• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ- ಕರ್ನಾಟಕಕ್ಕೆ ಪ್ರಥಮ ಸ್ಥಾನ

ಪ್ರತಿಧ್ವನಿ by ಪ್ರತಿಧ್ವನಿ
June 15, 2025
in Top Story, ರಾಜಕೀಯ, ವಾಣಿಜ್ಯ
0
ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ- ಕರ್ನಾಟಕಕ್ಕೆ ಪ್ರಥಮ ಸ್ಥಾನ
Share on WhatsAppShare on FacebookShare on Telegram

ಪವನ ವಿದ್ಯುತ್‌ ವಲಯಕ್ಕೆ ವರ್ಷದಲ್ಲಿ 1331.48 ಮೆ.ವ್ಯಾ. ಸಾಮರ್ಥ್ಯದ ಸೇರ್ಪಡೆ ನಮ್ಮ ಬದ್ಧತೆಯ ಪ್ರತೀಕ: ಇಂಧನ ಸಚಿವ ಕೆ.ಜೆ.ಜಾರ್ಜ್‌

ADVERTISEMENT

ಹನುಮನ ನಾಡಿನಲ್ಲಿ ಪವನ ಶಕ್ತಿಯ ಸಾಧನೆ: ಪ್ರಲ್ಹಾದ್‌ ಜೋಶಿ ಶ್ಲಾಘನೆ

ಬೆಂಗಳೂರು, ಜೂನ್ 15, 2025: ರಾಜ್ಯವು 2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ಕ್ಷೇತ್ರಕ್ಕೆ 1331.48 ಮೆ.ವ್ಯಾ. ಸೇರ್ಪಡೆಗೊಳಿಸುವ ಮೂಲಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ‘ಗ್ಲೋಬಲ್ ವಿಂಡ್ ಡೇ’ 2025 “ಪವನ್-ಉರ್ಜಾ: ಪವರಿಂಗ್‌ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಪ್ರಶಸ್ತಿ ಸ್ವೀಕರಿಸಿದರು.

JDS Campaign: ಜೆಡಿಎಸ್‌ ಮುಗಿಸುವ ವ್ಯಕ್ತಿ ಹುಟ್ಟಲ್ಲ: ದೇವೇಗೌಡ್ರು #pratidhvani #hddevegowda #politics

2024-25ನೇ ಸಾಲಿನಲ್ಲಿ ಪವನ ವಿದ್ಯುತ್‌ ವಲಯಕ್ಕೆ 1331.48 ಮೆ.ವ್ಯಾ. ಸಾಮರ್ಥ್ಯ ಸೇಪರ್ಡೆಗೊಳಿಸಿರುವ ರಾಜ್ಯ ಪ್ರಥಮ ಸ್ಥಾನದಲ್ಲಿದ್ದರೆ, 1136.37 ಮೆ.ವ್ಯಾ. ಸಾಮರ್ಥ್ಯವನ್ನು ಸೇರ್ಪಡೆಗೊಳಿಸಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. 954.74 ಮೆ.ವ್ಯಾ ಸೇರ್ಪಡೆಗೊಳಿಸಿರುವ ಗುಜರಾತ್‌ ಮೂರನೇ ಸ್ಥಾನದಲ್ಲಿದೆ.

ಕಳೆದ ಸಾಲಿನಲ್ಲಿ ಗುಜರಾತ್‌ ಮೊದಲ ಸ್ಥಾನ, ಕರ್ನಾಟಕ ಎರಡನೇ ಸ್ಥಾನ ಹಾಗೂ ತಮಿಳುನಾಡು ಮೂರನೇ ಸ್ಥಾನದಲ್ಲಿತ್ತು. ಪ್ರಸಕ್ತ ಸಾಲಿನಲ್ಲಿ ಈ ಎರಡೂ ರಾಜ್ಯಗಳನ್ನು ಹಿಂದಿಕ್ಕಿ ಕರ್ನಾಟಕ ಅಗ್ರ ಸ್ಥಾನಕ್ಕೇರಿದೆ.

