ ಅಲ್ಲಿಂದ ನೇರವಾಗಿ ಗಾಯಾಳುಗಳನ್ನು ದಾಖಲಿಸಿರುವ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ ಖುದ್ದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 265 ಕ್ಕೆ ತಲುಪಿದ್ದು, ಈ ಪೈಕಿ 241 ಪ್ರಯಾಣಿಕರು ಹಾಗೂ ಹಾಸ್ಟೆಲ್ ನಲ್ಲಿದ್ದ 24 ವಿದ್ಯಾರ್ಥಿಗಳು ಸೇರಿದ್ದಾರೆ. ಎಲ್ಲಾ ಮೃತದೇಹಗಳು ಸುಟ್ಟು ಕರಕಲಾಗಿದ್ದು, ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇನ್ನು ದೇಹಗಳು ಸಂಪೂರ್ಣ ಸುಟ್ಟುಹೋಗಿದ್ದು, ಮೃತದೇಹಗಳ ಗುರುತು ಪತ್ತೆ ಹಚ್ಚುವುದು ಸವಾಲಿನ ಕೆಲಸವಾಗಿದ್ದು, ಇದಕ್ಕಾಗಿ ವೈದ್ಯಕೀಯ ಸಿಬ್ಬಂದಿ ಡಿ.ಎನ್.ಎ ಟೆಸ್ಟ್ ಮೊರೆ ಹೋಗಿದ್ದಾರೆ.