• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

K.V Prabhakar: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ಗ್ರಹಿಸುತ್ತದೆ: ಕೆ.ವಿ.ಪಿ

ಪ್ರತಿಧ್ವನಿ by ಪ್ರತಿಧ್ವನಿ
June 26, 2025
in Top Story, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್, ಸ್ಟೂಡೆಂಟ್‌ ಕಾರ್ನರ್
0
Share on WhatsAppShare on FacebookShare on Telegram

ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ.
ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇದೆ.
ಪತ್ರಕರ್ತರಾಗುವವರಿಗೆ ಮಾತಿಗೆ ಮೊದಲು‌ ನೋಟ ಮುಖ್ಯ.
ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ.

ADVERTISEMENT

ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ.
ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ‌ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ -2025” ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ ಮಾಧ್ಯಮ ಹಬ್ಬದಲ್ಲಿ ಭಾಗವಹಿಸುತ್ತಿರುವುದು ನನಗೆ ಹೆಮ್ಮೆ ಮತ್ತು ಸಂತೋಷದ ವಿಚಾರ.

ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿಯೊಂದು ಮಗುವೂ ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ.

ಮಾನ್ಯ ಮುಖ್ಯಮಂತ್ರಿ‌ ಸಿದ್ದರಾಮಯ್ಯ (CM Siddaramaiah) ಅವರು ಪದೇ ಪದೇ ಕುವೆಂಪು ಅವರ ಒಂದು ಮಾತನ್ನು ನೆನಪಿಸಿಕೊಳ್ಳುತ್ತಾರೆ. “ಮಗು ಹುಟ್ಟುವಾಗ ವಿಶ್ವ ಮಾನವನಾಗಿ ಹುಟ್ಟುತ್ತದೆ. ಬೆಳೆಯುತ್ತಾ ಅಲ್ಪ ಮಾನವನನ್ನಾಗಿ ಮಾಡಲಾಗುತ್ತದೆ”.

ಪತ್ರಕರ್ತರಾಗುವವರು ಪೂರ್ವಾಗ್ರಹ ಮುಕ್ತ ಮಗುವಿನ ಮನಸ್ಸಿನಿಂದ ಸಾಮಾಜಿಕ ವ್ಯವಸ್ಥೆಯನ್ನು, ಸಾಮಾಜಿಕ ತಾರತಮ್ಯಗಳನ್ನು ಇರುವುದನ್ನು ಇರುವ ಹಾಗೆ ಗಮನಿಸಬೇಕು. ಹೀಗಾದಾಗ ಮಾತ್ರ ಸಾಮಜಿಕ‌ ಸಮಸ್ಯೆಗಳು ಮತ್ತು ಈ ಸಮಸ್ಯೆಗಳಿಗೆ ಕಾರಣವಾದ ಸಂಗತಿಗಳ ಬಗ್ಗೆ ಸ್ಪಷ್ಟ ಗ್ರಹಿಕೆ ಬರುತ್ತದೆ. ಈ ಸ್ಪಷ್ಟತೆಯೇ ಪರಿಣಾಮಕಾರಿ ಪತ್ರಕರ್ತನನ್ನು ರೂಪಿಸುತ್ತದೆ. ಇದರಿಂದಾಗಿ ಅಭಿವೃದ್ಧಿ ಪತ್ರಿಕೋದ್ಯಮಕ್ಕೆ ಹೆಚ್ಚು ಅನುಕೂಲ ಮತ್ತು ಮಹತ್ವ ಸಿಗುತ್ತದೆ ಎಂದರು.

ಇತ್ತೀಚಿನ ದಶಕಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ತಂತ್ರಜ್ಞಾನದ ಕಾರಣಕ್ಕೆ ಕ್ರಾಂತಿಕಾರಿ ಬದಲಾವಣೆಗಳು ಸಂಭವಿಸುತ್ತಿವೆ. ಮುದ್ರಣ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮವನ್ನೂ ದಾಟಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕಡೆಗೆ ಧಾವಿಸಿ ಬಂದಿದ್ದೇವೆ. ಈ ಬದಲಾವಣೆಯು ಮಾಹಿತಿ ಹರಿವಿನ ವೇಗವನ್ನು ಹೆಚ್ಚಿಸಿದೆ, ಆದರೆ ಅದೇ ವೇಳೆ ಸುಳ್ಳು ಸುದ್ದಿ, clickbait, ದ್ವೇಷ ಭಾಷೆ ಇತ್ಯಾದಿಗಳ ಹೊಸ ಹೊಸ ಸವಾಲುಗಳನ್ನೂ, ಅಪಾಯಗಳನ್ನೂ ಮನುಷ್ಯ ಜಗತ್ತಿನ ಮುಂದಿಟ್ಟಿದೆ. ಇಂತಹ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಮಾಧ್ಯಮ ಶಿಕ್ಷಣವು ನೈತಿಕತೆ ಮತ್ತು ಜವಾಬ್ದಾರಿಯನ್ನೂ ಜೊತೆಗೆ ಕಲಿಸಬೇಕಾಗಿದೆ.

