ರೀಲ್ಸ್ ಅಪ್ಲೋಡ್ ವಿಚಾರವಾಗಿ ಪ್ರೇಮಿಗಳ ನಡುವೆ ಜಗಳ ಉಂಟಾಗಿ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

ಚೈತನ್ಯ (22) ಮೃತ ಯುವತಿ. ತುಮಕೂರು ಗ್ರಾಮಾಂತರದ ಹೊಸಹಳ್ಳಿಯ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತಿದ್ದಳು. ಪಕ್ಕದ ಊರಿನ ವಿಜಯ್ ಹಾಗೂ ಚೈತನ್ಯ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು.

ಸೋಮವಾರ ಚೈತನ್ಯ ರೀಲ್ಸ್ವೊಂದನ್ನು ಸ್ಟೇಟಸ್ನಲ್ಲಿ ಅಪ್ಲೋಡ್ ಮಾಡಿದ್ದಳು. ಇದೇ ವಿಚಾರವಾಗಿ ಪ್ರಶ್ನಿಸಲು ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದ. ಆಗ ಚೈತನ್ಯ ತಾಯಿ ಸೌಭಾಗ್ಯಮ್ಮ ರೂಂನಲ್ಲಿ ಇದ್ದರು. ತಾಯಿ ಇದ್ದ ರೂಂ ಬಾಗಿಲಿನ ಚಿಲಕ ಹಾಕಿ ಕಿಟಕಿ ಬಳಿ ಇಬ್ಬರು ಜಗಳವಾಡಿದ್ದಾರೆ. ಆ ಬಳಿಕ ಚೈತನ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ವಿಚಾರವನ್ನು ವಿಜಯ್ ಚೈತನ್ಯ ಸಂಬಂಧಿಗೆ ಕರೆ ಮಾಡಿ ತಿಳಿಸಿದ್ದಾನೆ.

ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ ಕಾರಣ ಎಂದು ದೂರು ದಾಖಲಾಗಿದ್ದು, ವಿಜಯ್ನನ್ನು ತುಮಕೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.