ವಿಶ್ವ ಪವನ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್‌,”2025ರ ಮೇ ವೇಳೆಗೆ ಪವನ ವಿದ್ಯುತ್ತಿನ ಸ್ಥಾಪಿತ ಸಾಮರ್ಥ್ಯ 7,351 ಮೆಗಾವ್ಯಾಟ್‌ನಷ್ಟಿತ್ತು. ಕಳೆದ ಆರ್ಥಿಕ ಸಾಲಿನಲ್ಲಿ 1,331 ಮೆಗಾವ್ಯಾಟ್‌ಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ ಅಗ್ರಮಾನ್ಯ ಸ್ಥಾನದಲ್ಲಿದ್ದೇವೆ,” ಎಂದು ತಿಳಿಸಿದರು.

“ಇದು ಕೇವಲ ಅಂಕಿ-ಅಂಶವಲ್ಲ. ನಮ್ಮ ಬದ್ಧತೆ, ಯೋಜನೆಗಳನ್ನು ಕಾರ್ಯಗತಗೊಳಿಸುವ ನಮ್ಮ ಸಾಮರ್ಥ್ಯದ ಪ್ರತೀಕ. ರಾಜ್ಯದ ಕೈಗಾರಿಕೆಗಳಿಗೆ, ನಮ್ಮ ರೈತರಿಗೆ, ಮನೆಗಳಿಗೆ ಶುದ್ಧ ಇಂಧನ ಒದಗಿಸುವ ಇಚ್ಛಾ ಶಕ್ತಿಯಾಗಿದೆ,” ಎಂದು ಹೇಳಿದರು.

“ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕರ್ನಾಟಕದ ಹೆಜ್ಜೆಗಳು ಹೊಸತೇನಲ್ಲ. 2009ರಲ್ಲಿ ನವೀಕರಿಸಬಹುದಾದ ಇಂಧನ ನೀತಿಯನ್ನು ಪ್ರಕಟಿಸಿದ ದೇಶದ ಮೊದಲ ರಾಜ್ಯ ನಮ್ಮದು. ನಾವು ಇಂದು ಈ ಎತ್ತರಕ್ಕೆ ಏರಲು ಅಂದೇ ಅಡಿಪಾಯ ಹಾಕಲಾಗಿತ್ತು. ನವೀಕರಿಸಬಹುದಾದ ಇಂಧನ ನೀತಿ 2022–2027 ನಮ್ಮ ದೂರದೃಷ್ಟಿಯ ಪ್ರತೀಕ. ಕೇವಲ ಸಾಮರ್ಥ್ಯ ಸೇರ್ಪಡೆ ಮಾತ್ರವಲ್ಲದೇ, ನಾವೀನ್ಯತೆ, ಹೂಡಿಕೆ ಮತ್ತು ಸಮಗ್ರ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರೂಪಿಸಲಾದ ನೀತಿ ಇದು. ಐಎಸ್‌ಟಿಎಸ್‌ ಮತ್ತು ಐಎನ್‌ಎಸ್‌ಟಿಎಸ್‌ ಯೋಜನೆಗಳು, ಹೈಬ್ರಿಡ್ ಮಾದರಿಗಳು, ಹಳೆಯ ಟರ್ಬೈನ್‌ಗಳಿಗೆ ಮರುಶಕ್ತಿ ತುಂಬುವುದು ಸೇರಿದಂತೆ ಡಿಜಿಟಲೀಕರಣ ಮತ್ತು ಜಿಯೋ-ಟ್ಯಾಗಿಂಗ್ ಮೂಲಕ ಸುಲಲಿತ ವ್ಯವಹಾರವನ್ನು ಬೆಂಬಲಿಸುತ್ತಿದೆ,” ಎಂದು ವಿವರಿಸಿದರು.