ಮೊದಲು ಸತ್ಯ, ನಂತರ ವೇಗ ಎಂಬ ನುಡಿಯು ಈಗ ಇನ್ನೂ ಹೆಚ್ಚು ಪ್ರಸ್ತುತವಾಗಿದೆ. Chat GPT ಇರಬಹುದು ಅಥವಾ AI ಯುಗದಲ್ಲಿ ನಿಮ್ಮತನವನ್ನು ಕಳೆದುಕೊಳ್ಳದೆ ಕಾರ್ಯನಿರ್ವಹಿಸಿದರೆ, ಕೃತಕತೆ ಇಲ್ಲದ ಯಶಸ್ಸು ಸಾಧ್ಯ. ಇದನ್ನು ಸಾಧಿಸಲು ಶಿಕ್ಷಣ ಮತ್ತು ತರಬೇತಿಯ ಅಗತ್ಯತೆ ಇದೆ. ಪ್ರತಿಯೊಬ್ಬ ಮಾಧ್ಯಮ ವಿದ್ಯಾರ್ಥಿಗೆ ನಿಖರ ಮಾಹಿತಿ ಸಂಗ್ರಹಣೆ, ಬೋಧನೆಯ ಶೈಲಿ, ವಿಶ್ಲೇಷಣಾತ್ಮಕ ದೃಷ್ಟಿಕೋನ ಹಾಗೂ ಸಮಾಜದ ಅಸಮಾನತೆಗಳನ್ನು ಗುರುತಿಸುವ ನೈತಿಕ ಬದ್ಧತೆ ಅತ್ಯಗತ್ಯ. ಮಾಧ್ಯಮ ಇಂದಿನ ಕಾಲದಲ್ಲಿ ಕೇವಲ ಸುದ್ದಿಯನ್ನು ನೀಡುವುದಲ್ಲ. ಇವು ಆಲೋಚನೆಗಳನ್ನು, ಅಭಿಪ್ರಾಯಗಳನ್ನು ರೂಪಿಸುವ ಶಕ್ತಿಯನ್ನೂ ಹೊಂದಿವೆ. ಈ ಕಾರಣಕ್ಕಾಗಿಯೇ ಮಾಧ್ಯಮಗಳನ್ನು opinion makers ಎಂದು ಪರಿಗಣಿಸಲಾಗುತ್ತಿದೆ.

ನಮ್ಮ ಸರ್ಕಾರ ಮಾಧ್ಯಮ ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದೆ. ಮಾಧ್ಯಮ ಅಕಾಡೆಮಿಯ ಮೂಲಕ ತರಬೇತಿ ಶಿಬಿರಗಳು, ಸಂವಾದ ಸಭೆಗಳು, ಗ್ರಾಮೀಣ ಪತ್ರಕರ್ತರ ಪ್ರೋತ್ಸಾಹ, ಡಿಜಿಟಲ್ ಮಾಧ್ಯಮ ತರಬೇತಿ ಶಿಬಿರಗಳನ್ನು ಆಯೋಜಿಸುವ ಮೂಲಕ ಸತ್ಯನಿಷ್ಠ ಸಮಾಜಮುಖಿ ಪತ್ರಕರ್ತರನ್ನು ರೂಪಿಸುವ ದಿಕ್ಕಿನಲ್ಲಿ ಪ್ರಯತ್ನಿಸುತ್ತಿದೆ. ನೀವು ಪತ್ರಿಕೋದ್ಯಮವನ್ನು ವೃತ್ತಿಯಾಗಿ ಆಯ್ಕೆ ಮಾಡುತ್ತಿದ್ದರೆ, ಇದು ಕೇವಲ ಉದ್ಯೋಗವಲ್ಲ. ಇದು ಸಮಾಜದ ಧ್ವನಿ ಆಗುವ, ಧ್ವನಿ ಇಲ್ಲದವರ ಮಾತುಗಳನ್ನು ಎತ್ತಿ ಹಿಡಿಯುವ, ಮತ್ತು ಅಧಿಕಾರದ ಎದುರು ಸತ್ಯವನ್ನು ಹೇಳುವ ಧೈರ್ಯದ ಮಾರ್ಗ ಮತ್ತು ಮಾಧ್ಯಮ ಎನ್ನುವುದನ್ನು ನೆನಪಿನಲ್ಲಿಡಬೇಕು.

