ತೆಲುಗು ಚಿತ್ರರಂಗದ ಪವರ್ ಸ್ಟಾರ್ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿ ಗದ್ದುಗೇರಿದ ಮೇಲೆ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಬಹಳ ದಿನಗಳಿಂದ ಬಳಿಕ ಸಿನಿಮಾ ಕಡೆ ಮುಖ ಮಾಡಿದ್ದಾರೆ. ಇದೀಗ ಪವನ್ ಕಲ್ಯಾಣ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅವರು ನಟಿಸಿರುವ ಬಹುನಿರೀಕ್ಷಿತ ಸಿನಿಮಾ ʼಹರಿ ಹರ ವೀರ ಮಲ್ಲುʼ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ರಿಲೀಸ್ ಡೇಟ್ ಘೋಷಣೆಯಾಗಿದೆ.

ಹರಿ ಹರ ವೀರ ಮಲ್ಲು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಸಿನಿಪ್ರಿಯರಿಗೆ ಇಷ್ಟವಾಗಿವೆ. ಬಿಗ್ ಬಜೆಟ್ ತಯಾರಾಗಿರುವ ಹರಿ ಹರ ವೀರ ಮಲ್ಲು ಸಿನಿಮಾ ಜುಲೈ 24ರಂದು ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಬಿಡುಗಡೆಯಾಗಲಿದೆ.

ಹರಿ ಹರ ವೀರ ಮಲ್ಲುವಾಗಿ ಪವನ್ ಕಲ್ಯಾಣ್ (Pawan Kalyan as Hari Hara Veera Mallu) ಸಿನಿಮಾದಲ್ಲಿ ಅಬ್ಬರಿಸಿದ್ದಾರೆ. 17ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ವಿರುದ್ಧ ಹೋರಾಡಿದ ನಾಯಕನಾಗಿ ಪವರ್ ಸ್ಟಾರ್ ಮಿಂಚಿದ್ದಾರೆ. 300 ವರ್ಷಗಳ ಹಿಂದಿನ ಕಾಲಘಟ್ಟ ಕಟ್ಟಿಕೊಡಲು ಚಿತ್ರತಂಡ ಬಹಳ ಶ್ರಮಿಸಿದೆ. ವೀರಮಲ್ಲು ಆಗಿ ಪವನ್ ಕಲ್ಯಾಣ್ (Pawan Kalyan) ಲುಕ್, ಗೆಟಪ್ ಭರವಸೆ ಮೂಡಿಸಿದೆ. ಜ್ಯೋತಿ ಕೃಷ್ಣ (Jyothi Krishna) ಮತ್ತು ಕ್ರಿಶ್ ಜಗರ್ಲಮುಡಿ ನಿರ್ದೇಶನದಲ್ಲಿ ಪ್ಯಾನ್ ಇಂಡಿಯಾ (Pan India Movie) ಮಟ್ಟದಲ್ಲಿ ಚಿತ್ರ ಮೂಡಿಬಂದಿದೆ.

ಚಿತ್ರದಲ್ಲಿ ನಿಧಿ ಅಗರ್ವಾಲ್ (Nidhi Agarwal) ನಾಯಕಿಯಾಗಿ ಮಿಂಚಿದ್ದಾರೆ. ಇನ್ನುಳಿದಂತೆ ಬಾಬಿ ಡಿಯೋಲ್(Babi Diol), ನರ್ಗೀಸ್ ಫಕ್ರಿ(Nargis Fakri), ಆದಿತ್ಯಾ ಮೆನನ್(Adhithya Menon), ಶುಭಲೇಖ ಸುಧಾಕರ್(Shubhalekha Sudhakar) ತಾರಾಗಣದಲ್ಲಿದ್ದಾರೆ. ರೋಚಕ ಯುದ್ಧದ ಸನ್ನಿವೇಶಗಳು ಚಿತ್ರದಲ್ಲಿದೆ. ಮೆಗಾ ಸೂರ್ಯ ಪ್ರೊಡಕ್ಷನ್ಸ್ (Megha Surya Production) ಬ್ಯಾನರ್ನಲ್ಲಿ ಎ. ದಯಾಕರ್ ರಾವ್ (A Dayakar Rao) ಈ ಚಿತ್ರವನ್ನು ನಿರ್ಮಿಸಿದ್ದು, ಎ.ಎಂ. ರತ್ನಂ (AM Rathnam) ಪ್ರಸ್ತುತಪಡಿಸುತ್ತಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನ(MM Kiravani Musiq Direction) , ಮನೋಜ್ ಪರಮಹಂಸ (Manoj Paramahamsa) ಛಾಯಾಗ್ರಹಣ ಚಿತ್ರಕ್ಕಿದೆ.