“ಕೇಂದ್ರ ಸರ್ಕಾರವು 2030ರ ವೇಳೆಗೆ 500 ಗಿಗಾವ್ಯಾಟ್‌ಗಳಷ್ಟು ನವೀಕರಿಸಬಹುದಾದ ಇಂಧನ ಸಾಮರ್ಥ್ಯದ ಗುರಿ ಹೊಂದಿದ್ದು, ಪವನ ಶಕ್ತಿಯಿಂದಲೇ 100 ಗಿಗಾವ್ಯಾಟ್‌ಗಳಷ್ಟು ವಿದ್ಯುತ್‌ ಉತ್ಪಾದಿಸುವ ಗುರಿ ಹೊಂದಿದೆ.ಈ ಗುರಿ ಸಾಧನೆಗೆ ಕರ್ನಾಟಕ ಬದ್ಧವಾಗಿದ್ದು, 17 ಗಿಗಾವ್ಯಾಟ್‌ ಪವನ ಶಕ್ತಿ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ ನಡೆದಿದೆ. ನವೀಕರಿಸಬಹುದಾದ ಇಂಧನ ಕ್ಲಸ್ಟರ್‌ ಕಾರ್ಯಕ್ರಮದಡಿ, 5 ಗಿಗಾವ್ಯಾಟ್‌ಗಿಂತ ಹೆಚ್ಚು ಪವನ ವಿದ್ಯುತ್‌ ಸಾಮರ್ಥ್ಯ ಸೇರ್ಪಡೆಗೊಳಿಸಲಿದ್ದೇವೆ. ಇದನ್ನು ಸಾಧ್ಯವಾಗಲಿಸಲು 20ಕ್ಕೂ ಹೆಚ್ಚು ಸಬ್‌ ಸ್ಟೇಷನ್‌ಗಳು, 400 ಕೆ.ವಿ. ಕಾರಿಡಾರ್‌ಗಳು ಹಾಗೂ ನವೀಕರಿಸಬಹುದಾದದ ಇಂಧನದ ಮೀಸಲು ವಲಯ ಮುಂತಾದ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುತ್ತಿದ್ದೇವೆ,” ಎಂದು ಮಾಹಿತಿ ನೀಡಿದರು.

Energy Minister KJ George :ಸಚಿವ ಕೆ ಜೆ ಜಾರ್ಜ್‌ ಮಹತ್ವದ ಹೆಜ್ಜೆ....  #pratidhvani #windenergy #kjgeorge

“ಕರ್ನಾಟಕವು ಜಾಗತಿಕ ಮಟ್ಟದಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವುದರಲ್ಲೂ ಮುಂಚೂಣಿಯಲ್ಲಿದ್ದು, ಹೂಡಿಕೆದಾರರಿಗೆ ರಾಜ್ಯದ ಬಗ್ಗೆ ಇರುವ ವಿಶ್ವಾಸವನ್ನು ಇದು ಎತ್ತಿ ತೋರಿಸುತ್ತದೆ. 2025ರ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ ನವೀಕರಿಸಬಹುದಾದ ಇಂಧನ ವಲಯಕ್ಕೆ 4 ಲಕ್ಷ ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತದ ಹೂಡಿಕೆ ಒಪ್ಪಂದಗಳಾಗಿವೆ. ಇದು ರಾಜ್ಯವು ಪಡೆದುಕೊಂಡಿರುವ ಒಟ್ಟು ಹೂಡಿಕೆಯ ಸುಮಾರು ಶೇ.40 ರಷ್ಟು,” ಎಂದರು.

ಹನುಮನ ನಾಡಿನಲ್ಲಿ ಪವನ ಶಕ್ತಿಯ ಸಾಧನೆ: ಪ್ರಲ್ಹಾದ್‌ ಜೋಶಿ

ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ,”ಕರ್ನಾಟಕದವನಾಗಿ ರಾಜ್ಯ ಪವನ ವಿದ್ಯುತ್‌ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಬಗ್ಗೆ ನನಗೆ ಅಪಾರ ಹೆಮ್ಮೆ ಇದೆ. ಇದು ಹನುಮನ ಜನ್ಮ ಭೂಮಿ. ಇಲ್ಲಿ ವಿಶ್ವ ಪವನ ದಿನ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ,” ಎಂದರು.

“ಪವನ ವಿದ್ಯುತ್ ಸಾಮರ್ಥ್ಯದಲ್ಲಿ ಭಾರತ ಜಾಗತಿಕವಾಗಿ 4ನೇ ಸ್ಥಾನದಲ್ಲಿದ್ದು, 51.5 ಗಿಗಾವ್ಯಾಟ್‌ ಸಾಮರ್ಥ್ಯವನ್ನು ಈಗಾಗಲೇ ಸ್ಥಾಪಿಸಲಾಗಿದೆ. 2030ರ ವೇಳೆಗೆ ಒಟ್ಟಾರೆ ವಿದ್ಯುತ್‌ ಉತ್ಪಾದನೆಯಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಶೇ. 50ಕ್ಕೆ ಏರಿಸುವ ಜತೆಗೆ 2070ರ ವೇಳೆಗೆ ಇಂಗಾಲದ ಹೊರಸೂಸುವಿಕೆ ನಿವ್ವಳ ಶೂನ್ಯದ ಗುರಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಪವನ ವಿದ್ಯುತ್‌ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ,”ಎಂದರು.

“2030ರ ವೇಳೆಗೆ 500 ಗಿಗಾ ವ್ಯಾಟ್‌ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸ್ಥಾಪಿಸಲು ನಾವು ಬದ್ಧರಾಗಿದ್ದು. ಈ ಪೈಕಿ 30 ಗಿಗಾವ್ಯಾಟ್‌ ಕಡಲಾಚೆಯ ಪವನ ಶಕ್ತಿಯೂ ಸೇರಿ ಒಟ್ಟು 100 ಗಿಗಾವ್ಯಾಟ್‌ ಪವನ ವಿದ್ಯುತ್‌ ಕ್ಷೇತ್ರದ್ದಾಗಿರಲಿದೆ. ದೇಶೀಯ ನಿಯೋಜನೆ ಮಾತ್ರವಲ್ಲದೇ ಜಾಗತಿಕ ಶುದ್ಧ ಇಂಧನ ಪೂರೈಕೆ ಸರಪಳಿಗಳ ಭಾಗವಾಗಿಯೂ ದೇಶ ದೃಢ ಹೆಜ್ಜೆ ಇರಿಸಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತವು 3.5 ರಿಂದ 4 ಗಿ.ವ್ಯಾ. ಪವನ ಟರ್ಬೈನ್‌ಗಳು ಮತ್ತು ಘಟಕಗಳನ್ನು ರಫ್ತು ಮಾಡಿದೆ,”ಎಂದರು

ಪಂಪ್ಡ್‌ ಸ್ಟೋರೇಜ್‌ಗೆ ಒತ್ತು ನೀಡಬೇಕು
ಸದ್ಯದ ಮೂರು ಪ್ರಮುಖ ಸವಾಲುಗಳನ್ನು ಎದುರಿಸಲು ನಾವು ಸಜ್ಜಾಗಬೇಕು. ಮೊದಲನೆಯದಾಗಿ, ದಿನದ 24 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮತ್ತು ಗ್ರಿಡ್ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸೌರ ಹಾಗೂ ಪವನ ವಿದ್ಯುತ್ ಉತ್ಪಾದನೆ ಜತೆಗೆ ಸಂಗ್ರಹಣೆಯನ್ನು ಸಂಯೋಜಿಸಬೇಕು ಅದಕ್ಕಾಗಿ, ಪಂಪ್ಡ್‌ ಸ್ಟೋರೇಜ್‌ನಂಥ ವ್ಯವಸ್ಥೆಗೆ ಒತ್ತು ನೀಡಬೇಕು. ಎರಡನೆಯದಾಗಿ, ವಿದ್ಯುತ್‌ ದರ ಸ್ಪರ್ಧಾತ್ಮಕವಾಗಿರಬೇಕು. ಮೂರನೆಯದಾಗಿ, ದೇಶೀಯ ಉತ್ಪಾದನೆಯಲ್ಲದೇ, ರಫ್ತು ಹೆಚ್ಚಳಕ್ಕೂ ಆದ್ಯತೆ ನೀಡಬೇಕು,”ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