ಪ್ರೀತಿಯ ವಿದ್ಯಾರ್ಥಿಗಳೇ, ಕಲಿಕೆಯ ದಿನಗಳಲ್ಲಿ ಸೃಜನಶೀಲತೆ, ಅಧ್ಯಯನಶೀಲತೆ ಸಂಶೋಧನಾ ಮನೋಭಾವ, ಮತ್ತು ಸಾಮಾಜಿಕ ಜವಾಬ್ದಾರಿಯ ಚಿಂತನೆಯನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದರು. ತುಮಕೂರು ವಿಶ್ವ ವಿದ್ಯಾಲಯ ಆಯೋಜಿಸಿರುವ ಈ ಮಾಧ್ಯಮ ಹಬ್ಬವು ಮಾಧ್ಯಮ ಕ್ಷೇತ್ರದಲ್ಲಿ ಪ್ರಜ್ಞಾವಂತ ಯುವ ಪ್ರತಿಭೆಗಳ ಹುಟ್ಟಿಗೆ ವೇದಿಕೆಯಾಗಲಿ ಎಂದು ಆಶಿಸುತ್ತೇನೆ ಎಂದರು.

ತುಮಕೂರು ವಿವಿ ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶ ಖಾನಂ, ಕಾರ್ಯದರ್ಶಿ ಸಹನಾ ಎಂ, ಪ್ರಜಾ ಪ್ರಗತಿ ಸಂಪಾದಕಾದ ನಾಗಣ್ಣ, ಸಿಂಡಿಕೇಟ್ ಸದಸ್ಯರಾದ ಮನೋಜ್, ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಡಾ.ಸತೀಶ್ ಗೌಡ, ವಿವಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ದಾಕ್ಷಾಯಿಣಿ ಅವರು ಉಪಸ್ಥಿತರಿದ್ದರು.

SSLC ಯಿಂದಲೇ ಸೆಳೆತ

ನನಗೆ SSLC ಯಿಂದಲೇ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಳ್ಳುವ ಅವಕಾಶ ಸಿಕ್ಕಿದೆ. ನಾನು ಲಿಫ್ಟ್ ಹತ್ತಿಕೊಂಡು ಪತ್ರಿಕಾವೃತ್ತಿಯಲ್ಲಿ ಬೆಳೆಯಲಿಲ್ಲ. ಪತ್ರಿಕೆ ಹಂಚುವ ಕೆಲಸದಿಂದ ಆರಂಭಿಸಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಆಗುವ ಮಟ್ಟಕ್ಕೆ ಬೆಳೆದೆ ಎಂದು ತಮ್ಮ ಬೆಳವಣಿಗೆಯನ್ನು ಸ್ಮರಿಸಿದರು. ಪ್ರಶ್ನೆ ಕೇಳುವ ಮೊದಲು ಅಧ್ಯಯನ ಅಗತ್ಯ ಪತ್ರಕರ್ತರು ಪ್ರಶ್ನೆ ಕೇಳುವುದನ್ನು ಬಿಡಬಾರದು ಆದರೆ, ಪ್ರಶ್ನೆ ಮಾಡುವ ಮೊದಲು ಆ ವಿಷಯದ ಬಗ್ಗೆ ಅಧ್ಯಯನ ನಡೆಸಿರಬೇಕು. ವಾಪಾಸ್ ಪ್ರಶ್ನೆ ಕೇಳಿದರೆ ಪತ್ರಕರ್ತರು ಮುಖ ಮುಖ ನೋಡಬಾರದು. ಊಹಾ ಪತ್ರಿಕೋದ್ಯಮಕ್ಕೆ ಜೋತು ಬಿದ್ದರೆ ಅಧ್ಯಯನಶೀಲತೆ ಬೆಳೆಯುವುದಿಲ್ಲ ಎಂದರು.

Tags: Ayesha KhanamCM SiddaramaiahDK ShivakumarDr. DakshayiniDr. Sathish GowdaK V PrabhakarManojNagannaPraja PragathiSahana MTumkur University
Previous Post

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಸಿಂಧನೂರು

Next Post

BJP: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಗ್‌ ಫೈಟ್..!‌

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

BJP: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿಗ್‌ ಫೈಟ್..!‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada