ದೆಹಲಿ (Delhi) ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ (Cm siddaramaiah) ಇಂದು ತಮ್ಮ ಪಕ್ಷದ ವರಿಷ್ಠರನ್ನು ಭೇಟಿಯಾಗಲಿದ್ದು, ರಾಜ್ಯ ಕಾಂಗ್ರೆಸ್ ಪಾಳಯದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ. ಹೀಗಾಗಿ ಮೊದಲಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (KC Venugopal) ರನ್ನ ಸಿಎಂ ಭೇಟಿ ಮಾಡಲಿದ್ದಾರೆ.

ಇಂದು ಬೆಳಗ್ಗೆ ೧೧.೩೦ರ ಸುಮಾರಿಗೆ ವೇಣುಗೋಪಾಲ್ ರನ್ನ ದೆಹಲಿಯಲ್ಲಿ ಭೇಟಿ ಮಾಡಲಿರುವ ಸಿದ್ದರಾಮಯ್ಯ ಕೆಲವು ಪ್ರಮುಖ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಸ್ತುವಾರಿ ಸುರ್ಜೇವಾಲಾ ಜೊತೆ ಚರ್ಚೆ ನಡೆಸಿರುವ ಸಿಎಂ,ಇಂದು ಕೆ.ಸಿ ವೇಣುಗೋಪಾಲ್ ರನ್ನ ಭೇಟಿ ಮಾಡಿ ರಾಜ್ಯ ರಾಜಕೀಯ ಕುರಿತು ಚರ್ಚಿಸಲಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಬಿ.ಆರ್ ಪಾಟೀಲ್ ವಸತಿ ಯೋಜನೆ ಕುರಿತು ಮಾಡಿರುವ ಆರೋಪ, ಇತರೆ ಕೆಲವು ಶಾಸಕರ ಬಹಿರಂಗ ಹೇಳಿಕೆಗಳು ಸೇರಿದಂತ್ರ ಪರಿಷತ್ ಸ್ಥಾನಗಳ ನೇಮಕ ಕುರಿತು ಸಿಎಂ ಚರ್ಚಿಸಲಿದ್ದಾರೆ.ನಂತರ ರಾತ್ರಿ ಮೂರು ದಿನಗಳ ದೆಹಲಿ ಪ್ರವಾಸ ಮುಗಿಸಿ ಬೆಂಗಳೂರಿಗೆ ಸಿಎಂ ವಾಪಸ್ಸಾಗಲಿದ್ದಾರೆ.