ಇದೇ ವೇಳೆ, ‘ರ‍್ಯಾಂಪಿಂಗ್‌ಅಪ್‌ ಲೋಕಲ್‌ ಮ್ಯಾನುಫ್ಯಾಕ್ಚರಿಂಗ್‌ ಫಾರ್‌ ವಿಂಡ್‌ ಟರ್ಬೈನ್ಸ್‌ ಇನ್‌ ಇಂಡಿಯಾ’ವರದಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್, ನವ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ಕಾರ್ಯದರ್ಶಿ ಸಂತೋಷ್‌ ಕುಮಾರ್ ಸಾರಂಗಿ, ಕ್ರೆಡಲ್‌ ಅಧ್ಯಕ್ಷ ಟಿ.ಡಿ.ರಾಜೇಗೌಡ, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಮತ್ತಿತ್ತರರು ಉಪಸ್ಥಿತರಿದ್ದರು.

H Vishwanath : ಸಿದ್ರಾಮಯ್ಯ ಮುಖ ಮುಚ್ಕೊಂಡು ಬಂದ್ರಿ  #pratidhvani

ಕೋಟ್‌:
“ಪವನ ವಿದ್ಯುತ್‌ ವಲಯದಲ್ಲಿನ ಕರ್ನಾಟಕದ ಈ ಸಾಧನೆ ಕೇವಲ ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ಪ್ರಸ್ತುತವಾಗಿದೆ. ರಾಜ್ಯದ ಪವನ ವಿದ್ಯುತ್‌ ಸಾಮರ್ಥ್ಯವು ದಕ್ಷಿಣ ಆಫ್ರಿಕಾ, ಪೋರ್ಚುಗಲ್, ನ್ಯೂಜಿಲೆಂಡ್‌ನಂತಹ ದೇಶಗಳ ಒಟ್ಟು ಪವನ ವಿದ್ಯುತ್‌ ಸಾಮರ್ಥ್ಯಕ್ಕಿಂತ ಹೆಚ್ಚಾಗಿದೆ. ಸ್ವೀಡನ್ ಮತ್ತು ಆಸ್ಟ್ರೇಲಿಯಾದ ಪವನ ವಿದ್ಯುತ್‌ ಸಾಮರ್ಥ್ಯಕ್ಕೆ ಹತ್ತಿರವಾಗಿದೆ”.

ಗೌರವ್‌ ಗುಪ್ತ, ಅಪರ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ

Tags: artemis intelligent powerenergyministergreat one grindgrindK J Georgekj reportskj vidskjgeorgeleo kindergartenersoffshore powerpower plantspowered paragliderpowerminterred deer grind cotwsaint georgesaint george utahst georgest george and st shenoudast george and the dragonst george brooklynst george island floridast george racesst george utahst george vs ethiopian coffeethrowingtucker gott
Previous Post

ವಿರೋಧಿಗಳಿಗೆ ಹೆಚ್.ಡಿ.ದೇವೇಗೌಡರ ತಿರುಗೇಟು

Next Post

ಎಲ್ಲಾ ಸಣ್ಣ ಸಣ್ಣ ಸಮಾಜಗಳೂ ಆರ್ಥಿಕವಾಗಿ ಮೇಲೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
ಎಲ್ಲಾ ಸಣ್ಣ ಸಣ್ಣ ಸಮಾಜಗಳೂ ಆರ್ಥಿಕವಾಗಿ ಮೇಲೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ

ಎಲ್ಲಾ ಸಣ್ಣ ಸಣ್ಣ ಸಮಾಜಗಳೂ ಆರ್ಥಿಕವಾಗಿ ಮೇಲೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada